Karnataka Politics : ಬಿಜೆಪಿ ಬಿರುಗಾಳಿ ಎದುರು ಕಾಂಗ್ರೆಸ್‌ ತರಗೆಲೆ

ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ ಪರವಾದ ಬಿರುಗಾಳಿ ಎದ್ದಿದ್ದು ಕಾಂಗ್ರೆಸ್‌ ತರಗೆಲೆಯಾಗುವುದು ನಿಶ್ಚಿತ. 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮೂಲಕ ಗುಜರಾತ್‌ ಮಾದರಿಯಲ್ಲಿ ದಾಖಲೆ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

Karnataka Politics : Congress fights against BJP Like storm snr

  ಪಾಂಡವಪುರ (ಡೊ.17):  ಕಾಂಗ್ರೆಸ್‌ ಪಕ್ಷ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದೆ. ಆದರೆ, ರಾಜ್ಯದಲ್ಲಿ ಬಿಜೆಪಿ ಪರವಾದ ಬಿರುಗಾಳಿ ಎದ್ದಿದ್ದು ಕಾಂಗ್ರೆಸ್‌ ತರಗೆಲೆಯಾಗುವುದು ನಿಶ್ಚಿತ. 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವ ಮೂಲಕ ಗುಜರಾತ್‌ ಮಾದರಿಯಲ್ಲಿ ದಾಖಲೆ ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಬಿಜೆಪಿ (BJP)  ವತಿಯಿಂದ ನಡೆದ ಜನಸಂಕಲ್ಪ ಯಾತ್ರೆ ಸಮಾವೇಶವನ್ನು ಗೋಪೂಜೆ, ಭತ್ತದ ರಾಶಿಪೂಜೆ ಸಲ್ಲಿಸಿ ವೇದಿಕೆ ಕಾರ‍್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾಂಗ್ರೆಸ್‌ (Congress)  ನಿಲುವು ಸ್ಪಷ್ಟಪಡಿಸಲಿ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಅವರು ಓಟ್‌ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಓಲೈಕೆ, ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಸಿದ್ದರಾಮಯ್ಯ ಟಿಪ್ಪು ಬಗ್ಗೆ ಮಾತನಾಡುತ್ತಾ ಅಲ್ಪಸಂಖ್ಯಾರ ಓಲೈಕೆ ಮಾಡಿಕೊಳ್ಳುತ್ತಿದ್ದರೆ, ಡಿ.ಕೆ.ಶಿವಕುಮಾರ್‌ ಕುಕ್ಕರ್‌ನಲ್ಲಿ ಬಾಂಬ್‌ ಬ್ಲಾಸ್ಟ್‌ ಮಾಡಿದ ಟೆರರಿಸ್ಟ್‌ನನ್ನು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷದ ನಿಲುವು ದೇಶದ ಪರವಾಗೋ ಇಲ್ಲ ಭಯೋತ್ಪಾದಕರ ಪರವಾಗಿದೆಯೋ ಎನ್ನುವುದನ್ನು ಕಾಂಗ್ರೆಸ್‌ನವರು ಸ್ಪಷ್ಟಪಡಿಸಬೇಕು ಎಂದು ಗುಡುಗಿದರು.

ಸಿದ್ದರಾಮಯ್ಯನವರಿಗೆ ಪ್ರಧಾನಮಂತ್ರಿ ಮೋದಿವರನ್ನು ಟೀಕೆ ಮಾಡೋದನ್ನು ಬಿಟ್ಟರೆ ಬೇರೆನೂ ಕೆಲಸವಿಲ್ಲ. ಸಿದ್ದರಾಮಯ್ಯನವರಿಗೆ ಕನಸ್ಸಿನಲ್ಲೂ ನರೇಂದ್ರಮೋದಿ ಬಂದು ಕಾಡುತ್ತಿರಬಹುದು ಎಂದೆನಿಸುತ್ತಿದೆ ಎಂದು ಟೀಕಿಸಿದ ಅವರು, ಸಿದ್ದರಾಮಯ್ಯನವರು ನಾನು ಅನ್ನಭಾಗ್ಯದ ಮೂಲಕ ಜನರಿಗೆ ಅಕ್ಕಿಕೊಟ್ಟೆಎಂದು ಹೇಳಿಕೊಳ್ಳುತ್ತಾರೆ. ಅನ್ನಭಾಗ್ಯದ 30 ರು. ಅಕ್ಕಿ ನರೇಂದ್ರಮೋದಿ ಅವರು ಕೊಟ್ಟಿದ್ದು, ಅಕ್ಕಿಯ ಮೇಲಿದ್ದ 3 ರೂ.ಚೀಲ ಮಾತ್ರ ಸಿದ್ದರಾಮಯ್ಯನವರು ಕೊಟ್ಟಿದ್ದು. ಅನ್ನಭಾಗ್ಯದಲ್ಲಿ ಕನ್ನ ಹೊಡೆದು ಭ್ರಷ್ಟಚಾರ, ಬ್ಲಾಕ್‌ ಮಾರುಕಟ್ಟೆಬೆಂಬಲ ನೀಡಿದವರು ಕಾಂಗ್ರೆಸ್‌ನವರು ಎಂದು ಕಿಡಿಕಾರಿದರು.

ಬಿಜೆಪಿ ಪರ್ವ ಆರಂಭ: ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಪರ್ವ ಆರಂಭಗೊಂಡಿದೆ. ಹೀಗಾಗಲೆ ಮಂಡ್ಯ ಜಿಲ್ಲೆ ಸೇರಿದಂತೆ ಹಳೇಮೈಸೂರು ಭಾಗದಲ್ಲಿ ಬಿಜೆಪಿ ಪ್ರಭಲವಾಗಿ ಬೆಳೆದಿದ್ದು ಮಂಡ್ಯ ಜಿಲ್ಲೆಯಲ್ಲಿ ಮೇಲುಕೋಟೆ ವಿಧಾನಸಭಾ ಕ್ಷೇತ್ರ ಸೇರಿದಂತೆ ಸಹ ನಾಲ್ಕೈದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿ ಮುಖಂಡ ಡಾ.ಇಂದ್ರೇಶ್‌ ಅವರು ಉತ್ತಮ ರೀತಿಯಲ್ಲಿ ಪಕ್ಷ ಸಂಘಟನೆ ಮಾಡುವ ಕೆಲಸ ಮಾಡುತ್ತಿದ್ದಾರೆ. 2023ಕ್ಕೆ ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ಬದಲಾವಣೆಯ ಬಿರುಗಾಳಿ ಮಂಡ್ಯ ಜಿಲ್ಲೆಯಿಂದಲೇ ಆರಂಭಗೊಳ್ಳಲಿ ಎಂದು ತಿಳಿಸಿದರು.

ಸಮಗ್ರ ಅಭಿವೃದ್ಧಿಯ ಕನಸು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಬಲ್‌ ಎಂಜಿನ್‌ ಬಿಜೆಪಿ ಸರ್ಕಾರ ಜನಪರ, ರೈತಪರ, ಮಹಿಳೆಯರ, ಯುವಕರ ಪರವಾಗಿ ಯಶಸ್ವಿ ಆಡಳಿತ ನಡೆಸುವ ಮೂಲಕ ದುಡಿಯುವ ವರ್ಗಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ದಿಯ ಕನಸು ಹೊತ್ತು ಕೆಲಸ ಮಾಡುತ್ತಿದ್ದೇವೆ. ರಾಜ್ಯದ 45 ಸಾವಿರ ನೇಕಾರರಿಗೆ ತಲಾ 5 ಸಾವಿರ ರು. ಹಣ ಹಾಕುವ ಕಾರ‍್ಯಕ್ರಮಕ್ಕೆ ಈಗಷ್ಟೇ ಚಾಲನೆ ನೀಡಿ ಬಂದಿದ್ದೇನೆ. ಯುವಕರು, ಮಹಿಳಾ ಸಬಲೀಕರಣಕ್ಕೆ 5 ಲಕ್ಷ ರು.ವರೆಗೆ ಸಾಲ ಸೌಲಭ್ಯ ನೀಡುತ್ತಿದ್ದೇವೆ, ಕಿಸಾನ್‌ ಸನ್ಮಾನ್‌ ಯೋಜನೆಯಿಂದ ರೈತರ ಖಾತೆಗೆ 10 ಸಾವಿರ ರು. ಹಣ ನೀಡುತ್ತಿದ್ದೇವೆ. ಮೇಲುಕೋಟೆ ಕ್ಷೇತ್ರದಲ್ಲಿ ಕುರುಬ ಹಾಗೂ ವೀರಶೈವ ಲಿಂಗಾಯತರ ಸಮುದಾಯ ಭವನ ನಿರ್ಮಾಣ ಮಾಡುವಂತೆ ಇಂದ್ರೇಶ್‌ ಅವರು ನೀಡಿರುವ ಮನವಿಯನ್ನು ಪರಿಗಣಿಸಿ, ಜಿಲ್ಲಾಧಿಕಾರಿಗಳ ಮೂಲಕ ವರದಿ ತರಿಸಿಕೊಂಡು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

17 ಕೋಟಿ ರು. ಪಾವತಿ: ಮಂಡ್ಯ ಜಿಲ್ಲೆಯಲ್ಲಿ ಸ್ಥಗಿತಗೊಂಡಿದ್ದ ಪಿಎಸ್‌ಎಸ್‌ಕೆ ಹಾಗೂ ಮೈಷುಗರ್‌ ಸಕ್ಕರೆ ಕಾರ್ಖಾನೆ ಆರಂಭಿಸಿದ್ದು ಬಿಜೆಪಿ ಸರ್ಕಾರ. ಕಾರ್ಖಾನೆ ಆರಂಭಿಸುವಂತೆ ರೈತರು ಚಳವಳಿ ನಡೆಸಿದರು ಯಾವ ಸರ್ಕಾರಗಳು ಕ್ರಮವಹಿಸಲ್ಲ. ಮೈಷುಗರ್‌ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲಿಯೇ ಆರಂಭಿಸಿ ಕಬ್ಬಿನ ಪೇಮೆಂಟ್‌ನ್ನು ಮೊದಲ 17 ಕೋಟಿ ರು., ಇದೀಗ 4 ಕೋಟಿ ರು. ಹಣ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮೈಷುಗರ್‌ ಕಾರ್ಖಾನೆಯಲ್ಲಿ ಎಥೆನಾಲ್‌ ಘಟಕ ಆರಂಭಿಸುವ ಮೂಲಕ ಶಾಶ್ವತವಾಗಿ ಕಾರ್ಖಾನೆ ಈ ಭಾಗದ ರೈತರ ಕಬ್ಬು ನುರಿಸುವಂತೆ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಉಮೇಶ್‌ ಮಾತನಾಡಿದರು. ಎಂಎಲ್‌ಸಿ ರವಿಕುಮಾರ್‌, ಜಗದೀಶ್‌ ಹಿರೇಮನಿ, ಡಾ.ಎನ್‌.ಎಸ್‌. ಇಂದ್ರೇಶ್‌, ಮುಖಂಡರಾದ ಅಶೋಕ್‌ಜಯರಾಮು, ಸಿದ್ದರಾಮಯ್ಯ, ಮೈಶುಗರ್‌ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಬಿಜೆಪಿ ತಾಲೂಕು ಅಧ್ಯಕ್ಷ ಅಶೋಕ್‌, ಜಿಲ್ಲಾ ಪ್ರಧಾನ ಕಾರ‍್ಯದರ್ಶಿ ಕಾಂತರಾಜ್‌, ಮಹಿಳಾ ಕಾರ‍್ಯದರ್ಶಿ ಮಂಗಳನವೀನ್‌ಕುಮಾರ್‌, ಮೇಲುಕೋಟೆ ಮಂಡಲ ಅಧ್ಯಕ್ಷ ಎಸ್‌ಎನ್‌ಟಿ ಸೋಮಶೇಖರ್‌, ಮುಖಂಡ ನವೀನ್‌ಕುಮಾರ್‌, ಧನಂಜಯ್‌ ಸೇರಿದಂತೆ ಹಲವರು ಹಾಜರಿದ್ದರು. 

Latest Videos
Follow Us:
Download App:
  • android
  • ios