ಶೀಘ್ರ ರಾಜ್ಯದಲ್ಲಿ ಮತ್ತೊಂದು ಚುನಾವಣೆ : ಭವಿಷ್ಯ ನುಡಿದ ನಾಯಕ!
ಶೀಘ್ರದಲ್ಲಿ ರಾಜ್ಯದಲ್ಲಿ ಮತ್ತೊಂದು ಚುನಾವಣೆ ಎದುರಾಗಲಿದೆ ಎಂದು ಭವಿಷ್ಯ ನುಡಿಯಲಾಗಿದೆ. ಆದ್ದರಿಂದ ಸಿದ್ಧತೆ ನಡೆಸುವುದು ಸೂಕ್ತ ಎಂದು ನಾಯಕರು ಹೇಳಿದ್ದಾರೆ.
ಉಡುಪಿ [ಆ.27]: ಇಪ್ಪತ್ತು ದಿನ ಸಂಪುಟ ರಚನೆ ಮಾಡದೆ, ವಾರ ಕಳೆದರೂ ಮಂತ್ರಿಗಳಿಗೆ ಖಾತೆ ಹಂಚುವುದಕ್ಕೆ ಸಾಧ್ಯವಾಗದಿರುವ ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದ ರಾಜಕೀಯ ಇತಿಹಾಸದಲ್ಲೇ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದೆ ಎಂದು ಮಾಜಿ ಶಾಸಕ, ಅಖಿಲ ಭಾರತ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್ ಸಮಿತಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಯು.ಆರ್. ಸಭಾಪತಿ ಟೀಕಿಸಿದ್ದಾರೆ.
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಇದಕ್ಕೆ ಬಿಜೆಪಿ ನಾಯಕತ್ವ ನೇರ ಹೊಣೆ. ರಾಜ್ಯದ 17 ಜಿಲ್ಲೆಗಳಲ್ಲಿ ಭೀಕರ ಅತಿವೃಷ್ಟಿಯಿಂದ ನಲುಗಿ 50 ಸಾವಿರ ಕೋಟಿಗೂ ಹೆಚ್ಚು ನಷ್ಟವಾಗಿದ್ದರೂ ಕೇಂದ್ರದಿಂದ ಚಿಕ್ಕಾಸು ಪಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬಿಜೆಪಿಯಿಂದ ರಾಜ್ಯದ ಈ ಅತಂತ್ರ ಪರಿಸ್ಥಿತಿಯಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಜನತೆ ತೀವ್ರ ಸಮಸ್ಯೆ
ಎದುರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸದ್ಯ ಭವಿಷ್ಯದಲ್ಲಿ ಬಿಜೆಪಿಯ ಕುತಂತ್ರ ರಾಜಕಾರಣ ಅವರೊಳಗಿನ ಒಳಜಗಳ ಅದಕ್ಕೇ ಮುಳುವಾಗಲಿದೆ. ಶೀಘ್ರದಲ್ಲಿಯೇ ಚುನಾವಣೆ ಎದುರಾಗುವ ಎಲ್ಲ ಲಕ್ಷಣಗಳೂ ಕಾಣುತ್ತಿವೆ. ಆದ್ದರಿಂದ ಕಾಂಗ್ರೆಸ್ ಕಾರ್ಯಕರ್ತರು ಚುನಾವಣಾ ಸಿದ್ಧತೆ ನಡೆಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.