Asianet Suvarna News

ರಾಘವೇಶ್ವರ ಸ್ವಾಮೀಜಿ ತೇಜೋವಧೆ; ನಕಲಿ ಸಿಡಿ ಪ್ರಕರಣ ವಿಚಾರಣೆ ರದ್ದಿಲ್ಲ

ರಾಮಚಂದ್ರಾಪುರ ಮಠಕ್ಕೆ ಮಹತ್ವದ ಗೆಲುವು/ ನಕಲಿ ಅಶ್ಲೀಲ ಸಿಡಿ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ/  2010ರಲ್ಲಿ ನಡೆದ ಪ್ರಕರಣ/ ತಂತ್ರಜ್ಞಾನ ಬಳಸಿ ಮಾಡಿದ್ದ ಕೆಲಸ/ ವರ್ಷದ ಒಳಗೆ ವಿಚಾರಣೆ ಪೂರ್ಣಗೊಳಿಸಲು ಸೂಚನೆ.

Karnataka High court rejects plea on Raghaveshwara bharathi swamiji fake cd case
Author
Bengaluru, First Published May 5, 2020, 8:28 PM IST
  • Facebook
  • Twitter
  • Whatsapp

ಧಾರವಾಡ(ಮೆ 05) ನಕಲಿ ಅಶ್ಲೀಲ ಸಿ.ಡಿ. ತಯಾರಿಸಿ ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಮಾನಹಾನಿಗೆ ಪ್ರಯತ್ನಿಸಿದ್ದ ಪ್ರಕರಣದ ವಿಚಾರಣೆ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿಯನ್ನು ರಾಜ್ಯ ಹೈಕೋರ್ಟ್ ಧಾರವಾಡ ಪೀಠ ವಜಾ ಮಾಡಿದೆ.

ಪ್ರಕರಣದ ವಿಚಾರಣೆಯನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸುವಂತೆ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಸೂಚನೆ ನೀಡಿದ್ದಾರೆ.

ಜೀವನದಲ್ಲಿ ಗೋವಿನ ಮಹತ್ವ ಎಳೆಎಳೆಯಾಗಿ ಬಿಚ್ಚಿಟ್ಟ ರಾಘವೇಶ್ವರ ಶ್ರೀ

ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀಗಳ ತೇಜೋವಧೆ ಪ್ರಯತ್ನ 2010ರಲ್ಲಿ ನಡೆದಿತ್ತು. ಶ್ರೀಗಳನ್ನು ಹೋಲುವ ವ್ಯಕ್ತಿಯನ್ನು ಬಳಸಿ ಶ್ರೀಗಳ ಹಾವಭಾವವನ್ನು ಆತನಿಗೆ ಕಲಿಸಿ ಚಿತ್ರೀಕರಿಸಲಾಗಿತ್ತು. ಹಾಲಿವುಡ್ ತಂತ್ರಜ್ಞಾನ ಬಳಸಿ ಶ್ರೀಗಳ ಚಿತ್ರಗಳನ್ನು ಅಶ್ಲೀಲ ವೀಡಿಯೊ ಜತೆ ಸೇರಿಸಿ ಅದನ್ನು ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಲಾಗಿತ್ತು.

ಶ್ರೀಮಠ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿತು. ಹಿರಿಯ ಪೊಲೀಸ್ ಅಧಿಕಾರಿ ಗೋಪಾಲ ಹೊಸೂರ್ ನೇತೃತ್ವದ ಪೊಲೀಸರು ದಾಳಿ ನಡೆಸಿದಾಗ ಆರೋಪಿಗಳು ಸಿಕ್ಕಿಹಾಕಿಕೊಂಡಿದ್ದರು. ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದ್ದು, ಪ್ರಸ್ತುತ ಕುಮಟಾ ಜೆಎಂಎಫ್‍ಸಿ ನ್ಯಾಯಾಲಯದಲ್ಲಿ ಪ್ರಕರಣ ಇದೆ. ಆರೋಪಿಗಳು ಕಲಾಪಕ್ಕೆ ಹಲವು ಬಾರಿ ಗೈರುಹಾಜರಾಗಿ ತಮ್ಮ ವಿರುದ್ಧದ ಮೊಕದ್ದಮೆ ವಿಚಾರಣೆಗೆ ತಡೆ ನೀಡಿ, ಪ್ರಕರಣ ವಜಾಗೊಳಿಸುವಂತೆ ಧಾರವಾಡ ಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಂಗಳವಾರ ವಿಡಿಯೊ ಕಾನ್ಫರೆನ್ಸ್ ತಂತ್ರಜ್ಞಾನ ಬಳಸಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಈ ಆದೇಶ ನೀಡಿದ್ದಾರೆ.

Follow Us:
Download App:
  • android
  • ios