ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ತೀರ್ಮಾನ/ನೈಟ್ ಕರ್ಫ್ಯೂ ಮೊರೆ ಹೋದ ಸರ್ಕಾರ/ ಎಂಟು ಜಿಲ್ಲಾ ಕೇಂದ್ರಗಳಲ್ಲಿ ಕೊರೋನಾ ನಿಷೇಧಾಜ್ಞೆ/ ಪ್ರಧಾನಮಂತ್ರಿ ಮೋದಿ ಅವರ ಸಭೆ ಬಳಿಕ ಹೇಳಿಕೆ

ಬೆಂಗಳೂರು(ಏ. 08) ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಮಾಡಿದ್ದ ಸರ್ಕಾರ ಈಗ ನೈಟ್ ಕರ್ಫ್ಯೂ ಮೊರೆ ಹೋಗಿದೆ. ಎಂಟು ಜಿಲ್ಲಾ ಕೇಂದ್ರಗಳಳ್ಲಿ ನೈಟ್ ಕರ್ಫ್ಯೂ ಜಾರಿಗೆ ರಾಜ್ಯ ಸರ್ಕಾರ ಸಿದ್ಧವಾಗಿದೆ. ಏ. 10 ರಿಂದ 20 ರವರೆಗೆ ಕೊರೋನಾ ನಿಯಂತ್ರಣಕ್ಕೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಕೊರೋನಾ ಕಂಟ್ರೋಲ್ ಗೆ ಬರದಿದ್ದರೆ ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಕೊರೊನಾಗೆ ಹೊಸ ಔಷಧ, ಮಹಾಮಾರಿಯ ಮರಣಶಾಸನ!

ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಂಗಳೂರು, ಮೈಸೂರು, ಮಂಗಳೂರು,‌ಕಲಬುರಗಿ, ಬೀದರ್ ,ತುಮಕೂರು, ಉಡುಪಿ, ಮಣಿಪಾಲ್‌ಗೆ ಜಿಲ್ಲಾ ಕೇಂದ್ರಕ್ಕೆ ನೈಟ್ ಕರ್ಫ್ಯೂ ಅನ್ವಯವಾಗಲಿದೆ. ಏಪ್ರಿಲ್ 11 ರಿಂದ 14 ರವರೆಗೆ ಲಸಿಕೆ ಉತ್ಸವ ಆಚರಿಸಲು ನಿರ್ಧಾರ ಮಾಡಲಾಗಿದೆ.

ಮೂಲ ಸೇವೆಗಳಿಗೆ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಲ್ಲಿ ಮಾತ್ರ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಇಡೀ ಜಿಲ್ಲೆಗೆ ಅನ್ವಯ ಆಗಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. 

ಅಗತ್ಯ ಸೇವೆಗಳಿಗೆ ತೊಂದರೆ ಇಲ್ಲ. ವಾಹನ ಓಡಾಟ ಇರಲಿದೆ ಆದರೆ ವಾಣಿಜ್ಯ ವ್ಯವಹಾರಗಳು ಸ್ಥಗಿತವಾಗಲಿವೆ. ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಿ ಕೊರೋನಾ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು. ದೆಹಲಿ ಮತ್ತು ಪಂಜಾಬ್ ನಲ್ಲಿ ಈ ರೀತಿಯ ಕ್ರಮವನ್ನು ಕೆಲ ದಿನಗಳ ಹಿಂದೆ ತೆಗೆದುಕೊಳ್ಳಲಾಗಿತ್ತು. ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಕೊರೋನಾ ನಿಷೇಧಾಜ್ಞೆ ಜಾರಿಯಾಗುತ್ತಿದ್ದು ಜನ ಮತ್ತಷ್ಟು ಎಚ್ಚರಿಕೆಯಿಂದ ಇರಬೇಕಾದದ್ದು ಅಗತ್ಯ.

Scroll to load tweet…