Asianet Suvarna News Asianet Suvarna News

ಶ್ರೀಗಂಧ ಬೆಳೆಯುವವರಿಗೆ ಬಂಪರ್ ಲಾಭ : ಸರ್ಕಾರದಿಂದಲೂ ಸಪೋರ್ಟ್

ಶ್ರೀಗಂಧ ಬೆಳೆಯುವ ರೈತರಿಗೆ ಸರ್ಕಾರದಿಂದಲೇ ಸಹಕಾರ ಸಿಗಲಿದೆ. ಈ ಬಗ್ಗೆ ಸಚಿವ ಎಸ್‌ ಟಿ ಸೋಮಶೇಖರ್  ಮಾಹಿತಿ ನೀಡಿದ್ದಾರೆ. 

Karnataka Govt Support Farmers to Sandalwood cultivation   snr
Author
Bengaluru, First Published Jan 26, 2021, 11:03 AM IST

ಮೈಸೂರು (ಜ.26):  ಶ್ರೀಗಂಧದ ವಸ್ತು ಸಂಗ್ರಹಾಲಯದ ಸ್ಥಳಾಂತರದ ಬಗ್ಗೆ ಚಿಂತನೆ ಇದ್ದು, ಮೈಸೂರು ಅರಮನೆ ಆವರಣ ಇಲ್ಲವೇ ಮೈಸೂರು ಮೃಗಾಲಯದಲ್ಲಿ ತೆರೆಯುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು.

ಮೈಸೂರಿನ ಅಶೋಕಪುರಂನಲ್ಲಿ ಶ್ರೀಗಂಧದ ವಸ್ತು ಸಂಗ್ರಹಾಲಯವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸ್ಥಳಾಂತರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಒಟ್ಟಿನಲ್ಲಿ ಸುಲಭವಾಗಿ ಸಾರ್ವಜನಿಕರಿಗೆ ವೀಕ್ಷಣೆಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದರು.

ಪುತ್ತೂರಿನಲ್ಲಿ ಶ್ರೀಗಂಧಕ್ಕಿಂತಲೂ ಲಾಭದಾಯಕ ಈ ಅಗರ್‌ವುಡ್! ...

ಶ್ರೀಗಂಧದ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿರುವುದು ಸಂತಸದ ವಿಷಯ. ಕಳೆದ ಬಾರಿ ಭೇಟಿ ವೇಳೆ ಮೈಸೂರು ಅರಮನೆಯಲ್ಲಿ ವಸ್ತುಸಂಗ್ರಹಾಲಯವನ್ನು ತೆರೆಯುವ ಉದ್ದೇಶ ಹೊಂದಿದ್ದಾಗಿ ತಿಳಿಸಿದ್ದೆ. ಆದರೆ, ಅಲ್ಲಿ ಸದ್ಯ ಕಟ್ಟಡದ ಕೊರತೆ ಇದ್ದಿದ್ದರಿಂದ ಅರಮನೆ ಮೈದಾನದ ಸಮಿತಿಯವರು ಕಟ್ಟಡವನ್ನು ಕಟ್ಟಿಕೊಡುವ ಬಗ್ಗೆ ಹೇಳಿದ್ದಾರೆ. ಇದೇ ವೇಳೆ ಮೈಸೂರು ಮೃಗಾಲಯದಲ್ಲೂ ಸ್ಥಳಾವಕಾಶ ಇರುವ ಬಗ್ಗೆ ಮಾಹಿತಿ ಬಂದಿದ್ದರಿಂದ ಅಲ್ಲೂ ಸಹ ಮಾತುಕತೆ ನಡೆಸಲಾಗುತ್ತಿದೆ. ಬೆಲೆಬಾಳುವ ವಸ್ತುಗಳು ಇರುವುದರಿಂದ ಸುರಕ್ಷತೆಯನ್ನು ನೋಡಿಕೊಂಡು ಸೂಕ್ತ ಸ್ಥಳದಲ್ಲಿ ತೆರೆಯುವ ನಿರ್ಧಾರವನ್ನು ಅರಣ್ಯ ಇಲಾಖೆ ಮಾಡಲಿದೆ ಎಂದು ಅವರು ಹೇಳಿದರು.

ಶ್ರೀಗಂಧ ಮರಗಳನ್ನು ಕದಿಯುತ್ತಿದ್ದ ಯುವಕರು ಸಿಕ್ಕಿ ಬಿದ್ದಿದ್ದು ಬಹಳ ರೋಚಕ! .

ಶ್ರೀಗಂಧಕ್ಕೆ ಸರ್ಕಾರದಿಂದ ಪ್ರೋತ್ಸಾಹ ಕೊಡಲಾಗುತ್ತಿದೆ. ಅಲ್ಲದೆ, ಖಾಸಗಿಯಾಗಿ ಬೆಳೆಸಲು ಸಹ ಉತ್ತೇಜನ ನೀಡಲಾಗುತ್ತಿದೆ. ಇದಕ್ಕೆ ಉತ್ತಮ ದರ ಇರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು. ಶ್ರೀಗಂಧದ ವಸ್ತುಸಂಗ್ರಹಾಲಯವನ್ನು ಯಾರು ಬೇಕಿದ್ದರೂ ವೀಕ್ಷಣೆ ಮಾಡಬಹುದಾಗಿದ್ದು, ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ ಎಂದರು.

ಉದ್ಘಾಟನೆ ಬಳಿಕ ವಸ್ತುಸಂಗ್ರಹಾಲಯದಲ್ಲಿರುವ ಶ್ರೀಗಂಧದ ವಿವಿಧ ತಳಿಗಳು, ಬೇರುಗಳು, ಕಾಂಡಗಳು, ಪ್ರಭೇದಗಳು, ಅವುಗಳ ಉಪಯೋಗಗಳು, ವರ್ಗೀಕರಣದ ವಿವರಗಳು ಸೇರಿದಂತೆ ಶ್ರೀಗಂಧದ ಮರದಿಂದ ಏನೆಲ್ಲ ಔಷಧೀಯ ಗುಣಗಳಿವೆ? ಹಾಗೂ ಅದರಿಂದ ಎಷ್ಟುಲಾಭ ಮಾಡಬಹುದು? ಎಂಬ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಶ್ರೀಗಂಧದಿಂದ ತಯಾರಿಸಿದ ವಿವಿಧ ಉತ್ಪನ್ನಗಳನ್ನೂ ಪ್ರದರ್ಶನಕ್ಕೆ ಇರಿಸಲಾಗಿತ್ತು.

5 ಲಕ್ಷ ಮೌಲ್ಯದ ಶ್ರೀಗಂಧ ವಶ : ಅರೆಸ್ಟ್ ..

ಮ್ಯೂಸಿಯಂನಲ್ಲಿ ಪ್ರೊಜೆಕ್ಟರ್‌ ಮೂಲಕ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಸಚಿವರು, ಶ್ರೀಗಂಧದ ಬೆಳೆಯಿಂದ ರೈತರು ಹೇಗೆಲ್ಲ ಲಾಭಗಳಿಸಬಹುದು? ಒಂದು ಮರದಿಂದ ಎಷ್ಟುಆದಾಯ ಲಭಿಸಲಿದೆ? ಶ್ರೀಗಂಧದ ಕೃಷಿ ಹೇಗೆ? ಎಂಬ ಅಂಶಗಳ ವಿವರಣೆಯನ್ನು ನೋಡಿ, ರೈತರಿಗೆ ನಿಜಕ್ಕೂ ಇದು ಉಪಯುಕ್ತವಾಗಿದ್ದು, ಶ್ರೀಗಂಧದ ಮೂಲಕ ಲಾಭ ಪಡೆಯಬೇಕು ಎಂದರು.

Follow Us:
Download App:
  • android
  • ios