ನಗದು ವ್ಯವಹಾರದ ಮೇಲೆ ನಿಗಾ ವಹಿಸಿ​ ಎಂದು ನೀತಿ ಸಂಹಿತೆ ನೋಡಲ್‌ ಅಧಿಕಾರಿಯಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

 ಮೈಸೂರು : ನಗದು ವ್ಯವಹಾರದ ಮೇಲೆ ನಿಗಾ ವಹಿಸಿ​ ಎಂದು ನೀತಿ ಸಂಹಿತೆ ನೋಡಲ್‌ ಅಧಿಕಾರಿಯಾದ ಜಿಪಂ ಸಿಇಒ ಕೆ.ಎಂ. ಗಾಯತ್ರಿ ಬ್ಯಾಂಕ್‌ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಪಂ ಸಭಾಂಗಣದಲ್ಲಿ ನಡೆದ ಬ್ಯಾಂಕ್‌ ವಹಿವಾಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಲೀಡ್‌ ಬ್ಯಾಂಕ್‌ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ ನಗದು ವ್ಯವಹಾರದ ಮೇಲೆ ನಿಗಾ ಇಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಹೇಳಿದರು.

ಎಸ್‌ಎಜಿ ಅಕೌಂಟ್‌ಗಳಿಗೆ ಸಾಲ ಮಂಜೂರು ಮಾಡುವ ಸಂಬಂಧ ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಬಂದ ನಂತರ ಸಾಲ ಮಂಜೂರು ಮಾಡಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.

ಸ್ವೀಪ್‌ ಕಾರ್ಯಕ್ರಮದ ಅಂಗವಾಗಿ ವೋಟರ್‌ ರಿಜಿಸ್ಪ್ರೇಷನ್‌ ಅಪ್ಲಿಕೇಶನ್‌ ಕುರಿತು ಬ್ಯಾಂಕ್‌ ಮ್ಯಾನೇಜರ್‌ಗಳಿಗೆ ಮಾಹಿತಿ ನೀಡಿದರು.

ಪ್ರತೀ ಕ್ಷೇತ್ರಕ್ಕೆ ಮೂರು ಹೆಸರು ಕಳಿಸಲು ಸೂಚನೆ

ಬೆಂಗಳೂರು(ಏ.05): ಪ್ರಸಕ್ತ ವಿಧಾನಸಭಾ ಚುನಾವಣೆಗೆ ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕಡ್ಡಾಯವಾಗಿ ಮೂವರು ಆಕಾಂಕ್ಷಿಗಳ ಅಥವಾ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಶಿಫಾರಸು ಮಾಡುವಂತೆ ಬಿಜೆಪಿ ಹೈಕಮಾಂಡ್‌ ರಾಜ್ಯ ಘಟಕಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಹೊರವಲಯದ ರೆಸಾರ್ಚ್‌ವೊಂದರಲ್ಲಿ ನಡೆದ ಬಿಜೆಪಿಯ ರಾಜ್ಯ ಕೋರ್‌ ಕಮಿಟಿ ಮತ್ತು ಚುನಾವಣಾ ಸಮಿತಿಗಳ ಸಭೆಯಲ್ಲಿ ಮೊದಲ ದಿನ 102 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಬುಧವಾರ ಇನ್ನುಳಿದ 122 ವಿಧಾನಸಭಾ ಕ್ಷೇತ್ರಗಳಿಗೆ ಆಕಾಂಕ್ಷಿಗಳ ಹೆಸರುಗಳನ್ನು ಅಂತಿಮಗೊಳಿಸಲಾಗುತ್ತದೆ.

ಬುಧವಾರ ರಾತ್ರಿ ಅಥವಾ ಗುರುವಾರ ಎಲ್ಲ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ಮೂರು ಹೆಸರುಗಳನ್ನು ಒಳಗೊಂಡ ಪಟ್ಟಿಯು ಬಿಜೆಪಿ ಹೈಕಮಾಂಡ್‌ಗೆ ತಲುಪಲಿದೆ. ಬಳಿಕ ಶನಿವಾರ ಕೇಂದ್ರ ಸಂಸದೀಯ ಮಂಡಳಿ ಸಭೆ ನಡೆದು ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಆಖೈರುಗೊಳಿಸಿ ಬಿಡುಗಡೆಗೊಳಿಸುವ ಸಾಧ್ಯತೆಯಿದೆ.

ರಾಜಕೀಯ ಅಖಾಡಕ್ಕೆ ಧುಮುಕಿದ ಕಿಚ್ಚ ಸುದೀಪ್: ನಾಳೆ ಬಿಜೆಪಿ ಸೇರ್ಪಡೆ ಸಾಧ್ಯತೆ

2 ದಿನ ಸುದೀರ್ಘ ಸಭೆ:

ಸಾಮಾನ್ಯವಾಗಿ ಹಿಂದಿನ ಚುನಾವಣೆಗಳಲ್ಲಿ ರಾಜ್ಯ ಕೋರ್‌ ಕಮಿಟಿಯು ಎರಡು ಅಥವಾ ಮೂರು ಗಂಟೆಗಳ ಸಭೆ ನಡೆಸಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಸಿದ್ಧಪಡಿಸಿ ದೆಹಲಿಗೆ ಕಳುಹಿಸುತ್ತಿತ್ತು. ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಎರಡು ದಿನಗಳ ಕಾಲ ಸುದೀರ್ಘ ಕೋರ್‌ ಕಮಿಟಿ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಡಿ.ವಿ.ಸದಾನಂದಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಇಡೀ ದಿನ ಸಭೆಯಲ್ಲಿ ಪಾಲ್ಗೊಂಡಿದ್ದರು.

ಈಗಾಗಲೇ ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಸ್ಥಳೀಯ ಮುಖಂಡರ ಹಾಗೂ ಜಿಲ್ಲಾ ಕೋರ್‌ ಕಮಿಟಿಗಳ ಸದಸ್ಯರ ಅಭಿಪ್ರಾಯ ಸಂಗ್ರಹಿಸಿರುವ ಹಿನ್ನೆಲೆಯಲ್ಲಿ ಆ ಮಾಹಿತಿಯನ್ನು ಮುಂದಿಟ್ಟುಕೊಂಡು ಅಭ್ಯರ್ಥಿಗಳ ಆಯ್ಕೆ ಬಗ್ಗೆ ರಾಜ್ಯ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ಪ್ರಾಚ್ಯ ವಸ್ತು ಮತ್ತು ಸಂಗ್ರಹಾಲಯ ಆಯುಕ್ತ ದೇವರಾಜ್‌, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರು, ಮುಖ್ಯ ಲೆಕ್ಕಾಧಿಕಾರಿ ಮೊದಲಾದವರು ಇದ್ದರು.