Asianet Suvarna News Asianet Suvarna News

KGF ಮಾಜಿ ಶಾಸಕ ಭಕ್ತವತ್ಸಲಂ ನಿಧನ

ರಾಜ್ಯದ ಮೊದಲ ಎಐಡಿಎಂಕೆ ಶಾಸಕರಾಗಿದ್ದ ಭಕ್ತವತ್ಸಲಂ; ಕೆಜಿಎಫ್ ನ್ನು ಮೂರು ಬಾರಿ ಪ್ರತಿನಿಧಿಸಿದ್ದ ಭಕ್ತವತ್ಸಲಂ; 5 ಬಾರಿ ನಗರಸಭೆ ಅಧ್ಯಕ್ಷರಾಗಿ ಮತ್ತು ಒಂದು ಬಾರಿ ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ

Karnataka KGF Former MLA Bhaktavatsalam No More
Author
Bengaluru, First Published Nov 29, 2018, 2:19 PM IST

ಕೋಲಾರ: ಜಿಲ್ಲೆಯ ಕೆಜಿಎಫ್‌ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ.ಭಕ್ತವತ್ಸಲಂ (70) ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ.

ಕೆಜಿಎಫ್‌ನ ರಾಬರ್ಟ್‌ಸನ್‌ಪೇಟೆಯಲ್ಲಿ ವಾಸವಿದ್ದ ಅವರಿಗೆ ಮನೆಯಲ್ಲಿ ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ನಂತರ ಕುಟುಂಬ ಸದಸ್ಯರು ಅವರನ್ನು ಜಿಲ್ಲಾ ಕೇಂದ್ರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರಿದ್ದಾರೆ.

ಕೆಜಿಎಫ್‌ ನಗರಸಭಾ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿದ ಭಕ್ತವತ್ಸಲಂ 1983ರಲ್ಲಿ ಎಐಎಡಿಎಂಕೆ ಪಕ್ಷದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. 1985ರ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಪುನಃ 1989ರಲ್ಲಿ ಎಐಎಡಿಎಂಕೆ ಪಕ್ಷದಿಂದ 2ನೇ ಬಾರಿಗೆ ಮತ್ತು 1999ರಲ್ಲಿ 3ನೇ ಬಾರಿಗೆ ಶಾಸಕರಾದರು.

ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ಎಐಎಡಿಎಂಕೆ ತೊರೆದು ಜೆಡಿಎಸ್‌ ಸೇರಿದ ಅವರು 2008, 2013 ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದರು. 

5 ಬಾರಿ ನಗರಸಭೆ ಅಧ್ಯಕ್ಷರಾಗಿ ಮತ್ತು ಒಂದು ಬಾರಿ ಕೆಜಿಎಫ್‌ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Follow Us:
Download App:
  • android
  • ios