Asianet Suvarna News Asianet Suvarna News

ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ. ರಘು ಇನ್ನಿಲ್ಲ: ಅವರ ಸಾಧನೆ ಎಂಥದ್ದು ಗೊತ್ತಾ?

ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ ರಘು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಭಾನುವಾರ ವಿಧಿವಶರಾಗಿದ್ದಾರೆ.

Karnataka Renowned food expert KC Raghu no more Do you know what his achievement sat
Author
First Published Oct 15, 2023, 4:50 PM IST

ಬೆಂಗಳೂರು (ಅ.15): ಕನ್ನಡ ನಾಡಿನ ಹೆಸರಾಂತ ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ಭಾನುವಾರ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ ವಾಸವಿದ್ದ ರಘು ಅವರಿಗೆ 60 ವರ್ಷ ವಯಸ್ಸಾಗಿದ್ದು, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಜೊತೆಗೆ, ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದರು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಬೆಳಗ್ಗೆ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಮಾಹಿತಿ ನೀಡಿದ್ದಾರೆ. ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.

ಹೊಸಕೋಟೆ- ದೊಡ್ಡಬಳ್ಳಾಪುರ ರಸ್ತೆಯಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದ ಕಾರು

ರಘು ಅವರು ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿ ಕೆಲಸ ಮಾಡಿದ್ದು, ಆಹಾರ ಆರೋಗ್ಯದ ವಿಚಾರದಲ್ಲಿ ಉತ್ತಮ ಜ್ಞಾನ ಹೊಂದಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಆರೋಗ್ಯ ಸಂಬಂಧಿತ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ರಘು ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಯಾವುದೇ ವೇದಿಕೆಗಳಲ್ಲಿ ನಿರರ್ಗಳವಾಗಿ ಮಾತನಾಡ್ತಿದ್ದ ಕೆ.ಸಿ. ರಘು ಅವರು ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ, ಚಿಕ್ಕ ವಯಸ್ಸಿಗೆ ಸಾವನ್ನಪ್ಪಿರುವುದು ನಾಡಿಗೆ ನಷ್ಟವಾಗಿದೆ. ಇನ್ನು ಈ ಬಗ್ಗೆ ಅವರ ಪತ್ನಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, "ಎ-40, 4ನೇ ಮಹಡಿ, ಬ್ರಿಗೇಡ್ ಕಲಾಡಿಯಂ (Brigade Caladium) ದಾಸರಹಳ್ಳಿ ಮೇನ್ ರೋಡ್, ಅಮೃತನಗರ, ದಾಸರಹಳ್ಳಿ, ಬೆಂಗಳೂರು - 560024. Mob- 98800 09140 ' ಎಂದು ಪೋಸ್ಟ್‌ ಮಾಡಿಕೊಂಡಿದ್ದಾರೆ.

ಬೆಂಗಳೂರಲ್ಲಿ ನಾಯಿದು ಕಬಾಬ್‌, ನಾಯಿದು ಮಂಚೂರಿ ಮಾರಾಟ: ಈ ಹೋಟೆಲ್‌ಗೆ ಹೋಗೋ ಮುನ್ನ ಎಚ್ಚರ!

ಇನ್ನು ಸ್ವತಃ ರಘಿ ಅವರೇ ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಿಂದ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ನೀಡುವ ಬಗ್ಗೆ ಸಂಶೋಧನೆ ಮಾಡಿ ದೇಶಾದ್ಯಂತ ಆಹಾರ ಒದಗಿಸುತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಿದ್ದರು. ಕೆ.ಸಿ.ರಘು ಆಹಾರಕ್ಕೆ ಸಂಬಂಧಪಟ್ಟ ಲೇಖಕರಾಗಿ, ‘ಆಹಾರ ರಾಜಕೀಯ’ ಮತ್ತು ‘ತುತ್ತು ತತ್ವ’ ಎಂಬ ಪುಸ್ತಕಗಳನ್ನು ಬರೆದು ಪ್ರಕಟ ಮಾಡಿದ್ದರು.

Follow Us:
Download App:
  • android
  • ios