ಹೆಜಮಾಡಿ ಟೋಲ್‌ ದರ ಯಥಾಸ್ಥಿತಿ ಕಾಪಾಡಿ: ಸಚಿವ ಅಂಗಾರ ಸೂಚನೆ

 ಹೆಜಮಾಡಿ ಟೋಲ್‌ ಗೇಟ್‌ಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯಬೇಕು. ಯಾವುದೇ ಕಾರಣಕ್ಕೂ, ರದ್ದಾಗಿರುವ ಸುರತ್ಕಲ್‌ ಟೋಲ್‌ನ ಶುಲ್ಕವನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿ ಜನರಿಂದ ಸಂಗ್ರಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

Keep Hezmadi toll rate unchanged says Minister Angars notice rav

ಉಡುಪಿ (ಡಿ.4) : ಹೆಜಮಾಡಿ ಟೋಲ್‌ ಗೇಟ್‌ಲ್ಲಿ ಈ ಹಿಂದೆ ಪಡೆಯುತ್ತಿರುವ ದರಗಳನ್ನು ಮಾತ್ರ ಪಡೆಯಬೇಕು. ಯಾವುದೇ ಕಾರಣಕ್ಕೂ, ರದ್ದಾಗಿರುವ ಸುರತ್ಕಲ್‌ ಟೋಲ್‌ನ ಶುಲ್ಕವನ್ನು ಹೆಜಮಾಡಿ ಟೋಲ್‌ನಲ್ಲಿ ವಿಲೀನಗೊಳಿಸಿ ಜನರಿಂದ ಸಂಗ್ರಹಿಸಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಅವರು ಶನಿನಾರ ತಾಲೂಕು ಕಚೇರಿಯಲ್ಲಿ ನಡೆದ, ಸುರತ್ಕಲ್‌ ಟೋಲ್‌ ಪ್ಲಾಜಾವನ್ನು ತೆರವುಗೊಳಿಸಿ, ಹೆಜಮಾಡಿ ಟೋಲ್‌ ಪ್ಲಾಜಾದಲ್ಲಿ ಹೆಚ್ಚುವರಿ ಟೋಲ್‌ ಸಂಗ್ರಹಣೆ ಮಾಡುವ ವಿವಾದದ ಹಿನ್ನೆಲೆಯಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ವೀಡಿಯೋ ಕಾನ್ಫರೆ®್ಸ… ಮೂಲಕ ಮಾತನಾಡಿದರು.

Udupi: ಹೆಜಮಾಡಿಯಲ್ಲಿ ಡಬಲ್ ಟೋಲ್ ಸಂಗ್ರಹಿಸಿದರೆ ಉಗ್ರ ಹೋರಾಟ- ಸಮಿತಿ ಎಚ್ಚರಿಕೆ

ಸುರತ್ಕಲ್‌ ಟೋಲ್‌ ದರವನ್ನು ಹೆಜಮಾಡಿ ಟೋಲ್‌ ದರದಲ್ಲಿ ವಿಲೀನಗೊಳಿಸುವುದಕ್ಕೆ ಮೊದಲು ಜಿಲ್ಲಾಡಳಿತದ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಕೇಳದೇ ಏಕಾಏಕಿ ನಿರ್ಧಾರ ಕೈಗೊಂಡಿರುವುದಕ್ಕೆ ಸಚಿವರು ರಾ.ಹೆ.ಪ್ರಾಧಿಕಾರದ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಟೋಲ್‌ ದರ ವಿವಾದದ ಬಗ್ಗೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದು, ಅಲ್ಲಿಯವರೆಗೆ ಯಥಾಸ್ಥಿತಿಯಲ್ಲಿ ಹಿಂದಿನ ಶುಲ್ಕವನ್ನೇ ವಾಹನಗಳಿಂದ ಪಡೆಯುವಂತೆ ಸಚಿವರು ಸೂಚನೆ ನೀಡಿದರು.

ಸುರತ್ಕಲ್‌ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಗೆ ನೀಡುತ್ತಿದ್ದ ರಿಯಾಯಿತಿಗಳನ್ನು ಹೆಜಮಾಡಿ ಟೋಲ್‌ನಲ್ಲಿ ಉಡುಪಿ ಜಿಲ್ಲೆಯ ವಾಹನಗಳಿಗೆ ನೀಡುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಸಚಿವ ಸುನಿಲ್‌ ಕುಮಾರ್‌ ಹಾಗೂ ಶಾಸಕ ರಘುಪತಿ ಭಟ್‌ ಸಲಹೆ ಮಾಡಿದರು. 

ಹೆಜಮಾಡಿ: ಸದ್ಯಕ್ಕಿಲ್ಲ ದುಪ್ಪಟ್ಟು ಟೋಲ್‌ ಸಂಗ್ರಹ

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಕಾಪು ಶಾಸಕ ಲಾಲಾಜಿ, ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ., ಎಸ್‌ಪಿ ಹಾಕೆ ಅಕ್ಷಯ್‌ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್‌., ರಾ.ಹೆ. ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios