ಹೊಸ ವರ್ಷದ ಸಂಭ್ರಮಾಚರಣೆ ನಡೆದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಕಮರ್ಷಿಲ್ ಸ್ಟ್ರೀಟ್ ಹಾಗೂ ಸುತ್ತಮುತ್ತಲಿನ ರಸ್ತೆಗಳಲ್ಲಿ ಮದ್ಯದ ಬಾಟಲ್, ಚಪ್ಪಲಿ, ಶೂ, ಬಟ್ಟೆ ಸೇರಿದಂತೆ ಬರೋಬ್ಬರಿ ಒಂಬತ್ತು ಟನ್‌ನಷ್ಟು ಕಸ ರಾಶಿ ತೆರವುಗೊಳಿಸಲಾಗಿದೆ.
Karnataka News Live: ಬೆಂಗಳೂರು - 9 ಟನ್ ಮದ್ಯದ ಬಾಟಲ್, ಚಪ್ಪಲಿ ರಾಶಿ ತೆರವು

ಬಳ್ಳಾರಿ: ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದು ಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿಗೆ, ಕಬ್ಬಿಣದ ರಾಡ್, ಕಲ್ಲು ಹಿಡಿದು ಬಡಿದಾಡಿಕೊಂಡಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಆರು ಸುತ್ತುಗಾಳಿಯಲ್ಲಿ ಗುಂಡು ಹಾರಿಸಿ ಬಳಿಕ ಗೋಲಿಬಾರ್ ನಡೆಸಿದ್ದಾರೆ. ಈ ವೇಳೆ ಗುಂಡೇಟಿಗೆ ಓರ್ವಯುವಕ ಬಲಿಯಾಗಿದ್ದಾನೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮೃತಪಟ್ಟ ವ್ಯಕ್ತಿಯನ್ನು ಬಳ್ಳಾರಿ ಹುಸೇನ ನಗರದ ರಾಜಶೇಖರ (28) ಎಂದು ಹೇಳಲಾಗಿದೆ. ಆತ ತಮ್ಮ ಬೆಂಬಲಿಗ ಎಂದು ಕಾಂಗ್ರೆಸ್ ಶಾಸಕ ನಾರಾ ಭರತರೆಡ್ಡಿ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆ ಬಳಿ ಈ ಘಟನೆ ನಡೆದಿದೆ. ಆದರೆ ಈತ ಬಲಿಯಾಗಿದ್ದು ಪೊಲೀಸರ ಗುಂಡೇಟಿಗೋ? ಸತೀಶ್ ರೆಡ್ಡಿ ಖಾಸಗಿ ಅಂಗರಕ್ಷಕರ ಗುಂಡೇಟಿಗೋ ಎಂಬುದು ಗೊತ್ತಾಗಿಲ್ಲ.
Karnataka News Liveಬೆಂಗಳೂರು - 9 ಟನ್ ಮದ್ಯದ ಬಾಟಲ್, ಚಪ್ಪಲಿ ರಾಶಿ ತೆರವು
Karnataka News Liveಹೊಸ ವರ್ಷಾಚರಣೆಯ ಅಮಲಿನಲ್ಲಿ ಕಿರಿಕ್ ಪಾರ್ಟಿ - ಬೆಂಗ್ಳೂರಲ್ಲಿ ಏನೇನಾಯ್ತು?
ಹೊಸ ವರ್ಷಾಚರಣೆಯ ವೇಳೆ ಬುಧವಾರ ತಡರಾತ್ರಿ ನಗರದಲ್ಲಿ ಕೆಲವೊಂದು ಅವಾಂತರಗಳು ನಡೆದಿದ್ದು, ಕುಡಿದ ಮತ್ತಿನಲ್ಲಿ ಕೆಲವರು ಹೊಡೆದಾಡಿಕೊಂಡಿದ್ದರೆ ಮತ್ತೆ ಕೆಲವರು ಮದ್ಯದ ಅಮಲಿನಲ್ಲಿ ಅಪಘಾತ ಎಸಗಿ ಅಮಾಯಕರನ್ನು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ.
Karnataka News Liveಜಿ ರಾಮ್ ಜಿ, ಅನುದಾನ ಕಡಿತ ವಿರುದ್ಧ ಇಂದು ರಾಜ್ಯ ಸಂಪುಟದಲ್ಲಿ ನಿರ್ಣಯ?
ಕೇಂದ್ರ ಸರ್ಕಾರ ಮನರೇಗಾ ಕಾಯ್ದೆ ಬದಲಾಗಿ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ (ವಿಬಿ ಜಿ ರಾಮ್ ಜಿ) ಜಾರಿ ತಂದಿರುವ ವಿರುದ್ಧ ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಸಾಧ್ಯತೆಗಳಿವೆ.
Karnataka News Liveಸುರೇಶ್ ಕುಮಾರ್ ಸೈಕಲ್ ಸಾಹಸಕ್ಕೆ ಪ್ರಧಾನಿ ಮೋದಿ ಪ್ರಶಂಸೆ
ತಮ್ಮ 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್ ಯಾತ್ರೆ ನಡೆಸಿದ್ದಕ್ಕಾಗಿ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್‌ಕುಮಾರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
Karnataka News Liveಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು
ಬೆಂಗಳೂರಿನ ಯಲಹಂಕದ ಕೋಗಿಲು ಪ್ರದೇಶದಲ್ಲಿ ನಡೆದ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯನ್ನು ‘ಬುಲ್ಡೋಜರ್ ನ್ಯಾಯ’ ಎಂದು ಟೀಕಿಸಿ, ಕರ್ನಾಟಕ ಸರ್ಕಾರದ ಆಕ್ರೋಶಕ್ಕೆ ಗುರಿಯಾಗಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘
Karnataka News Liveಇದು ಲೋಕಲ್ ಎಲೆಕ್ಷನ್ ವರ್ಷ - ಮುಹೂರ್ತ ಫಿಕ್ಸ್ ಆಗುವುದು ನಿಶ್ಚಿತ
ಕಳೆದ ನಾಲ್ಕು ವರ್ಷಗಳಿಂದ ಬಾಕಿ ಉಳಿದಿರುವ ಜಿಪಂ, ತಾಪಂ ಸೇರಿ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಈ ವರ್ಷದಲ್ಲೇ ಮುಹೂರ್ತ ಫಿಕ್ಸ್ ಆಗುವುದು ನಿಶ್ಚಿತ ಎಂಬಂತಾಗಿದೆ. ಈ ಕುರಿತು ಸ್ವತಃ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಭರವಸೆ ನೀಡಿದ್ದಾರೆ.
Karnataka News Liveನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್ ತಯಾರಿ
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಹಣಕಾಸು ವರ್ಷದ ಬಜೆಟ್ ಸಿದ್ಧತೆಗೆ ಅಣಿಯಾಗಿದ್ದು, ಜನವರಿ ಮೊದಲ ವಾರದಿಂದಲೇ ಬಜೆಟ್ ಸಿದ್ಧತಾ ಪೂರ್ವಭಾವಿ ಪ್ರಕ್ರಿಯೆಗಳು ಶುರುವಾಗಲಿವೆ.
Karnataka News Liveಬಳ್ಳಾರಿ - ಗುಂಡೇಟಿಗೆ ಯುವಕ ಬಲಿ - ನಗರದಲ್ಲಿ 144 ಸೆಕ್ಷನ್ ಜಾರಿ
ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಸಂಬಂಧ ಬ್ಯಾನರ್ ಕಟ್ಟುವ ವಿಚಾರವಾಗಿ ಬಳ್ಳಾರಿಯಲ್ಲಿ ರಾದ್ಧಾಂತವೇ ನಡೆದುಹೋಗಿದೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರ ಸಾವಿರಾರು ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ
Karnataka News Liveಶಬರಿಮಲೇಲಿ ಇನ್ನಷ್ಟು ಚಿನ್ನಕ್ಕೆ ಕನ್ನ - ಎಸ್‌ಐಟಿ
ಶಬರಿಮಲೆ ದೇಗುಲದ ಚಿನ್ನಕ್ಕೆ ಕನ್ನ ಪ್ರಕರಣದಲ್ಲಿ ಪ್ರಸ್ತುತ ತಿಳಿದಿರುವುದಕ್ಕಿಂತ ಅಧಿಕ ಪ್ರಮಾಣದ ಹೊನ್ನು ಕಳುವಾಗಿದೆ ಎಂದು ವಿಶೇಷ ತನಿಖಾ ತಂಡ ತಿಳಿಸಿದೆ. 3 ಆರೋಪಿಗಳ ಕಸ್ಟಡಿಗೆ ಕೋರಿ ಕೊಲ್ಲಂ ವಿಚಕ್ಷಣಾ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೀಗೆ ಹೇಳಲಾಗಿದೆ.