Karnataka Politics : ಚುನಾವಣೆ ಹೊಸ್ತಿಲಲ್ಲೇ ಹಲವರು ಬಿಜೆಪಿಗೆ ಸೇರ್ಪಡೆ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ದೊಡ್ಡಕಾಟೂರು ಗ್ರಾಮದ ಹಲವು ಯುವ ಮುಖಂಡರು ಅನ್ಯ ಪಕ್ಷಗಳನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದರು.

Karnataka Politics  Many people joined BJP on the threshold of elections snr

  ಮೈಸೂರು :  ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ದೊಡ್ಡಕಾಟೂರು ಗ್ರಾಮದ ಹಲವು ಯುವ ಮುಖಂಡರು ಅನ್ಯ ಪಕ್ಷಗಳನ್ನು ತ್ಯಜಿಸಿ ಬಿಜೆಪಿಗೆ ಸೇರ್ಪಡೆಯಾದರು.

ದೊಡ್ಡಕಾಟೂರು ಗ್ರಾಮದ ಯುವ ಮುಖಂಡರಾದ ರವಿ, ಹರ್ಷ, ಗುರು, ಮಹೇಶ, ದೀಪು, ಪ್ರಮೋದ್‌, ಪ್ರಸನ್ನ, ಸಿದ್ದು, ಮಹದೇವಸ್ವಾಮಿ, ಮಧು, ಯೋಗೀಶ್‌, ಗುರುಮಲ್ಲು, ನವೀನ, ರಾಜು ಸೇರಿದಂತೆ ಹಲವರು ಬಿಜೆಪಿ ಸೇರಿದರು.

ಈ ವೇಳೆ ಬಿಜೆಪಿ ಮುಖಂಡ ಅರುಣ್‌ಕುಮಾರ್‌ ಗೌಡ ಮಾತನಾಡಿ, ಚಾಮುಂಡೇಶ್ವರಿಯಲ್ಲಿ ಈ ಬಾರಿ ಬದಲಾವಣೆಯ ಗಾಳಿ ಬೀಸಿದೆ. ಕ್ಷೇತ್ರದಾದ್ಯಂತ ಯುವ ಪಡೆ ಬಿಜೆಪಿ ಬೆಂಬಲಿಸಲು ನಿರ್ಧಾರ ಮಾಡಿದೆ. ಯಾರು ಏನೇ ಹೇಳಿದರೂ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದರು.

ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ ಗೆಜ್ಜಗಳ್ಳಿ ಮಹೇಶ್‌ ಮಾತನಾಡಿ, ಕ್ಷೇತ್ರದಲ್ಲಿ ಬಿಜೆಪಿ ಪರ ವಾತಾವರಣ ನಿರ್ಮಾಣವಾಗಿದ್ದು ಈ ಬಾರಿ ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲ ಕಾರ್ಯಕರ್ತರ ಮೇಲಿದೆ. ಕಾರ್ಯಕರ್ತರು ಗ್ರಾಮದ ಪ್ರತಿ ಮನೆಮನೆ ಸಂಪರ್ಕ ಮಾಡಿ ಬಿಜೆಪಿ ಸರ್ಕಾರ ಕೊಟ್ಟಂತಹ ಯೋಜನೆಗಳ ಮಾಹಿತಿಗಳನ್ನು ನೀಡುವ ಮೂಲಕ ಜನತೆಯಲ್ಲಿ ಬಿಜೆಪಿ ಬೆಂಬಲಿಸಲು ಮನವಿ ಮಾಡಬೇಕು ಎಂದು ಹೇಳಿದರು.

ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ರವಿ, ಈರಪ್ಪ, ಕಡಕೋಳ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಬ್ಯಾತಹಳ್ಳಿ ಮಧು, ಮುಖಂಡರಾದ ರವಿಕುಮಾರ್‌, ಮೂರ್ತಿ, ನಂದೀಶ್‌, ಮಂಜು, ಸುದೀಪ್‌, ಪುನೀತ್‌, ಮಹೇಶ್‌, ಮಂಜು ಇದ್ದರು.

140 ಕ್ಕೂ ಅಧಿಕ ಸ್ಥಾನ

ಹಿರೇಕೆರೂರ (ಮಾ.20): ಕೇಂದ್ರ ಹಾಗೂ ರಾಜ್ಯದ ಡಬಲ್‌ ಎಂಜಿನ್‌ ಸರ್ಕಾರಗಳು ದಕ್ಷ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿವೆ. ರಾಜ್ಯದಲ್ಲಿ 140ಕ್ಕೂ ಅಧಿಕ ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೇ ಬಿಜೆಪಿ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಅಭಿವೃದ್ಧಿಯ ಕಾರ್ಡ್‌ನೊಂದಿಗೆ ಜನರ ಮುಂದೆ ಹೋಗುತ್ತೇವೆ. ಕಾಂಗ್ರೆಸ್‌ನವರಂತಹ ಗ್ಯಾರಂಟಿ ಕಾರ್ಡ್‌ ನಮ್ಮದಲ್ಲಿ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದೇ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುವುದೇ ಗ್ಯಾರಂಟಿ ಇಲ್ಲ ಎಂದರು.

ವಿಜಯ ಸಂಕಲ್ಪ ಯಾತ್ರೆ ಎಂದರೆ ವಿಜಯದ ಸಂಕೇತವಾಗಿದೆ. ಬಿಜೆಪಿಯಿಂದ ರಾಜ್ಯಾದ್ಯಂತ ಈ ಯಾತ್ರೆ ನಡೆಯುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಾವೇರಿ ಜಿಲ್ಲೆಗೆ ಫಸಲ್‌ ಬಿಮಾ ಯೋಜನೆಯಲ್ಲಿ 435 ಕೋಟಿ ನೀಡಿದೆ. ಇದು ಇತಿಹಾಸದಲ್ಲಿ ಪ್ರಪ್ರಥಮವಾಗಿದೆ. ಕಳೆದ ಮುಂಗಾರಿನ 432 ಕೋಟಿ ಬಿಡುಗಡೆಯಾಗಲಿದೆ. ಅದರಲ್ಲಿ ಹಿರೇಕೆರೂರ ತಾಲೂಕಿನದ್ದು 89 ಕೋಟಿ ಇದೆ. ಈಗಾಗಲೇ 14 ಕೋಟಿ ಮಧ್ಯಂತರ ಪರಿಹಾರ ಬಂದಿದ್ದು, ತಾಲೂಕಿಗೆ 103 ಕೋಟಿ ಬೆಳೆ ವಿಮೆ ಬಂದಿದೆ. ಹಿರೇಕೆರೂರ ಹಾಗೂ ರಟ್ಟೀಹಳ್ಳಿ ತಾಲೂಕಿಗೆ 80 ಕೋಟಿ ಬೆಳೆ ಪರಿಹಾರ ಹಾಗೂ 70 ಕೋಟಿ ಮನೆಗಳ ಪರಿಹಾರ ಬಂದಿದೆ ಎಂದರು.

ಸೊರ​ಬ​ದಲ್ಲಿ ಕುಮಾರ್‌ ಬಂಗಾರಪ್ಪ ಗೆಲ್ಲಿಸಿ: ಬಿ.ಎಸ್‌.ಯಡಿ​ಯೂ​ರ​ಪ್ಪ

ರಾಜ್ಯದ ಬಿಜೆಪಿ ಸರ್ಕಾರ ಹಿರೇಕೆರೂರ ರಟ್ಟೀಹಳ್ಳಿ ತಾಲೂಕಿನ ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಿದೆ. ಕುಡಿಯವ ನೀರು ಪೊರೈಸುವ ಕಾರ್ಯವಾಗಿದೆ. ರಾಜ್ಯಾದ್ಯಂತ ಕೃಷಿ ಇಲಾಖೆಯಿಂದ ರೈತ ಶಕ್ತಿ ಯೋಜನೆಯಿಂದ ಎಕರೆಗೆ 250ರಂತೆ ಐದು ಎಕರೆವರೆಗೆ 1250 ಸಹಾಯಧನ ಬಿಡುಗಡೆ ಮಾಡಲಾಗಿದೆ ಎಂದರು. ರೈತ ವಿದ್ಯಾನಿಧಿ ಯೋಜನೆಯಲ್ಲಿ ರೈತರ ಮಕ್ಕಳಿಗೆ 680 ಕೋಟಿ, ರೈತ ಕಾರ್ಮಿಕರ ಮಕ್ಕಳಿಗೆ 14 ಕೋಟಿ ಬಿಡುಗಡೆಯಾಗಿದೆ. ಈ ಯೋಜನೆಗಳು ನಮ್ಮ ಪ್ರಣಾಳಿಕೆಯಲ್ಲಿ ಹೇಳಿದ ಭರವಸೆಗಳಲ್ಲ, ಪ್ರಣಾಳಿಕೆಯಲ್ಲಿ ಹೇಳದೇ ಇದ್ದರೂ ರೈತ ಶಕ್ತಿ, ರೈತ ವಿದ್ಯಾನಿಧಿ, ರೈತರ ಮಕ್ಕಳು ಕೃಷಿ ಪದವಿ ವ್ಯಾಸಂಗ ಮಾಡಲು ಮೀಸಲಾತಿ ಹೆಚ್ಚಳ ಮಾಡುವ ಮೂಲಕ ರೈತ ಪರವಾಗಿ ಕೆಲಸ ಮಾಡಿದೆ ಎಂದರು.

ಕಾಂಗ್ರೆಸ್‌ ನಾಯಕರಿಗೆ ದೇಶ ಮೊದಲು ಎಂಬ ತತ್ವದಲ್ಲಿ ನಂಬಿಕೆ ಇಲ್ಲ: ಸಿ.ಟಿ.ರವಿ

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಬಿಜೆಪಿ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನವ ಭಾರತ ನಿರ್ಮಾಣಕ್ಕೆ, ನವ ಕರ್ನಾಟಕ, ನವ ಹಾವೇರಿ ಮತ್ತು ನವ ಹಿರೇಕೆರೂರ ನಿರ್ಮಾಣಕ್ಕೆ ಸಂಕಲ್ಪ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈ ಯಾತ್ರೆ ಆರಂಭವಾಗಿದೆ ಎಂದರು.

Latest Videos
Follow Us:
Download App:
  • android
  • ios