Bengaluru: ಈಜಿಪುರ ಫ್ಲೈಓವರ್ ಗುತ್ತಿಗೆದಾರರ ವಿರುದ್ಧ ಕೇಸ್ ದಾಖಲಿಸಿ: ಹೈಕೋರ್ಟ್
* ಸಿಂಪ್ಲೆಕ್ಸ್ ಕಂಪನಿಯ ಗುತ್ತಿಗೆ ರದ್ದು ಮಾಡಲು ಕೋರಿದ ಅರ್ಜಿ ಪರಿಗಣಿಸಿ
* ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
* ಹೊಸ ಟೆಂಡರ್ ಕರೆಯಲು ಅನುಮತಿ ನೀಡುವಂತೆ ಸರ್ಕಾರವನ್ನು ಕೋರಿದ ಬಿಬಿಎಂಪಿ
ಬೆಂಗಳೂರು(ಫೆ.18): ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜಿಪುರ ನಡುವಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ವಿಳಂಬ ಮಾಡಿದ ಪ್ರಕರಣ ಸಂಬಂಧ ಯೋಜನೆಯ ಗುತ್ತಿಗೆ ಪಡೆದಿದ್ದ ಸಿಂಪ್ಲೆಕ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್(Simplex Infrastructure Limited) ವಿರುದ್ಧ ಎಫ್‌ಐಆರ್(FIR) ದಾಖಲಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದೆ.
ಮೇಲ್ಸೇತುವೆ(Flyover) ಕಾಮಗಾರಿ ವಿಳಂಬವನ್ನು ಆಕ್ಷೇಪಿಸಿ ಕೋರಮಂಗಲದ ಆದಿನಾರಾಯಣ ಶೆಟ್ಟಿಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ.
Peenya Flyover Mess: ಕೇವಲ 12 ವರ್ಷಕ್ಕೆ ಇದೆಂಥಾ ದುಸ್ಥಿತಿ: ಡೆಮಾಲಿಷ್ ಆಗುತ್ತಾ ಫ್ಲೈಓವರ್?
ಯೋಜನೆ ವಿಳಂಬವಾಗಲು ಗುತ್ತಿಗೆದಾರ ಸಂಸ್ಥೆಯೇ ಕಾರಣ. ಯೋಜನೆಯಲ್ಲಿ ಸಾರ್ವಜನಿಕ ಹಣ ವಿನಿಯೋಗಿಸಲಾಗಿದೆ ಹಾಗೂ ಕಾಮಗಾರಿ ವಿಳಂಬದಿಂದ ಹೆಚ್ಚಿನ ಜನರಿಗೆ ತೊಂದರೆ ಉಂಟಾಗಿದೆ. ಆದ್ದರಿಂದ, ಗುತ್ತಿಗೆದಾರ ಸಂಸ್ಥೆ ವಿರುದ್ಧ ಬಿಬಿಎಂಪಿ(BBMP) ಎಫ್‌ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ನ್ಯಾಯಪೀಠ ಆದೇಶಿಸಿತು.
ಅಲ್ಲದೆ, ಗುತ್ತಿಗೆದಾರ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಗುತ್ತಿಗೆ ರದ್ದುಪಡಿಸಲು ಅನುಮತಿ ಕೋರಿ ಬಿಬಿಎಂಪಿ ಬರೆದಿರುವ ಪತ್ರವನ್ನು ಒಂದು ವಾರದಲ್ಲಿ ಪರಿಗಣಿಸಬೇಕು. ಗುತ್ತಿಗೆ ರದ್ದುಪಡಿಸಲು ಬಿಬಿಎಂಪಿಗೆ ಅನುಮತಿ ನೀಡಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿತು.
ಹಾಗೆಯೇ, ಬಿಬಿಎಂಪಿಯು ಸ್ವತಃ ಅಥವಾ ಬೇರಾವುದೇ ಸಂಸ್ಥೆಯ ಮೂಲಕ ಯೋಜನೆ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಲಮಿತಿಯೊಳಗೆ ಶೀಘ್ರ ಯೋಜನೆ ಪೂರ್ಣಗೊಳ್ಳಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಿ, ವಿಚಾರಣೆಯನ್ನು ಮಾ.14ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಚ್.ಸುನೀಲ್ ಕುಮಾರ್, ಮೇಲ್ಸೇತುವೆ ಕಾಮಗಾರಿ ನಿರ್ಮಾಣಕ್ಕೆ ಈ ಹಿಂದೆ ಮಾಡಿಕೊಂಡಿದ್ದ ಗುತ್ತಿಗೆ ರದ್ದುಪಡಿಸಿ, ಹೊಸ ಟೆಂಡರ್(Tender) ಕರೆಯಲು ಅನುಮತಿ ನೀಡುವಂತೆ ಸರ್ಕಾರವನ್ನು ಬಿಬಿಎಂಪಿ ಕೋರಿದೆ. ಈ ವಿಚಾರದಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಬಿಬಿಎಂಪಿ ಪರ ವಕೀಲರು ಉತ್ತರಿಸಿ, ಯಾವಾಗ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ ಎಂಬ ಬಗ್ಗೆ ವಿವರಣೆ ಕೇಳಿ ಗುತ್ತಿಗೆದಾರ ಸಂಸ್ಥೆಗೆ ಎರಡು ಬಾರಿ ನೋಟಿಸ್ ನೀಡಲಾಗಿತ್ತು.
ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸದಿದ್ದರೆ ಗುತ್ತಿಗೆ ರದ್ದುಪಡಿಸುವುದಾಗಿ ಎಚ್ಚರಿಕೆ ಸಹ ನೀಡಲಾಗಿತ್ತು. ಆದರೆ, ಯಾವುದಕ್ಕೂ ಸಂಸ್ಥೆ ಪ್ರತಿಕ್ರಿಯಿಸದ ಕಾರಣ ಗುತ್ತಿಗೆ ರದ್ದುಪಡಿಸಲು ಅನುಮತಿ ನೀಡುವಂತೆ ಸರ್ಕಾರವನ್ನು ಕೋರಲಾಗಿದೆ ಎಂದು ಮಾಹಿತಿ ನೀಡಿದರು.
Peenya Flyover ಸಂಚಾರಕ್ಕೆ ಸುರಕ್ಷಿತವಲ್ಲ: ಸಿಎಂ ಬೊಮ್ಮಾಯಿ
ಈಜಿಪುರ ಜಂಕ್ಷನ್‌ನಿಂದ ಕೋರಮಂಗಲದ ಕೇಂದ್ರೀಯ ಸದನದವರೆಗಿನ 2.5 ಕಿ.ಮೀ ಉದ್ದದ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ(Government of Karnataka), ಬಿಬಿಎಂಪಿ ಸಹಭಾಗಿತ್ವದಲ್ಲಿ ಒಟ್ಟು 157.66 ಕೋಟಿ ವೆಚ್ಚದ ಯೋಜನೆಗೆ 2014ರಲ್ಲಿ ಟೆಂಡರ್ ಕರೆಯಲಾಗಿತ್ತು. ಆದರೆ, ಈವರೆಗೂ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ಪೀಣ್ಯ ಫ್ಲೈಓವರ್ ಟೆಸ್ಟ್‌ಗೇ 9 ತಿಂಗಳು ಬೇಕು..!
ಪೀಣ್ಯ ಮೇಲ್ಸೇತುವೆಯಲ್ಲಿ(Peenya Flyover) ಲಘು ವಾಹನ ಸಂಚಾರಕ್ಕೆ ಸಮಸ್ಯೆಯಿಲ್ಲ. ಆದರೆ ಭಾರೀ ವಾಹನಗಳ ಓಡಾಟಕ್ಕೆ ಅನುಮತಿ ಸಿಗಬೇಕೆಂದರೆ ಇನ್ನಷ್ಟು ವಿಸ್ತೃತ ಪರೀಕ್ಷೆ ನಡೆಸಬೇಕು. ಇದಕ್ಕೆ 6ರಿಂದ 9 ತಿಂಗಳು ಸಮಯಾವಕಾಶ ಬೇಕಾಗುವುದರಿಂದ ಅಲ್ಲಿಯವರೆಗೂ ಭಾರೀ ವಾಹನಗಳ ಸಂಚಾರಕ್ಕೆ ಅನುಮತಿ ಸಿಗುವುದಿಲ್ಲ.
ಮೇಲ್ಸೇತುವೆ(Flyover) ಹೆಚ್ಚು ಭಾರವನ್ನು ತಡೆದುಕೊಳ್ಳುತ್ತದೆಯೇ, ಬಾಗಿರುವ ಕೇಬಲ್‌ಗಳನ್ನು ಸ್ಥಳಾಂತರ ಮಾಡಬೇಕೇ, ಪಿಲ್ಲರ್‌ಗಳ ಸಮಸ್ಯೆಯಿಲ್ಲವೇ ಎಂಬುದು ಸೇರಿದಂತೆ ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಬೇಕಿದೆ. ರಾಸಾಯನಿಕ ವಿಶ್ಲೇಷಣೆ, ನಿರ್ಮಾಣ ಮತ್ತು ವಿಫಲತೆ ಪರೀಕ್ಷೆಯನ್ನೂ(Test) ನಡೆಸಬೇಕಾಗಿದ್ದು, ಇದಕ್ಕೆ ಸಮಯಾವಕಾಶ ಬೇಕಿರುವುದರಿಂದ ಭಾರೀ ವಾಹನ ಸಂಚಾರಕ್ಕೆ ಇನ್ನೂ ತಿಂಗಳುಗಟ್ಟಲೆ ಕಾಯಬೇಕಿದೆ. ಒಂದೊಮ್ಮೆ ಕೇಬಲ್ ಬದಲಿಸಿದರೆ ಸಾಕೇ ಅಥವಾ ಪಿಲ್ಲರ್‌ಗಳನ್ನೇ ಬದಲಿಸಬೇಕೇ ಅಥವಾ ಪೂರ್ಣ ಪ್ರಮಾಣದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಬೇಕೇ ಎಂಬ ಬಗ್ಗೆ ತಜ್ಞರ ತಂಡ ಸುಧೀರ್ಘವಾಗಿ ಪರಿಶೀಲನೆ ನಡೆಸಿ ವಿಸ್ತೃತ ವರದಿ ನೀಡಲಿದೆ.