ಅತ್ಯಾಚಾರ ಆರೋಪಿಗಳ ಎನ್ಕೌಂಟರ್ : ತಮ್ಮೂರಿನ ಸಜ್ಜನರಿಗೆ ಸಚಿವರ ಅಭಿನಂದನೆ
ಹೈದ್ರಾಬಾದ್ ಅತ್ಯಾಚಾರ ಪ್ರಕರಣ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಕರುನಾಡಿದ ವಿಶ್ವನಾಥ್ ಸಜ್ಜನ್ ಅವರಿಗೆ ರಾಜ್ಯದ ಹಲವೆಡೆಯಿಂದ ಅಭಿನಂದನೆ ತಿಳಿಸಲಾಗುತ್ತಿದೆ.
ಗದಗ [ಡಿ.06]: ಹೈದ್ರಾಬಾದ್ ಪಶುವೈದ್ಯೆ ಅತ್ಯಾಚಾರ ಪ್ರಕರಣದ ನಾಲ್ವರು ಆರೋಪಿಗಳು ಎನ್ ಕೌಂಟರ್ ಗೆ ಬಲಿಯಾಗಿದ್ದಾರೆ. ಪಶುವೈದ್ಯೆಯನ್ನು ಸುಟ್ಟ ಜಾಗದಲ್ಲಿ ನಾಲ್ವರನ್ನು ಎನ್ ಕೌಂಟರ್ ಮಾಡಲಾಗಿದೆ.
ಹುಬ್ಬಳ್ಳಿ ಮೂಲದ ಐಪಿಎಸ್ ಅಧಿಕಾರಿ ವಿ.ಸಿ. ಸಜ್ಜನರ್ ನೇತೃತ್ವದ ತಂಡದಿಂದ ಎನ್ ಕೌಂಟರ್ ಮಾಡಲಾಗಿದ್ದು, ಇದಕ್ಕೆ ಕರ್ನಾಟಕದ ಹಲವೆಡೆ ಅಭಿನಂದನೆ ಸಲ್ಲಿಸಲಾಗುತ್ತಿದೆ.
ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರಿಗೆ ಗದಗ ಜಿಲ್ಲಾ ಉಸ್ತುವಾರಿ ಹಾಗು ಅರಣ್ಯ ಸಚಿವರಾದ ಸಚಿವರಾದ ಸಿಸಿ ಪಾಟೀಲ್ ಅಭಿನಂದನೆ ತಿಳಿಸಿದ್ದಾರೆ. ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೈದರಾಬಾದ್ ಎನ್‌ಕೌಂಟರ್: ಎಲ್ಲೆಲ್ಲೂ ಸಂಭ್ರಮಾಚರಣೆ, ಪೊಲೀಸರ ಮೇಲೆ ಹೂಮಳೆ!...
ಅತ್ಯಾಚಾರಿಗಳು ಪರಾರಿಯಾಗದಂತೆ ಎನ್ ಕೌಂಟರ್ ಮಾಡಿದ ಅಧಿಕಾರಿ ಸಜ್ಜನ್ ಅವರು ಮೂಲತಃ ಗದಗ ಜಿಲ್ಲೆಯ ನರಗುಂದದವರಾಗಿದ್ದು, ಅವರ ಕಾರ್ಯಕ್ಕೆ ತಮ್ಮ ಅಭಿನಂದನೆ ಎಂದು ಸಚಿವರು ಹೇಳಿದ್ದಾರೆ.
ಹೈದ್ರಾಬಾದ್ ಎನ್ ಕೌಂಟರ್ ಪ್ರಕರಣಕ್ಕೆ ರಾಜ್ಯದ ಹಲವೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಲಾಗುತ್ತಿದೆ.
ರಾಜ್ಯದ ಚಿಕ್ಕಮಗಳೂರು, ಹುಬ್ಬಳ್ಳಿ, ಗದಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸುತ್ತಿದ್ದಾರೆ.