Mandya : 9, 10ರಂದು ಕರ್ನಾಟಕ ಜಾನಪದ ಸಮ್ಮೇಳನ
ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು ಮತ್ತು ಜಿಲ್ಲಾ ಘಟಕ ಮಂಡ್ಯ ಹಾಗೂ ಜಿಲ್ಲಾಡಳಿತದ ವತಿಯಿಂದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನವನ್ನು 9 ಮತ್ತು 10ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಎಂ.ಶ್ರೀನಿವಾಸ್ ತಿಳಿಸಿದರು.
ಮಂಡ್ಯ (ಡಿ.08): ಕರ್ನಾಟಕ ಜಾನಪದ ಪರಿಷತ್, ಬೆಂಗಳೂರು ಮತ್ತು ಜಿಲ್ಲಾ ಘಟಕ ಮಂಡ್ಯ ಹಾಗೂ ಜಿಲ್ಲಾಡಳಿತದ ವತಿಯಿಂದ ಅಖಿಲ ಕರ್ನಾಟಕ ಜಾನಪದ ಸಮ್ಮೇಳನವನ್ನು 9 ಮತ್ತು 10ರಂದು ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ ಎಂದು ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಎಂ.ಶ್ರೀನಿವಾಸ್ ತಿಳಿಸಿದರು.
9ರಂದು ಬೆಳಗ್ಗೆ 8 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಭವನದ ಆವರಣದಲ್ಲಿ ರಾಷ್ಟ್ರ ಧ್ವಜವನ್ನು ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ನೆರವೇರಿಸಿದರೆ, ನಾಡಧ್ವಜವನ್ನು ಜಿ.ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ನೆರವೇರಿಸಲಿದ್ದಾರೆ. ರಾಷ್ಟ್ರಗೀತೆಯನ್ನು ಪೊಲೀಸ್ (police) ಕಾಲೋನಿಯ ಸರ್ಕಾರಿ ಪ್ರೌಢಶಾಲೆಯ ಮಕ್ಕಳು (Children) ಹಾಗೂ ನಾಡಗೀತೆಯನ್ನು ಲಕ್ಷ್ಮೇ ಜನಾರ್ದನ ಪ್ರೌಢಶಾಲೆಯ ಮಕ್ಕಳು ಹಾಡಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೆಳಿಗ್ಗೆ 9 ಗಂಟೆಗೆ ಸಮ್ಮೇಳನಾಧ್ಯಕ್ಷ ಡಾ. ರಾಮೇಗೌಡ ಅವರ ಮೆರವಣಿಗೆ ನಡೆಯಲಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕ ಎನ್.ಯತೀಶ್ ಚಾಲನೆ ನೀಡಲಿದ್ದಾರೆ. ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಉಪಸ್ಥಿತರಿರುವರು. ಮೆರವಣಿಗೆಯು ಜಿಲ್ಲಾಧಿಕಾರಿ ಕಚೇರಿಯಿಂದ ಹೊರಟು ಬೆಂಗಳೂರು-ಮೈಸೂರು ರಸ್ತೆ, ಜೆ.ಸಿ.ವೃತ್ತ, ಮಹಾವೀರ ವೃತ್ತ, ವಿ.ವಿ.ರಸ್ತೆ, ಹೊಸಹಳ್ಳಿ ವೃತ್ತ, ನೂರಡಿ ರಸ್ತೆ, ಆರ್.ಪಿ. ರಸ್ತೆ ಮೂಲಕ ಅಂಬೇಡ್ಕರ್ ಭವನ ತಲುಪುವುದು ಎಂದರು.
ಸಮ್ಮೇಳನ ಉದ್ಘಾಟನಾ ಸಮಾರಂಭವು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದ್ದು, ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸಮಾರಂಭ ಉದ್ಘಾಟಿಸಲಿದ್ದು, ಶಾಸಕ ಎಂ.ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
‘ಜನಪದ ಬಾಗಿನ’ ಸ್ಮರಣ ಸಂಚಿಕೆಯನ್ನು ಶಾಸಕ ಡಿ.ಸಿ.ತಮ್ಮಣ್ಣ ಬಿಡುಗಡೆ ಮಾಡಲಿದ್ದು, ‘ಬುಜ್ಜಣಿಗೆ’ ಸ್ಮರಣ ಸಂಪುಟವನ್ನು ಸಿ.ಎಸ್. ಪುಟ್ಟರಾಜು ಬಿಡುಗಡೆ ಮಾಡಲಿದ್ದಾರೆ. ಕೆ.ಪಿ.ವೀರಪ್ಪರವರ ‘ಜಾನಪದ ಗಾದೆಗಳು’ ಪುಸ್ತಕವನ್ನು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪೊ›. ಜಿ.ಟಿ.ವೀರಪ್ಪ ಬಿಡುಗಡೆ ಮಾಡಲಿದ್ದು, ಪುಸ್ತಕ ಕುರಿತು ಸಂಸ್ಕೃತಿ ಚಿಂತಕ ಪೊ›. ಎಂ.ಕೃಷ್ಣೇಗೌಡ ಪುಸ್ತಕ ಕುರಿತು ಮಾತನಾಡಲಿದ್ದು, ಸಮ್ಮೇಳನಾಧ್ಯಕ್ಷ ಡಾ. ರಾಮೇಗೌಡ ಸಮ್ಮೇಳಾನಧ್ಯಕ್ಷರ ನುಡಿ ನುಡಿಯಲಿದ್ದಾರೆ ಎಂದು ತಿಳಿಸಿದರು.
ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಡಾ.ಕೆ.ಅನ್ನದಾನಿ, ಮರಿತಿಬ್ಬೇಗೌಡ, ದಿನೇಶ್ ಗೂಳಿಗೌಡ, ಸುರೇಶ್‌ಗೌಡ, ಎ.ಎಸ್. ರವೀಂದ್ರ ಶ್ರೀಕಂಠಯ್ಯ, ಮಧು ಜಿ.ಮಾದೇಗೌಡ, ನಗರಸಭೆ ಅಧ್ಯಕ್ಷ ಎಚ್.ಎಸ್.ಮಂಜು, ಮನ್‌ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಿ.ಪಿ.ಉಮೇಶ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ಕಜಾಪ ಮ್ಯಾನೇಜಿಂಗ್ ಟ್ರಸ್ಟಿಆದಿತ್ಯ ನಂಜರಾಜ್, ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಸಕ ಅಶೋಕ್ ಜಯರಾಂ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಮಧ್ಯಾಹ್ನ 2 ಗಂಟೆಗೆ ಜಾನಪದ ವಿದ್ವಾಂಸ ಡಾ.ಚಕ್ಕೆರೆ ಶಿವಶಂಕರ್ ಅಧ್ಯಕ್ಷತೆಯಲ್ಲಿ ಗೋಷ್ಠಿ 1 ನಡೆಯಲಿದ್ದು, ‘ಹಿರಿಯೋರ ನೆನೆದೇವೊ’ ವಿದ್ವಾಂಸರು ಮತ್ತು ಕಲಾವಿದರ ಸ್ಮರಣೆ’ ಕುರಿತು ಚರ್ಚೆ ನಡೆಯಲಿದೆ. ಸಂಜೆ 4 ಗಂಟೆಗೆ ವಿಶ್ರಾಂತ ಕುಲಪತಿ ಡಾ. ಹಿ.ಚಿ.ಬೋರಲಿಂಗಯ್ಯ ಅಧ್ಯಕ್ಷತೆಯಲ್ಲಿ ಗೋಷ್ಠಿ-2 ನಡೆಯಲಿದೆ.
ಡಿ.10ರಂದು ಬೆಳಿಗ್ಗೆ 10.30ಕ್ಕೆ ಗೋಷ್ಠಿ-3ರಲ್ಲಿ ‘ಜನಪದ ಕಾವ್ಯಗಳ ರಸಗ್ರಹಣ ವ್ಯಾಖ್ಯಾನ ಮತ್ತು ಗಾಯನ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಮ್ಮೇಳನಾಧ್ಯಕ್ಷರೊಂದಿಗೆ ಮಾತುಕತೆ ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ಕರ್ನಾಟಕ ಸಂಘದ ಕೆ.ವಿ.ಎಸ್. ಭವನದಲ್ಲಿ ‘ಮಹಿಳಾ ಜಾನಪದ ಗೋಷ್ಠಿ’ ನಡೆಯಲಿದ್ದು, ನಿವೃತ್ತ ಪ್ರಾಧ್ಯಾಪಕ ಡಾ. ಜಯಲಕ್ಷ್ಮಿ ಸೀತಾಪುರ ಅಧ್ಯಕ್ಷತೆ ವಹಿಸಲಿದ್ದಾರೆ. ‘ದ್ರಾವಿಡ ಭಾಷೆಯಲ್ಲಿ ಮಹಿಳೆ ಜಾನಪದ’ ಕುರಿತು ಹಾವೇರಿಯ ಡಾ. ರಜಿಯಾ ಬೇಗಂ ಪಿ.ನದಾಫ್ ವಿಷಯ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು.
ಸಂಜೆ 4.30ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ವಿಶ್ರಾಂತ ಕುಲಪತಿ ಡಾ. ಅಂಬಳಿಕೆ ಹಿರಿಯಣ್ಣ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಸದೆ ಸುಮಲತಾ, ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಅವರು ನೆನಪಿನ ಕಾಣಿಕೆ ವಿತರಿಸುವರು. ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸಮ್ಮೇಳನಾಧ್ಯಕ್ಷ ಡಾ. ರಾಗೌ ಅವರನ್ನು ಸನ್ಮಾನಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ, ತಾಲ್ಲೂಕು ಅಧ್ಯಕ್ಷ ಕಾರಸವಾಡಿ ಮಹದೇವು, ಸಂಘಟನಾ ಕಾರ್ಯದರ್ಶಿ ಕೆ.ಎಂ.ಕೃಷ್ಣೇಗೌಡ ಕೀಲಾರ, ಕೋ.ಪು.ಗುಣಶೇಖರ್, ಮಲ್ಲೇಶ್, ಸುಂದ್ರೇಶ್ ಹಾಜರಿದ್ದರು.