Karnataka Monsoon: ಕೊಡಗಿನಲ್ಲಿ ಚುರುಕುಗೊಂಡ ಮಳೆ; ಕರಾವಳಿಯಲ್ಲಿ ಸಾಧಾರಣ
ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬುಧವಾರ ಸಂಜೆ ಮಳೆ ಚುರುಕುಗೊಂಡಿದೆ. ಲ್ಲೆಯ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂಗಾರು ಚುರುಕುಗೊಳ್ಳುವ ಲಕ್ಷಣ ಮೂಡಿದೆ.
ಮಡಿಕೇರಿ (ಜೂ.22): ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಬುಧವಾರ ಸಂಜೆ ಮಳೆ ಚುರುಕುಗೊಂಡಿದೆ. ಲ್ಲೆಯ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮುಂಗಾರು ಚುರುಕುಗೊಳ್ಳುವ ಲಕ್ಷಣ ಮೂಡಿದೆ.
ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 0.75 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 9.53 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 229.17 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 528.07 ಮಿ.ಮೀ ಮಳೆಯಾಗಿತ್ತು.
ಕೈ ಕೊಟ್ಟ ಮಳೆರಾಯ: ಕಾದು ಕೂತಿದ್ದ ರೈತರಿಗೆ ‘ಅನ್ಯಾಯ’
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.25 ಮಿ.ಮೀ. ಕಳೆದ ವರ್ಷ ಇದೇ ದಿನ 12.42 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 331.05 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 704.53 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 0.24 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.88 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 175.73 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 455.17 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 1.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 5.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 180.73 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 424.50 ಮಿ.ಮೀ. ಮಳೆಯಾಗಿತ್ತು.
ಹೋಬಳಿವಾರು ಮಳೆ ವಿವರ: ಭಾಗಮಂಡಲ 1, ವಿರಾಜಪೇಟೆ ಕಸಬಾ 1.40, ಬಾಳೆಲೆ 0.05, ಸೋಮವಾರಪೇಟೆ ಕಸಬಾ 1.80, ಶನಿವಾರಸಂತೆ 4, ಶಾಂತಳ್ಳಿ 1, ಕುಶಾಲನಗರ 3.80 ಮಿ.ಮೀ. ಮಳೆಯಾಗಿದೆ.
ಕರಾವಳಿಯಲ್ಲಿ ಸಾಧಾರಣ ಮಳೆ
ಮಂಗಳೂರು: ಕರಾವಳಿಯಲ್ಲಿ ಮುಂಗಾರು ಮಳೆ ಬುಧವಾರ ಸಂಜೆ ವೇಳೆಗೆ ಸಾಧಾರಣ ಸುರಿದಿದೆ. ದ.ಕ. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಹಗಲು ಹೊತ್ತು ಮಳೆ ಕಾಣಿಸಿದರೆ, ಮಂಗಳೂರಿನಲ್ಲಿ ಸಂಜೆ ವೇಳೆಗೆ ಮಳೆಯಾಗಿದೆ. ಮುಂಗಾರು ದುರ್ಬಲವಾಗಿರುವ ಕಾರಣ ಕರಾವಳಿಯಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದ್ದು, ಇದು ಇನ್ನೂ ಎರಡು ದಿನಗಳ ಕಾಲ ಹೀಗೆಯೇ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಬೆಳಗ್ಗೆ ಮೋಡ, ಅಲ್ಲಲ್ಲಿ ತುಂತುರು ಮಳೆಯಾಗಿದೆ. ಆದರೆ ಮಂಗಳೂರಿನಲ್ಲಿ ಇಡೀ ದಿನ ಬಿಸಿಲು, ಮೋಡ ಇದ್ದು, ಸಂಜೆ ವೇಳೆಗಷ್ಟೆತುಂತುರು ಮಳೆ ಸುರಿದಿದೆ. ಕರಾವಳಿಯಲ್ಲಿ ಜೂ.25 ಮತ್ತು 26ರಂದು ಯೆಲ್ಲೋ ಅಲರ್ಚ್ ಘೋಷಿಸಲಾಗಿದೆ.
ಯಾದಗಿರಿ: ಕೈಕೊಟ್ಟ ಮಳೆ, ಬೆಳೆಗೆ ನೀರುಣಿಸಲು ಸ್ಟ್ರಿಂಕ್ಲರ್ ಮೊರೆ..!
ಮಂಗಳೂರು 10.5 ಮಿಲಿ ಮೀಟರ್, ಬಂಟ್ವಾಳ 10.6 ಮಿ.ಮೀ, ಬೆಳ್ತಂಗಡಿ 10 ಮಿ.ಮೀ, ಪುತ್ತೂರು 6 ಮಿ.ಮೀ, ಕಡಬ 1 ಮಿ.ಮೀ, ಸುಳ್ಯ 31.5 ಮಿ.ಮೀ. ಮಳೆ ದಾಖಲಾಗಿದೆ.