ರಾಜ್ಯ ಸರ್ಕಾರದ ಮತ್ತೊಬ್ಬ ಗುತ್ತಿಗೆ ಇಂಜಿನಿಯರ್ ಆತ್ಮಹತ್ಯೆ!

ಗದಗದಲ್ಲಿ ನಿರ್ಮಿತಿ ಕೇಂದ್ರದ ಗುತ್ತಿಗೆ ಇಂಜಿನಿಯರ್ ಶಂಕರಗೌಡ ಪಾಟೀಲ್ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Karnataka government Another contract engineer died in Gadag Lodge sat

ಗದಗ (ಜ.03): ಈಗಾಗಲೇ ರಾಜ್ಯ ಸರ್ಕಾರದಲ್ಲಿ ಸರ್ಕಾರಿ ನೌಕರರು, ಅಧಿಕಾರಿಗಳು, ಗುತ್ತಿಗೆದಾರರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆಯೇ ಇದೀಗ ಗದಗ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಗದಗ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರಲ್ಲಿ ಕೆಲಸ ಮಾಡುತ್ತಿದ್ದ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ ಆಗಿದ್ದಾರೆ. ಪಲ್ಲವಿ ಲಾಡ್ಜ್‌ನಲ್ಲಿ ರೂಂ ನಂಬರ್‌ 513 ರಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಹಲವು ಸರ್ಕಾರಿ ನೌಕರರು ರಾಜಕಾರಣಿಗಳ ಅಕ್ರಮಗಳಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಹೆಚ್ಚಾಗಿ ಕೇಳಿಬರುತ್ತಿವೆ. ಇದೇ ಸಂದರ್ಭದಲ್ಲಿ ಮತ್ತೊಬ್ಬ ಇಂಜಿನಿಯರ್ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಜೊತೆಗೆ, ಈ ವಿಚಾರ ವಿಪಕ್ಷಗಳಿಗೆ ಸರ್ಕಾರದ ಮೇಲೆ ಚಾಟಿ ಬೀಸಲು ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ಮೃತ ಇಂಜಿನಿಯರ್ ಶಂಕರಗೌಡ ಪಾಟೀಲ್ ಅವರು ಗದಗ ನಗರದ ನಿವಾಸಿ ಆಗಿದ್ದಾರೆ. ಬೆಳಗ್ಗೆ 7.30ಕ್ಕೆ ಚಹಾ ಕುಡಿದು ಮನೆಯಿಂದ ಹೊರಬಂದ ಇಂಜಿನಿಯರ್, ಎಂದಿನಂತೆ ಕಚೇರಿಗೆ ತೆರಳುವುದು ಬಿಟ್ಟು ಲಾಡ್ಜ್‌ಗೆ ಹೋಗಿದ್ದಾರೆ. ಲಾಡ್ಜ್‌ ರೂಮಿಗೆ ಹೋದವರು ಮಧ್ಯಾಹ್ನವಾದರೂ ಕೋಣೆಯಿಂದ ಹೊರೆಗ ಬಾರದ ಹಿನ್ನೆಲೆಯಲ್ಲಿ ಲಾಡ್ಜ್ ರೂಮ್‌ ಬಾಯ್ ಊಟಕ್ಕೆ ಏನಾದರೂ ತಂದುಕೊಡಬೇಕಾ ಎಂದು ಕೆಳಲು ಹೋಗಿ ಬಾಗಿಲು ತಟ್ಟಿದ್ದಾರೆ. ಎಷ್ಟೇ ಬಾಗಿಲು ಬಡಿದರೂ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿ ಮೂಲಕ ನಡಿದಾಗ ನೇಣಿಗೆ ಶರಣಾಗಿರುವುದು ಪತ್ತೆಯಾಗಿದೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ, ಪೊಲೀಸರ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ: ಸಿಬಿಐ ತನಿಖೆಗೆ ಒತ್ತಾಯಿಸಿದ ಸಚಿನ್ ಕುಟುಂಬ

ಸ್ಥಳಕ್ಕೆ ಆಗಮಿಸಿದ ಗದಗ ನಗರದ ಬಡಾವಣೆ ಪೊಲೀರು ಪರಿಶೀಲನೆ ಮಾಡಿದ್ದಾರೆ. ಆದರೆ, ಈವರೆಗೆ ಗುತ್ತಿಗೆ ಇಂಜಿನಿಯರ್ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ಕಾರ್ಯವನ್ನು ಆರಂಭಿಸಿದ್ದಾರೆ. ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ಮೃತದೇಹವನ್ನು ಕೆಳಗಿಳಿಸಿ ನಂತರ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗುತ್ತಿದೆ.

ಇದನ್ನೂ ಓದಿ: Breaking News: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ, ರೈಲಿಗೆ ತಲೆಕೊಟ್ಟು ಜೀವ ಬಿಟ್ಟ ಗುತ್ತಿಗೆದಾರ!

ನೇಣು ಬಿಗಿದುಕೊಂಡು ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ವಿಚಾರವಾಗಿ ಮಾತನಾಡಿದ ಸಹೋದರ ಕೃಷ್ಣಗೌಡ ಅವರು ಯಾರೋ ನಮ್ಮಣ್ಣನನ್ನು ಕೊಲೆ ಮಾಡಿ ನೇಣು ಹಾಕಿ ಹೋಗಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇಂಜಿನಿಯರ್ ಶಂಕರಗೌಡ ಆತ್ಮಹತ್ಯೆ ಬಗ್ಗೆ ಅನುಮಾನ ಇದೆ. ಆತನಿಗೆ ಯಾವುದೇ ಸಾಲ‌ ಇಲ್ಲ‌. ಸಾಕಷ್ಟು ಆಸ್ತಿ ಇದೆ. ಸಾಲಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಬ್ಯಾಂಕ್ ಸಾಲಕ್ಕೆ ಜಾಮೀನು ಆಗಿದ್ದ ಆ ವಿಷಯಕ್ಕಾದರೂ ಆಗಿರಬಹುದು. ಆತ ಜಿಲ್ಲಾಧಿಕಾರಿಗಳ ಅಡಿಯಲ್ಲಿ ಕೆಲಸ‌ ಮಾಡುತ್ತಿದ್ದನು. ಅಲ್ಲಿ ಪ್ರಮೋಷನ್ ವಿಷಯಕ್ಕೆ ವ್ಯತ್ಯಾಸ ಆಗಿದೆಯೋ ಗೊತ್ತಿಲ್ಲ. ಒಟ್ಟಾರೆ, ಆತ ಸಾಲಕ್ಕೆ ಹೆದರುವ ಮನುಷ್ಯ ಅಲ್ಲ. ಇನ್ನು ಅಣ್ಣ ಸಾವಿಗೆ ಶರಣಾದ ರೂಮಿನೊಳಗೆ ನಮ್ಮನ್ನು ಪೊಲೀಸರು ಬಿಡಲಿಲ್ಲ. ಹೀಗಾಗಿ ಆತನ ಸಾವಿನ ಬಗ್ಗೆ ಸಾಕಷ್ಟು ಅನುಮಾನ ಇದೆ. ಈ ಬಗ್ಗೆ ಸರ್ಕಾರ ತನಿಖೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios