ಮೈಸೂರು ಡಿಸಿ ವರ್ಗಾವಣೆ ವಿವಾದ : ದಿನದಿನವೂ ಮುಂದುವರಿಯುತ್ತಲೇ ಇದೆ

ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ವರ್ಗಾವಣೆ ಮಾಡಿ ರೋಹಿಣಿ ಸಿಂಧೂರಿ ಅವರನ್ನು ನಿಯೋಜನೆಗೊಳಿಸಿದ ವಿಚಾರ ಇದೀಗ ಇನ್ನಷ್ಟು ಎಲೆಯುತ್ತಲೇ ಇದೆ. 

Karnataka Govt Ask time for  mysuru DC Transfer issue snr

ಬೆಂಗಳೂರು (ನ.25):  ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ನಿಯಮಗಳನ್ನು ಉಲ್ಲಂಘಿಸಿ ವರ್ಗಾವಣೆ ಮಾಡಿರುವುದನ್ನು ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಗೆ (ಸಿಎಟಿ)ಗೆ ಐಎಎಸ್‌ ಅಧಿಕಾರಿ ಬಿ. ಶರತ್‌ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ವಾದ ಮಂಡಿಸಲು ಸರ್ಕಾರ ಮತ್ತೆ ಕಾಲಾವಕಾಶ ಕೋರಿದೆ.

ಅರ್ಜಿಯ ಸಂಬಂಧ ವಿಚಾರಣೆ ವಾದ ಮಂಡಿಸಲು ಸರ್ಕಾರ ಈಗಾಗಲೇ ಎರಡು ಬಾರಿ ಕಾಲಾವಕಾಶ ಕೋರಿತ್ತು. 

ರೋಹಿಣಿ ಸಿಂಧೂರಿ ಮೈಸೂರಿನ 3ನೇ ಮಹಾರಾಣಿಯಾಗುವುದು ಬೇಡ: ಶಾಸಕ ಕಿಡಿ .
ಇದೀಗ ಮತ್ತೊಂದು ಬಾರಿ ಕಾಲಾವಕಾಶ ಕೋರಿದೆ. ವಿಚಾರಣೆ ವೇಳೆ ಸರ್ಕಾರದ ಪರ ವಾದ ಮಂಡಿಸಿದ ವಕೀಲರು, ಪ್ರಕರಣ ಸಂಬಂಧ ಅಡ್ವೋಕೇಟ್‌ ಜನರಲ್ಲಿ ವಾದ ಮಂಡಿಸಬೇಕಾಗಿದೆ. ಅವರಿಗೆ ಮತ್ತೊಂದು ಪ್ರಕರಣದಲ್ಲಿ ವಾದ ಮಂಡಿಸಲಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಮತ್ತಷ್ಟುಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಆಲಿಸಿದ ನ್ಯಾಯಧೀಶರು ವಿಚಾರಣೆಯನ್ನು ಡಿಸೆಂಬರ್‌ 4ಕ್ಕೆ ಮುಂದೂಡಿದ್ದಾರೆ.

ಪ್ರಕರಣದ ಹಿನ್ನೆಲೆ:

ಆಗಸ್ಟ್‌ 28ಕ್ಕೆ ಮೈಸೂರು ಜಿಲ್ಲಾ​ಧಿಕಾರಿ ಹುದ್ದೆಗೆ ನಿಯೋಜಿಸಿದ ತಮ್ಮನ್ನು ಸೂಕ್ತ ಕಾರಣ ನೀಡದೆ ಸೆ.28ಕ್ಕೆ ವರ್ಗಾವಣೆ ಮಾಡಿದೆ. ಏಕಾಏಕಿ ತಮ್ಮನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶ ಕಾನೂನು ಬಾಹಿರವಾಗಿರ. ಈ ಆದೇಶ ರದ್ದುಗೊಳಿಸಬೇಕು ಎಂದು ಕೋರಿ ಬಿ.ಶರತ್‌ ಸಿಎಟಿಯಲ್ಲಿ ಅರ್ಜಿ ಸಲ್ಲಿಸಿದ್ದರು.

Latest Videos
Follow Us:
Download App:
  • android
  • ios