Asianet Suvarna News Asianet Suvarna News

ಅಪರಾಧ ತಡೆಗೆ ಕರ್ನಾಟಕ ಪೊಲೀಸ್‌ ಮಹತ್ತರ ಪಾತ್ರ: ಬಾಲಚಂದ್ರ ಜಾರಕಿಹೊಳಿ

ಕರ್ನಾಟಕದ ಪೊಲೀಸರು ಅಪರಾಧ ತಡೆಗಟ್ಟುವಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅಪರಾಧ ಚಟುವಟಿಕೆಗಳಿಗೆ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ಉತ್ತಮ ಕೆಲಸಗಳಿಗಾಗಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಉತ್ತಮ ಭಾಂದವ್ಯ, ಬೆಂಬಲ ಇರಬೇಕು: ಬಾಲಚಂದ್ರ ಜಾರಕಿಹೊಳಿ 

Karnataka Police Plays Major Role in Crime Prevention Says Balachandra Jarkiholi grg
Author
First Published Mar 27, 2023, 3:45 AM IST

ಮೂಡಲಗಿ(ಮಾ.27): ಸಾರ್ವಜನಿಕರ ನೆಮ್ಮದಿಯ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್‌ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.
ತಾಲೂಕಿನ ಕುಲಗೋಡ ಗ್ರಾಮದಲ್ಲಿ ಭಾನುವಾರ 1.32 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್‌ ಠಾಣೆ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಕರ್ನಾಟಕದ ಪೊಲೀಸರು ಅಪರಾಧ ತಡೆಗಟ್ಟುವಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅಪರಾಧ ಚಟುವಟಿಕೆಗಳಿಗೆ ಪೊಲೀಸರು ನಿಗಾ ವಹಿಸುತ್ತಿದ್ದಾರೆ. ಉತ್ತಮ ಕೆಲಸಗಳಿಗಾಗಿ ಸಾರ್ವಜನಿಕರು ಮತ್ತು ಪೊಲೀಸರ ಮಧ್ಯೆ ಉತ್ತಮ ಭಾಂದವ್ಯ, ಬೆಂಬಲ ಇರಬೇಕು ಎಂದು ತಿಳಿಸಿದರು.

ಬೆಳಗಾವಿಯಲ್ಲಿ ಐವರು ಹಾಲಿ, ಮೂವರು ಮಾಜಿಗಳಿಗೆ ಕಾಂಗ್ರೆಸ್‌ ಮಣೆ

ರಾಜ್ಯದಲ್ಲಿ ಗುಪ್ತಚರ ಇಲಾಖೆ ಸಹ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಆದ್ದರಿಂದ ಈ ಇಲಾಖೆಗೆ ಇನ್ನೂ ಹೆಚ್ಚಿನ ಅಧಿಕಾರ ನೀಡುವಂತೆ ಮನವಿ ಮಾಡಿದ ಅವರು, ಪೊಲೀಸರ ಬಗ್ಗೆ ಸಮಾಜದಲ್ಲಿ ಗೌರವ, ಅಭಿಮಾನವಿದೆ. ಪೊಲೀಸರು ಸಹ ಸಾರ್ವಜನಿಕರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳುವಂತೆ ಹೇಳಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಆಗಮಿಸುವ ಅಂತಾರಾಜ್ಯ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಿರಲು ಉನ್ನತ ಮಟ್ಟದ ಅಧಿಕಾರಿಗಳು ಸಂಬಂಧಿಸಿದವರಿಗೆ ಸೂಚನೆ ನೀಡಬೇಕು. ನಮ್ಮ ರಾಜ್ಯಕ್ಕೆ ಆಗಮಿಸುವ ಭಕ್ತ ವೃಂದಕ್ಕೆ ಅನುಕೂಲ ಕಲ್ಪಿಸಿ ಕೊಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಪ್ರಾಸ್ತಾವಿಕವಾಗಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಂಜೀವ ಪಾಟೀಲ ಮಾತನಾಡಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಎಂ.ವೇಣುಗೋಪಾಲ, ಜಿಲ್ಲಾ ಸಶಸ್ತ್ರ ಪಡೆಯ ವರಿಷ್ಠಾಧಿಕಾರಿ ಎಸ್‌.ವಿ. ಯಾದವ, ಪೊಲೀಸ್‌ ಉಪಾಧೀಕ್ಷಕ ಡಿ.ಎಚ್‌.ಮುಲ್ಲಾ, ಸಹಾಯಕ ಕಾರ್ಯಪಾಲಕ ಅಭಿಯಂತರ ವಾಸುದೇವ ವಿ.ಎಚ್‌, ಕುಲಗೋಡ ಗ್ರಾಪಂ ಅಧ್ಯಕ್ಷೆ ವಿಮಲಾ ಸಸಾಲಟ್ಟಿ, ಮೂಡಲಗಿ ಸಿಪಿಐ ಶ್ರೀಶೈಲ ಬ್ಯಾಕೋಡ, ಕುಲಗೋಡ ಪಿಎಸ್‌ಐ ಜಿ.ಎಸ್‌.ಪಾಟೀಲ, ಮೂಡಲಗಿ ಪಿಎಸ್‌ಐ ಸೋಮೇಶ ಗೆಜ್ಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಗೋಕಾಕ ಟಿಎಪಿಸಿಎಂಎಸ್‌ ಅಧ್ಯಕ್ಷ ಅಶೋಕ ನಾಯಿಕ, ಹಿರಿಯ ಮುಖಂಡ ಎ.ಕೆ.ನಾಯಿಕ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಅಪ್ಪಯ್ಯಪ್ಪ ಬಡ್ನಿಂಗಗೋಳ, ಪ್ರಭಾ ಶುಗರ್‌ ಉಪಾಧ್ಯಕ್ಷ ರಾಮಣ್ಣಾ ಮಹಾರಡ್ಡಿ, ಜಿಪಂ ಮಾಜಿ ಸದಸ್ಯರಾದ ಗೋವಿಂದ ಕೊಪ್ಪದ, ರಾಜೇಂದ್ರ ಸಣ್ಣಕ್ಕಿ, ತಾಪಂ ಮಾಜಿ ಸದಸ್ಯ ಸುಭಾಸ ವಂಟಗೋಡಿ, ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ಪುಟ್ಟಣ ಪೂಜೇರಿ, ತಮ್ಮಣ್ಣ ದೇವರ, ಸತೀಶ ವಂಟಗೋಡಿ, ಪ್ರಭಾ ಶುಗರ ನಿರ್ದೇಶಕರಾದ ಎಂ.ಆರ್‌.ಭೋವಿ, ಗಿರೀಶ ಹಳ್ಳೂರ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ಅಶೋಕ ಉದ್ದಪ್ಪನವರ, ಈರಣ್ಣಾ ಜಾಲಿಬೇರಿ, ಎಸ್‌.ಬಿ.ಲೋಕನ್ನವರ ಸೇರಿದಂತೆ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow Us:
Download App:
  • android
  • ios