ಕೊಪ್ಪಳ[ಸೆ. 02]  ಪ್ರವಾಹದ ಆತಂಕ ದೂರವಾಯಿತು ಎಂದು ನಿಟ್ಟುಸಿರು ಬಿಡುತ್ತಿರುವಾಗಲೆ ರೈತರ ಜಮೀನಿಗೆ  3000 ಕ್ಯೂಸೆಕ್ ನೀರು ನುಗ್ಗುತ್ತಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಿರುಕು ಮೂಡಿರುವುದು ಆತಂಕ ಹೆಚ್ಚು ಮಾಡಿದೆ.

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿನ ಎಡದಂಡೆ ಕಾಲುವೆಯಯಲ್ಲಿ ಬಿರುಕು ಕಾಣಿಸಿಕೊಂಡಿದೆ.  ಮೂಡಿರುವ ರಂಧ್ರದಿಂದ 3000 ಕ್ಯೂಸೆಕ್ ನೀರು ಹರಿಯುತ್ತಿದೆ. ಸರಿಯಾಗಿ ಒಂದು ತಿಂಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆ ಗೇಟ್ ಮುರಿದು ಇಡೀ ಗ್ರಾಮಕ್ಕೆ ನೀರು ನುಗ್ಗಿತ್ತು.

ಬರಕ್ಕೆ ₹1029.39 ಕೋಟಿ, ನೆರೆಗಿಲ್ಲ ನಯಾಪೈಸೆ!

ಇನ್ನೊಂದು ಕಡೆ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೋಯ್ನಾ ಜಲಾಶಯದಿಂದ 30 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗಿದೆ. ಪರಿಣಾಮ ಕೃಷ್ಣಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದ್ದು ಚಿಕ್ಕೋಡಿ ತಾಲೂಕಿನ ಹಲವು ಗ್ರಾಮಗಳು ಜಲಾವೃತವಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಲಿಂಗನಮಕ್ಕಿ ಜಲಾಶಯದಿಂದಲೂ ಮೊದಲ ಹಂತವಾಗಿ ಸೋಮವಾರ ನೀರು ಹೊರಕ್ಕೆ ಬಿಡಲಾಗಿದೆ. ಮುಂದಿನ 48 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಸಾಧಾರಣ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.