Asianet Suvarna News Asianet Suvarna News

Anganwadi Workers: ಅಂಗನವಾಡಿ ಸಿಬ್ಬಂದಿಗೆ ಬಜೆಟ್‌ನಲ್ಲಿ ಬಂಪರ್ ಸುದ್ದಿ

*  ಬಜೆಟ್‌ನಲ್ಲಿ ಅಂಗನವಾಡಿ ನೌಕರರ ವೇತನ ಹೆಚ್ಚಳ ಸಾಧ್ಯತೆ

* ಸಿಎಂ ಜೊತೆ ಚರ್ಚಿಸಿದ್ದೇನೆ: ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌
*  ವಿವಿಧ ಬೇಡಿಕೆಗಾಗಿ ಪ್ರತಿಭಟನೆ ನಡೆಸಿದ್ದ ಸಿಬ್ಬಂದಿ

Karnataka Govt ready to increase salary of anganwadi workers says Halappa Achar mah
Author
Bengaluru, First Published Feb 23, 2022, 4:04 AM IST | Last Updated Feb 23, 2022, 4:15 AM IST

ಬೆಂಗಳೂರು ( ಫೆ. 23)   ಅಂಗನವಾಡಿ ಕಾರ್ಯಕರ್ತೆಯರು (Anganwadi Workers)ಮತ್ತು ಸಹಾಯಕಿಯರ ವೇತನ ಹಾಗೂ ಭತ್ಯೆಯನ್ನು ಹೆಚ್ಚಳ ಮಾಡುವ ಸಂಬಂಧ ಮುಖ್ಯಮಂತ್ರಿಗಳ (Basavaraj Bommai) ಜೊತೆ ಚರ್ಚಿಸಿದ್ದು, ಆಯವ್ಯಯದಲ್ಲಿ (Karnataka Budget) ವೇತನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ (Halappa Achar) ಭರವಸೆ ನೀಡಿದ್ದಾರೆ.

ಬಿಜೆಪಿಯ (BJP)ಎಸ್‌.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ವೇತನ ಹಾಗೂ ಭತ್ಯೆ ಹೆಚ್ಚಿಸುವುದು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದೇನೆ. ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ 4500 ರು. ರಾಜ್ಯ ಸರ್ಕಾರ 7300 ರು. ಸೇರಿಸಿ ವೇತನ ಕೊಡುತ್ತಿದ್ದೇವೆ. ಇದನ್ನು ಇನ್ನೂ ಹೆಚ್ಚಿಗೆ ಮಾಡಲು ಯತ್ನಿಸಲಾಗುವುದು ಎಂದರು.

ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಂಜೂರಾದ ಎ, ಬಿ, ಸಿ ಮತ್ತು ಡಿ ದರ್ಜೆಯ 2656 ಹುದ್ದೆಗಳು ಖಾಲಿ ಇವೆ. ಈ ಪೈಕಿ ನೇರ ನೇಮಕಾತಿ ಮೂಲಕ ಪ್ರಥಮ ದರ್ಜೆ ಸಹಾಯಕ 50, ದ್ವಿತೀಯ ದರ್ಜೆ ಸಹಾಯಕ 60, ಗೃಹ ಪಾಲಕ 45 ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಸೇವಾ ಹಿರಿತನದ ಆಧಾರದಲ್ಲಿ ವೇತನ ಮತ್ತು ನಿವೃತ್ತರಿಗೆ ಪಿಂಚಣಿ (Pension)ಕೊಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು  ಮತ್ತು ಸಹಾಯಕರು ಬೃಹತ್‌ ಪ್ರತಿಭಟನೆ ನಡೆಸಿದರು.

ಇಲ್ಲೆಲ್ಲ ಕೆಲಸ ಖಾಲಿ ಇದೆ, ಅಂಗನವಾಡಿ ಸೇರಬಹುದು

ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಗರದ ಸಿಟಿ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ‘ಬೆಂಗಳೂರು ಚಲೋ’ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ನಿಯಮಾವಳಿ ಪ್ರಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ 18 ಸಾವಿರ ರು.ಕನಿಷ್ಠ ವೇತನ ಕೊಡಬೇಕು. ಆದರೆ, ಈಗಲೂ 10 ಸಾವಿರ ರೂ.ಗಳಿಗೆ ದುಡಿಸಲಾಗುತ್ತಿದೆ. ರಾಜ್ಯದಲ್ಲಿ 62 ಸಾವಿರ ಅಂಗನವಾಡಿಗಳಲ್ಲಿ 1.24 ಲಕ್ಷ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. 2017ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸತ್ಯಾಗ್ರಹ ನಡೆಸಿದಾಗ ಸರ್ಕಾರ ವೇತನ ಹೆಚ್ಚಿಸುವ ಆಶ್ವಾಸನೆ ನೀಡಿತ್ತು. ಅದನ್ನು ನಂಬಿ ನಾವು ಹೋರಾಟ ನಿಲ್ಲಿಸಿದ್ದೆವು. ಇದಾಗಿ ಐದು ವರ್ಷವಾದರೂ ಯಾವುದೇ ಸೌಲಭ್ಯ ಸಿಕ್ಕಿಲ್ಲ. ಕೋವಿಡ್‌ ಕಾರಣದಿಂದಾಗಿ ಕಳೆದೆರಡು ವರ್ಷ ಸುಮ್ಮನಿದ್ದೆವು. ಈ ಬಾರಿ ಅನಿವಾರ್ಯವಾಗಿ ಬೀದಿಗಿಳಿದಿದ್ದೇವೆ ಎಂದು ಪ್ರತಿಭಟನಾನಿರತರು ಹೇಳಿದರು.

2006ಕ್ಕೂ ಮೊದಲು ಸೇರ್ಪಡೆಯಾದವರು, ನಿವೃತ್ತರಾದವರಿಗೆ ಪಿಂಚಣಿ ಸವಲತ್ತು ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ವರಲಕ್ಷ್ಮೇ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಈ ಹಿಂದೆ ಅಂಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾಗ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ವಾಗ್ದಾನ  ನೀಡಿತ್ತು. ಆದರೆ ಪರಿಸ್ಥಿತಿಯಲ್ಲಿ ಯಾವುದೆ ಬದಲಾವಣೆ ಆಗದ ಕಾರಣ ಮತ್ತೆ ಪ್ರತಿಭಟನೆ ಹಾದಿ ಹಿಡಿದಿದ್ದರು.

ಮೈಸೂರು ಜಿಲ್ಲೆ ದೊಡ್ಡ ಮಾರಗೌಡನಹಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆ(Anganwadi Worker) ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೋರ್ವ ಅಂಗನವಾಡಿ ಕಾರ್ಯಕರ್ತೆ ಆತ್ಮಹತ್ಯೆ ಪ್ರಯತ್ನ ಮಾಡಿದ್ದಳು .ಅಂಗನವಾಡಿ ಕಾರ್ಯಕರ್ತೆಯೊಬ್ಬರು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು  ಜಿಲ್ಲೆಯಿಂದ ವರದಿಯಾಗಿತ್ತು . ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Latest Videos
Follow Us:
Download App:
  • android
  • ios