Asianet Suvarna News Asianet Suvarna News

Karnataka Politics: ಜೆಡಿಎಸ್‌, ಬಿಜೆಪಿ 123 ಸ್ಥಾನ ಗೆದ್ದಿರುವ ಇತಿಹಾಸವಿಲ್ಲ

ರಾಜ್ಯದಲ್ಲಿ ಜೆಡಿಎಸ್‌ ಅಥವಾ ಬಿಜೆಪಿ 123 ಸ್ಥಾನಗಳನ್ನು ಗೆದ್ದಿರುವ ಇತಿಹಾಸವಿಲ್ಲ ಎಂದು ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಗೆ ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದರು.

Karnataka Politics: There is no history of JDS BJP winning 123 seats snr
Author
First Published Dec 30, 2022, 6:02 AM IST

  ನಾಗಮಂಗಲ (ಡಿ. 30):  ರಾಜ್ಯದಲ್ಲಿ ಜೆಡಿಎಸ್‌ ಅಥವಾ ಬಿಜೆಪಿ 123 ಸ್ಥಾನಗಳನ್ನು ಗೆದ್ದಿರುವ ಇತಿಹಾಸವಿಲ್ಲ ಎಂದು ಮಾಜಿ ಸಿಎಂ ಹೆಚ್ಡಿಕೆ ಹೇಳಿಕೆಗೆ ಕೆಪಿಸಿಸಿ ಉಪಾಧ್ಯಕ್ಷ ಎನ್‌.ಚಲುವರಾಯಸ್ವಾಮಿ ತಿರುಗೇಟು ನೀಡಿದರು.

ತಾಲೂಕಿನ ತಟ್ಟಹಳ್ಳಿಯಲ್ಲಿ ಆಯೋಜಿಸಿದ್ದ ಕರಡಹಳ್ಳಿ ಗ್ರಾಪಂ ವ್ಯಾಪ್ತಿಯ ಬೂತ್‌ ಮಟ್ಟದ ಕಾಂಗ್ರೆಸ್‌ ಕಾರ್ಯಕರ್ತರ ಮತ್ತು 2023ರ ಚುನಾವಣಾ ಪ್ರಚಾರಸಭೆಯಲ್ಲಿ ಮಾತನಾಡಿ, ಈ ಹಿಂದೆ ನನ್ನನ್ನು ಸ್ನೇಹಿತ ಎಂದಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ವೇಳೆ ವೈರಿ ಎಂದಿದ್ದಾರೆ.

ಈ ಎರಡು ಬಗೆಯ ಹೇಳಿಕೆಗಳನ್ನು ಜನರೇ ತುಲನೆ ಮಾಡಬೇಕು ಎಂದರು.

ಮಾಜಿ ಸಿಎಂ ಎಚ್‌ಡಿಕೆ ಜನರನ್ನು ನಂಬಿಸಲು ಸುಳ್ಳು ಭರವಸೆ ಕೊಡುತ್ತಾರೋ ಅಥವಾ ನಿಜವಾದ ಕಾಳಜಿಯಿಂದ ಭರವಸೆ ಕೊಡುತ್ತಾರೋ ಎಂಬುದನ್ನು ಜನರೇ ಅರ್ಥೈಸಿಕೊಳ್ಳಬೇಕು. ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಬಿಪಿಎಲ… ಕಾರ್ಡದಾರರಿಗೆ ಉಚಿತವಾಗಿ 7 ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಅದನ್ನು 5 ಕೆಜಿಗೆ ಇಳಿಸಿದವರು ಇದೇ ಕುಮಾರಸ್ವಾಮಿ ಸರ್ಕಾರ ಎಂದು ದೂರಿದರು.

2023ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಬಿಪಿಎಲ… ಕಾರ್ಡ್‌ದಾರರಿಗೆ ಉಚಿತವಾಗಿ ತಲಾ

10 ಕೆ.ಜಿ. ಅಕ್ಕಿ ಸೇರಿದಂತೆ ಕಳೆದ ನಾಲ್ಕೂವರೆ ವರ್ಷದಲ್ಲಿ ಸ್ಥಗಿತಗೊಂಡಿರುವ ವಸತಿ, ಕೃಷಿಹೊಂಡ, 8ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ…

ಸೇರಿದಂತೆ ಹಲವಾರು ಯೋಜನೆಗಳು ಮತ್ತೆ ಜಾರಿಗೊಳ್ಳಲಿವೆ ಎಂದು ಹೇಳಿದರು.

ನಂತರ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸಭೆ ನಡೆಸಿದರು. ಜೆಡಿಎಸ್‌ನ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು. ಈ ವೇಳೆ ಚಲುವರಾಯಸ್ವಾಮಿ ಅವರಿಗೆ ತಟ್ಟಹಳ್ಳಿ, ಹರಳಕೆರೆ, ದೊಡ್ಡಯಗಟಿ, ಚಿಕ್ಕಯಗಟಿ, ಹುಳ್ಳೇನಹಳ್ಳಿ, ಕರಡಹಳ್ಳಿ, ದಂಡಿಗನಹಳ್ಳಿ ಹಾಗೂ ಬೀರೇಶ್ವರಪುರ ಗ್ರಾಮಗಳಲ್ಲಿ ಹೆಣ್ಣುಮಕ್ಕಳು ಪೂರ್ಣಕುಂಭ ಸ್ವಾಗತ ಮತ್ತು ಬೆಲ್ಲದ ಆರತಿ ಬೆಳಗಿ ಬರಮಾಡಿಕೊಂಡರೆ, ಕಾರ್ಯಕರ್ತರು ಕ್ರೇನ್‌ ಹಾಗೂ ಜೆಸಿಬಿ ಯಂತ್ರಗಳ ಮೂಲಕ ಬೃಹತ್‌ ಗಾತ್ರದ ಸೇಬು, ಕೊಬ್ಬರಿ ಮತ್ತು ಗುಲಾಬಿ ಹೂವಿನ ಹಾರದೊಂದಿಗೆ ಹೂಮಳೆ ಸುರಿಸಿ ಅದ್ಧೂರಿ ಸ್ವಾಗತ ಕೋರಿದರು.

Haveri: ಮಾರ್ಚ್‌ನಲ್ಲಿ ಹಿಂದುಳಿದ ವರ್ಗಗಳ ಕಾಂಗ್ರೆಸ್‌ ಸಮಾವೇಶ: ಮಧು ಬಂಗಾರಪ್ಪ

ಈ ವೇಳೆ ಚಲುವರಾಯಸ್ವಾಮಿ ಪುತ್ರ ಸಚ್ಚಿನ್‌, ತಾಲೂಕು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎನ್‌.ಜೆ.ರಾಜೇಶ್‌, ಮಾಜಿ ಅಧ್ಯಕ್ಷ ಎಂ.ಪ್ರಸನ್ನ, ಜಿಪಂ ಮಾಜಿ ಸದಸ್ಯ ಎಂ.ಹುಚ್ಚೇಗೌಡ, ಮನ್ಮುಲ… ಮಾಜಿ ನಿರ್ದೇಶಕರಾದ ತಟ್ಟಹಳ್ಳಿ ನರಸಿಂಹಮೂರ್ತಿ, ಡಿ.ಟಿ. ಕೃಷ್ಣೇಗೌಡ, ಕರಡಹಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಶಿವಣ್ಣ, ಮುಖಂಡರಾದ ಉದಯಕಿರಣ್‌, ಬಾಲಾಜಿ, ಗೋವಿಂದೇಗೌಡ, ಕೆ.ಎಂ.ರಾಮು, ರವಿ, ಪ್ರಕಾಶ್‌, ರಮೇಶ್‌ ಸೇರಿದಂತೆ ಹಲವರು ಇದ್ದರು.

ಕಾಂಗ್ರೆಸ್ ಬಲಗೊಳಿಸಲು ತಂತ್ರ

ಕಾರವಾರ (ಡಿ.28) : ವಿವಿಧ ಕಾರಣಗಳಿಗೆ ಬಿಜೆಪಿ ಕಡೆ ವಾಲಿರುವ ಹಿಂದುಳಿದ ವರ್ಗಗಳ ಮತದಾರರನ್ನು  ಸೆಳೆಯಲು ಹಾಗೂ ಅವರನ್ನು ರಾಜಕೀಯವಾಗಿ ಮುಂಚೂಣಿಗೆ ತರಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸಿದೆ ಎಂದು ಕಾಂಗ್ರೆಸ್ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು. 

ಶಿರಸಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಧ್ಯಮ ಗೋಷ್ಠಿ ಆಯೋಜಿಸಿ ಮಾತನಾಡಿದ ಅವರು, ಕಾಂಗ್ರೆಸ್(Congress) ಪಕ್ಷದ ಶಕ್ತಿಯೇ ಹಿಂದುಳಿದ ವರ್ಗದ ಮತದಾರರಾಗಿದ್ದಾರೆ. ಆದರೆ, ಕೆಲವು ಪ್ರಮಾಣದಲ್ಲಿ ಕಾಲಕ್ರಮೇಣ ಅವರು ಬಿಜೆಪಿ(BJP) ಕಡೆ ವಾಲಿದ್ದಾರೆ. ಅಂತಹ ಮತದಾರರನ್ನು ಕಾಂಗ್ರೆಸ್ ತನ್ನತ್ತ ಸೆಳೆಯಲು ಕಾರ್ಯಕ್ರಮ ರೂಪಿಸಿದೆ. ಈಗಾಗಲೇ 22 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಅಲ್ಲಿನ ಹಿರಿಯರು, ಪಕ್ಷದ ಪದಾಧಿಕಾರಿಗಳ ಜತೆ ಚರ್ಚಿಸಿ ಸಂಘಟನಾತ್ಮಕ ನಿರ್ಣಯ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ  ಮತದಾರರನ್ನು ಮುಂಚೂಣಿಗೆ ತರಲು ಕ್ರಮ ತೆಗೆದುಕೊಳ್ಳುವ ಜತೆ ಪದಾಧಿಕಾರಿ ಸ್ಥಾನ ನೀಡಲು  ಚಿಂತನೆ ನಡೆದಿದೆ ಎಂದರು.

ಎಲ್ಲ ಜಿಲ್ಲೆಯಲ್ಲೂ ಕಾಂಗ್ರೆಸ್‌ ಒಬಿಸಿ ಸಮಾವೇಶ: ಮಧು ಬಂಗಾರಪ್ಪ

 ಒಬಿಸಿ(OBC) ಪುನರ್ ರಚನೆ, ಪದಾಧಿಕಾರಿಗಳ ನೇಮಕ ಶೀಘ್ರದಲ್ಲೇ ಮಾಡಲಾಗುವುದು. ಇದರ ಜತೆ ಪ್ರತಿಯೊಂದು ಜಿಲ್ಲಾ ಮಟ್ಟದಲ್ಲಿ ಒಬಿಸಿ ಸಮಾವೇಶ ಸಂಘಟಿಸಲು ತೀರ್ಮಾನಿಸಲಾಗಿದೆ. ಜ.15ರಿಂದ ಫೆ.28ರೊಳಗೆ ಆ ಸಮಾವೇಶ ಪೂರ್ಣಗೊಂಡ ನಂತರ ರಾಜ್ಯ ಸಮಾವೇಶ ಮಾಡಲಾಗುವುದು ಎಂದರು. 

Follow Us:
Download App:
  • android
  • ios