Asianet Suvarna News Asianet Suvarna News

Karnataka Politics: 'ವರುಣದಲ್ಲಿ ವಿಜಯೇಂದ್ರ ಗೆದ್ದರೆ ರಾಜಕೀಯ ನಿವೃತ್ತಿ'

ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಿ ಜಯಗಳಿಸಿದರೆ ತಾನು ರಾಜಕೀಯ ನಿವೃತ್ತಿ ಹೊಂದುವುದಾಗಿ ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಮದನ್‌ರಾಜ್‌ ಸವಾಲು ಹಾಕಿದರು.

Karnataka Politics Political retirement if Vijayendra wins in Varuna snr
Author
First Published Dec 15, 2022, 5:21 AM IST

 ಮೈಸೂರು(ಡಿ.15):  ವರುಣ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರ ಸ್ಪರ್ಧಿಸಿ ಜಯಗಳಿಸಿದರೆ ತಾನು ರಾಜಕೀಯ ನಿವೃತ್ತಿ ಹೊಂದುವುದಾಗಿ ಟಿ. ನರಸೀಪುರ ಪುರಸಭೆ ಮಾಜಿ ಅಧ್ಯಕ್ಷ ಮದನ್‌ರಾಜ್‌ ಸವಾಲು ಹಾಕಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರಕ್ಕೂ ವಿಜಯೇಂದ್ರ ಅವರಿಗೂ ಯಾವುದೇ ಸಂಬಂಧವಿಲ್ಲ. ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದಿದ್ದರೂ ಆಗಾಗ್ಗೆ ಕ್ಷೇತ್ರಕ್ಕೆ ಬಂದು ಚುನಾವಣೆಯಲ್ಲಿ (Election) ಸ್ಪರ್ಧಿಸುವುದಾಗಿ ಹೇಳುತ್ತಿದ್ದಾರೆ. ವಿಜಯೇಂದ್ರ (Vijayendra)  ಅವರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಗೆ ಆಗಮಿಸುವ ರೀತಿ ಕ್ಷೇತ್ರಕ್ಕೆ ಆಗಮಿಸಿ, ಜನ ಸೇರುವ ಜಾಗದಲ್ಲಿ ದೊಡ್ಡ ಸುದ್ದಿಯಾಗುವ ರೀತಿ ಮಾತನಾಡಿ ಹೋಗುತ್ತಾರೆ. ಈ ವೇಳೆ ವರುಣ ಕ್ಷೇತ್ರದಲ್ಲಿ ಪಕ್ಷ ತಿಳಿಸಿದರೆ ಸಿದ್ದರಾಮಯ್ಯ ಅವರ ವಿರುದ್ಧ ಕೂಡ ಸ್ಪರ್ಧಿಸಲು ಸಿದ್ಧ ಎಂಬ ಹೇಳಿಕೆ ನೀಡಿ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಟೀಕಿಸಿದರು.

Ground Report : ದಾವಣಗೆರೆಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ನೇರ ಫೈಟ್: ಟಿಕೆಟ್ ಕಸರತ್ತು ಜೋರು

ಆದರೆ ಈವರೆಗೆ ಅವರು ಈ ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಹೀಗಾಗಿ ಅವರು ಬಿಜೆಪಿಯಿಂದ ಸ್ಪರ್ಧಿಸಿದರೆ ಸೋಲುವುದು ಖಚಿತ., ವಿಜಯೇಂದ್ರ ಅವರು ಬಂದಾಗಲೆಲ್ಲ ಕ್ಷೇತ್ರದಲ್ಲಿ ಜಾತಿಯ ವಿಷಬೀಜ ಬಿತ್ತಿ ಹೋಗುತ್ತಿದ್ದಾರೆ. ಆದರೆ ಕ್ಷೇತ್ರದ ಜನ ಇದಕ್ಕೆ ಬಲಿಯಾಗುವುದಿಲ್ಲ. ಏಕೆಂದರೆ ಈ ಹಿಂದಿನಿಂದಲೂ ಕ್ಷೇತ್ರದಲ್ಲಿ ಪ್ರತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಿಗುತ್ತಿರುವ ಮತಗಳ ಪ್ರಮಾಣ ಹೆಚ್ಚುತ್ತಲೇ ಹೋಗುತ್ತಿದೆ ಎಂದು ಅವರು ಹೇಳಿದರು.

ಜೊತೆಗೆ, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಯಾವುದೇ ವಿಶೇಷ ಯೋಜನೆ ನೀಡಿಲ್ಲ. ಕೇವಲ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಶ್ರಮದಿಂದಲೇ ಅನುದಾನ ಬಿಡುಗಡೆಯಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದರ ಅರಿವು ಕ್ಷೇತ್ರದ ಮತದಾರರಿಗೆ ಇದೆ ಎಂದು ಅವರು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಂ¨ಲೇ ಸ್ಪರ್ಧಿಸಿದಲ್ಲಿ ಮತ್ತೆ ಸಿಎಂ ಆಗುತ್ತಾರೆ ಎಂಬ ಆಕಾಂಕ್ಷೆ ಕ್ಷೇತ್ರದ ಮತದಾರರದ್ದಾಗಿದೆ. ಹೀಗಾಗಿ ಸಿದ್ದರಾಮಯ್ಯ ಅವರು ಇಲ್ಲಿಯೇ ಸ್ಪರ್ಧಿಸಬೇಕು ಎಂದು ಅವರು ಮನವಿ ಮಾಡಿದರು.

Assembly election: ಗೆದ್ದವರು, ಸೋತವರ ನಡುವೆಯೇ ಮತ್ತೆ ಕದನ!

ಇನ್ನು, ಬಿ.ವೈ. ವಿಜಯೇಂದ್ರ ಅವರಿಗೆ ಒಂದು ಎಂಎಲ್ಸಿ ಟಿಕೆಟ್‌ ಕೂಡ ಪಡೆಯುವುದು ಸಾಧ್ಯವಾಗಲಿಲ್ಲ. ಹೀಗಾಗಿ ವರುಣ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.

ಪುರಸಭಾ ಸದಸ್ಯ ಮಂಜುನಾಥ್‌, ಕಾಂಗ್ರೆಸ್‌ ಮುಖಂಡ ಮಲ್ಲೇಶ್‌, ಶ್ರೀಕಂಠ ಇದ್ದರು.

ಜಾತಿ ಗೌಣವೇ - ಟಿಕೆಟ್‌ ಫೈಟ್‌: ವಿಜಯನಗರ

ನೂತನ ವಿಜಯನಗರ ಜಿಲ್ಲೆಯ ರಾಜಕೀಯ ಇತಿಹಾಸ ತೆರೆದರೆ ಮೊದಲು ಬಳ್ಳಾರಿ ಜಿಲ್ಲೆಯ ರಾಜಕಾರಣದ ಚರಿತ್ರೆಯತ್ತ ಕಣ್ಣುಹಾಯಿಸಬೇಕು. ಮಂಡಕ್ಕಿ, ಮಂಡಾಳು ತಿಂದು ರಾಜಕಾರಣ ಮಾಡುತ್ತಿದ್ದ ನೆಲದಲ್ಲಿ ಗಣಿ ದುಡ್ಡು ಹರಿದಾಡಿದ ಬಳಿಕ ಜಿಲ್ಲೆಯ ರಾಜಕೀಯ ಚಿತ್ರಣವೇ ಬದಲಾಗಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿದ್ದು, ಇದರಲ್ಲಿ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಕೂಡ್ಲಿಗಿ ಮೀಸಲು ಕ್ಷೇತ್ರಗಳು. ಇನ್ನು ವಿಜಯನಗರ ಹಾಗೂ ಹರಪನಹಳ್ಳಿ ಸಾಮಾನ್ಯ ಕ್ಷೇತ್ರಗಳು. ಈ ಹಿಂದೆ ಜಿಲ್ಲೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆಯುತ್ತಿತ್ತು. ಆದರೆ ಇದೀಗ ಜೆಡಿಎಸ್‌ ಶಕ್ತಿಗುಂದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಕದನ ಕುತೂಹಲ ಏರ್ಪಟ್ಟಿದೆ. ಜಿಲ್ಲೆಯ ಎಲ್ಲಾ ಚುನಾವಣೆಯಲ್ಲಿ ಬಹುತೇಕ ಗಣಿದುಡ್ಡಿನದ್ದೇ ದರ್ಬಾರ್‌ ನಡೆಯುತ್ತಾ ಬಂದಿರುವುದರಿಂದ ಜಾತಿ ಲೆಕ್ಕಾಚಾರ ಗೌಣವಾಗಿದ್ದು, ಸಂಘಟನೆ ಮತ್ತು ಸಂಪನ್ಮೂಲವೇ ಮುಖ್ಯವಾಗುತ್ತದೆ. ಅದರ ಆಧಾರದ ಮೇಲೆಯೇ ಈ ಬಾರಿಯೂ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ವಿಜಯನಗರ: ಆನಂದ್‌ ಸಿಂಗ್‌ ಎದುರು ಕಾದಾಟಕ್ಕೇ ಕಾದಾಟ

ವಿಜಯನಗರ ಕ್ಷೇತ್ರ ಈ ಹಿಂದೆ ಕಾಂಗ್ರೆಸ್‌ನ ಭದ್ರಕೋಟೆ. ಈಗ ಸದ್ಯ ಬಿಜೆಪಿ ಇಲ್ಲಿ ಪ್ರಾಬಲ್ಯ ಮೆರೆಯುತ್ತಿದೆ. ಪ್ರವಾಸೋದ್ಯಮ ಸಚಿವ ಆನಂದ ಸಿಂಗ್‌ 2008ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 2008 ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಅವರು, 2018ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದಿದ್ದರು. ಆ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರ್ಪಡೆಯಾದರು. ತದನಂತರ ನಡೆದ ಉಪ ಚುನಾವಣೆಯಲ್ಲಿ ಕಮಲದ ಚಿಹ್ನೆಯಡಿ ಸ್ಪರ್ಧಿಸಿ ಗೆದ್ದು, ಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿದ್ದ ಮಾಜಿ ಶಾಸಕ ಎಚ್‌.ಆರ್‌.ಗವಿಯಪ್ಪ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಗವಿಯಪ್ಪ ಅವರು ಈ ಬಾರಿ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಇವರ ಜತೆಗೆ ಇನ್ನೂ ಹತ್ತಕ್ಕೂ ಹೆಚ್ಚು ಮಂದಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮಾಜಿ ಶಾಸಕ ಸಿರಾಜ್‌ ಶೇಖ್‌ ಹಾಗೂ ಮುಖಂಡರಾದ ರಾಜಶೇಖರ್‌ ಹಿಟ್ನಾಳ, ಇಮಾಮ್‌ ನಿಯಾಜಿ ಇವರಲ್ಲಿ ಪ್ರಮುಖರು. ಆನಂದ ಸಿಂಗ್‌ ಪ್ರಭಾವಿ ವ್ಯಕ್ತಿ. ಹೀಗಾಗಿ ‘ಸಂಪನ್ಮೂಲ’ ಸುರಿಯುವವರಿಗೆ ಕೈ ಹೈಕಮಾಂಡ್‌ ಮಣೆ ಹಾಕಲಿದೆ ಎಂಬ ಲೆಕ್ಕಾಚಾರ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಜೆಡಿಎಸ್‌ನಲ್ಲಿ ಪಕ್ಷದ ರಾಜ್ಯ ವಕ್ತಾರ ನೂರ್‌ ಅಹಮದ್‌, ಜಿಲ್ಲಾಧ್ಯಕ್ಷ ಕೆ.ಕೊಟ್ರೇಶ್‌ ಆಕಾಂಕ್ಷಿಗಳು. ಆಮ್‌ ಆದ್ಮಿ ಪಕ್ಷದಿಂದ ಶಂಕರದಾಸ್‌, ಕಿಚಡಿ ಕೊಟ್ರೇಶ್‌ ಅವರು ಟಿಕೆಟ್‌ಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಅದೇ ರೀತಿ ಎಸ್‌ಡಿಪಿಐ, ಕೆಆರ್‌ಎಸ್‌, ಸಿಪಿಐಎಂ ಪಕ್ಷಗಳೂ ಸ್ಪರ್ಧಿಸುವುದು ಪಕ್ಕಾ ಆಗಿದ್ದು, ಸೂಕ್ತ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿವೆ.

Follow Us:
Download App:
  • android
  • ios