ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಲು ಆರ್‌ಪಿಐ (ಅಠಾವಳೆ) ಪಕ್ಷವು ಬಿಜೆಪಿ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ ತಿಳಿಸಿದರು.

 ಮೈಸೂರು : ಈ ಬಾರಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳನ್ನು ಸೋಲಿಸಲು ಆರ್‌ಪಿಐ (ಅಠಾವಳೆ) ಪಕ್ಷವು ಬಿಜೆಪಿ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಎಂ. ವೆಂಕಟಸ್ವಾಮಿ ತಿಳಿಸಿದರು.

ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪಕ್ಷವು ಸಹಕರಿಸಲಿದೆ. ಕೇಂದ್ರದಲ್ಲಿ ಎನ್‌ಡಿಎ ಮೈತ್ರಿ ಪಕ್ಷವಾಗಿರುವ ಆರ್‌ಪಿಐ ಪಕ್ಷವು ಕರ್ನಾಟಕದಲ್ಲೂ ಬಿಜೆಪಿ ಜೊತೆ ಕೈ ಜೋಡಿಸಲಿದೆ. ಕಳೆದ 60 ವರ್ಷಗಳ ಕಾಲ ವಂಶಾಡಲಿತದ ಪಕ್ಷವಾಗಿ ಅಧಿಕಾರ ನಡೆಸಿರುವ ಕಾಂಗ್ರೆಸ್‌ ಪಕ್ಷವು ಕರ್ನಾಟಕದಲ್ಲೂ ಜನವಿರೋಧಿ ಆಡಳಿತವನ್ನೇ ನೀಡಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿದ್ದರಾಮಯ್ಯ ಅವರು ಕಾಂಗ್ರೆಸ್‌ ಪಕ್ಷ ಸೇರಿದ ನಂತರ ಆ ಪಕ್ಷದಲ್ಲಿನ ದಲಿತ ನಾಯಕತ್ವವನ್ನು ಪಕ್ಷಕ್ಕೆ ಸರಿಸಿ ದಲಿತ ವಿರೋಧಿಯಾಗಿದೆ. ಅಲ್ಲದೆ, ಹೊಸ ಪರಂಪರೆಯ ಅಹಿಂದ ಮತದಾರರು ಕಾಂಗ್ರೆಸ್‌ ಆಡಳಿತವನ್ನು ತಿರಸ್ಕರಿಸಿದ್ದಾರೆ. ಮುಖ್ಯಮಂತ್ರಿ ಕುರ್ಚಿಯ ಪೈಪೋಟಿಯಲ್ಲಿ ಇದು 4-5 ಗುಂಪುಗಳಾಗಿ ಮತದಾರರಲ್ಲಿ ವಿಶ್ವಾಸ ಕಳೆದುಕೊಂಡಿದೆ. ಇಂದಿನ ಯುವ ಮತದಾರರು ಮೋದಿ ಅವರ ಅಭಿವೃದ್ಧಿಯತ್ತ ಮುಖಮಾಡಿ ಇಡೀ ದೇಶದಾದ್ಯಂತ ಕಾಂಗ್ರೆಸ್‌ ಪಕ್ಷವನ್ನು ರಾಷ್ಟ್ರೀಯ ಪಕ್ಷವಾಗಿ ಅಪ್ರಸ್ತುತಗೊಳಿಸುತ್ತಿದ್ದಾರೆ ಎಂದರು.

ಮುಂದಿನ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ಸನ್ನು ಅಪ್ರಸ್ತುತಗೊಳಿಸುತ್ತಾರೆ ಎಂಬುದು ಆರ್‌ಪಿಎ ಅಭಿಪ್ರಾಯ. ಬಳಿಕ, ಕುಟುಂಬ ರಾಜಕಾರಣಕ್ಕೆ ಹೆಸರಾಗಿರುವ ಜೆಡಿಎಸ್‌ ಮುಂದಿನ ಚುನಾವಣೆಯಲ್ಲಿ ಅವಕಾಶವಾದಿ ರಾಜಕಾರಣ ಮಾಡಿದಷ್ಟುಶಾಸಕರ ಸಂಖ್ಯೆಗೆ ಕುಸಿಯುತ್ತದೆ. ದೇವೇಗೌಡರ ಕುಟುಂಬದ ರಾಜಕಾರಣಕ್ಕೆ ರೋಸಿಹೋಗಿ ಈಗಾಗಲೇ ಇದರ ಹಲವು ಶಾಸಕರು, ಮುಖಂಡರು ಆ ಪಕ್ಷವನ್ನು ತೊರೆದಿದ್ದಾರೆ ಎಂದು ಅವರು ಹೇಳಿದರು.

ಚುನಾವಣೆ ಹೊತ್ತಿಗೆ ಮತ್ತಷ್ಟುಜೆಡಿಎಸ್‌ ಮುಖಂಡರು ಬೇರೆ ಪಕ್ಷಗಳಿಗೆ ವಲಸೆ ಹೋಗುತ್ತಾರೆ. ಎಎಪಿ, ಬಿಎಸ್‌ಪಿ ಮತ್ತಿತರೆ ಪಕ್ಷಗಳು ಖಾತೆಯನ್ನೇ ತೆರೆಯದಂತೆ ತಿರಸ್ಕರಿಸಿ ಮತದಾರರು ಬಿಜೆಪಿಯನ್ನು ಬೆಂಬಲಿಸುವುದಾಗಿ ಅವರು ಹೇಳಿದರು.

ಪ್ರಸ್ತುತ 10 ರಿಂದ 12 ಕ್ಷೇತ್ರಗಳನ್ನು ಆರ್‌ಪಿಐ ಪಕ್ಷಕ್ಕೆ ಬಿಜೆಪಿ ಬಿಟ್ಟುಕೊಡುವ ಬಗ್ಗೆ ಮಾತುಕತೆ ನಡೆದಿದೆ. ಸಹಮತ ಏರ್ಪಟ್ಟಲ್ಲಿ ಹನೂರು, ಕೊಳ್ಳೇಗಾಲ, ಗುಂಡ್ಲುಪೇಟೆ ಸೇರಿದಂತೆ ರಾಜ್ಯದ 10 ರಿಂದ 12 ಕಡೆ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದರು.

 ಬೆಳಗಾವಿಯಲ್ಲಿ ಜಾತಿ ಲೆಕ್ಕಾಚಾರ ಜೋರು

ಶ್ರೀಶೈಲ ಮಠದ

ಬೆಳಗಾವಿ(ಮಾ.25): ಜಿಲ್ಲೆಯಲ್ಲೇ ಅತೀ ಹೆಚ್ಚು ಸಾಕ್ಷರತೆ ಹೊಂದಿರುವ ಕ್ಷೇತ್ರ ಎಂಬ ಹೆಗ್ಗಳಿಕೆ ಹೊತ್ತಿರುವ ಬೆಳಗಾವಿ ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಪಕ್ಷಗಳಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ. ತನ್ನ ಅಭ್ಯರ್ಥಿ ಘೋಷಣೆಗೂ ಮೊದಲೇ ಬಿಜೆಪಿಗೆ ಜೆಡಿಎಸ್‌ ಶಾಕ್‌ ನೀಡಿದ್ದರೆ, ಕಾಂಗ್ರೆಸ್‌ಗೆ ಎಐಎಂಐಎಂ ಶಾಕ್‌ ಕೊಟ್ಟಿದೆ.

ಸಾಕ್ಷರತೆ ಕ್ಷೇತ್ರವಾಗಿದ್ದರೂ ಇಲ್ಲಿ ಮತದಾನ ಪ್ರಮಾಣ ಕಡಿಮೆ. ಹಾಗಾಗಿ, ಇಲ್ಲಿ ಗೆಲುವು ಯಾರಿಗೂ ಸುಲಭವಲ್ಲ. ಬಿಜೆಪಿಯ ಅನಿಲ ಬೆನಕೆ ಹಾಲಿ ಶಾಸಕ. ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ನಿಲ್ಲಲ್ಲಿದ್ದಾರೆ. ಆದರೆ, ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಕಾಂಗ್ರೆಸ್‌ನಲ್ಲಿಯೂ ಆಕಾಂಕ್ಷಿಗಳ ಸಂಖ್ಯೆ ದುಪ್ಪಟ್ಟಾಗಿದೆ. ಇಲ್ಲಿ ಧರ್ಮ, ಜಾತಿ ಆಧಾರದ ಮೇಲೆ ಚುನಾವಣೆ ನಡೆಯುತ್ತ ಬಂದಿದೆ. ಹಾಗಾಗಿ, ಈಗ ಜಾತಿ ಲೆಕ್ಕಾಚಾರವೇ ಇಲ್ಲಿ ಪ್ರಮುಖವಾಗಿದೆ. ಆದರೆ, ಪ್ರಮುಖ ಪಕ್ಷಗಳಲ್ಲಿನ ಅಭ್ಯರ್ಥಿಗಳು ಯಾರು ? ಎಂಬುದಕ್ಕೆ ಇನ್ನು ಉತ್ತರ ಸಿಕ್ಕಿಲ್ಲ. ಎಲ್ಲವೂ ಇನ್ನೂ ಅಸ್ಪಷ್ಟವಾಗಿದೆ.

ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ: ಬಾಲಚಂದ್ರ ಜಾರಕಿಹೊಳಿ

ಹಾಲಿ ಬಿಜೆಪಿ ಶಾಸಕ ಅನಿಲ ಬೆನಕೆ ಮರಾಠ ಸಮುದಾಯಕ್ಕೆ ಸೇರಿದ್ದರೆ, ಕಾಂಗ್ರೆಸ್‌ನಿಂದ ಮಾಜಿ ಶಾಸಕ ಫಿರೋಜ್‌ ಸೇಠ್‌, ಅವರ ಸಹೋದರ ಆಸೀಫ್‌ ಉರ್ಪ ರಾಜು ಸೇಠ್‌ ಪ್ರಮುಖ ಆಕಾಂಕ್ಷಿಗಳು. ಲಿಂಗಾಯತ ಮತಗಳು ಇಲ್ಲಿ ನಿರ್ಣಾಯಕ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಲಿಂಗಾಯತ ಸಮುದಾಯವನ್ನು ಕಡೆಗಣಿಸಿವೆ ಎನ್ನುವ ಆರೋಪ ಕೇಳಿಬರುತ್ತಿವೆ. ಲಿಂಗಾಯತ ಸಮುದಾಯದ ಮುಖಂಡರು ರಾಷ್ಟ್ರೀಯ ಪಕ್ಷಗಳೊಂದಿಗೆ ಮುನಿಸಿಕೊಂಡಿದ್ದಾರೆ. ಹಾಗಾಗಿ, ಲಿಂಗಾಯತ ಸಮುದಾಯದ ಲಾಭ ಪಡೆಯಲು ಜೆಡಿಎಸ್‌ ರಣತಂತ್ರ ಹೆಣದಿದೆ. ವೀರಶೈವ ಲಿಂಗಾಯತ ಸಮುದಾಯದ ರೈತ ಮುಖಂಡ ಶಿವಾನಂದ ಮುಗಳಿಹಾಳ ಅವರನ್ನು ಕಣಕ್ಕಿಳಿಸಲು ಜೆಡಿಎಸ್‌ ಪ್ಲಾನ್‌ ಮಾಡುವ ಮೂಲಕ ಬಿಜೆಪಿಗೆ ಶಾಕ್‌ ನೀಡಿದ್ದರೆ, ಎಐಎಂಐಎಂ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡುವ ಮೂಲಕ ಕಾಂಗ್ರೆಸ್‌ಗೆ ಶಾಕ್‌ ಕೊಟ್ಟಿದೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಓಲೈಕೆಗೆ ಜೆಡಿಎಸ್‌ ಮುಂದಾಗಿದೆ. ಬೆಳಗಾವಿ ಉತ್ತರದಲ್ಲಿ ಲಿಂಗಾಯತರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಮುಸ್ಲಿಂ ಮತ್ತು ಮರಾಠ ಸಮುದಾಯ ಎರಡನೇ ಸ್ಥಾನದಲ್ಲಿದೆ.