218 ಟನ್‌ ತೂಕದ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಅಂತಿಮ ಹಂತದ ಸಿದ್ಧತೆ

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಆವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಅಂತಿಮ ಹಂತದ ಸಕಲ ಸಿದ್ಧತೆ ಭರದಿಂದ ಸಾಗಿದೆ. 

Kempegowda statue weighing 218 tons will be unveiled on October 11 gvd

ಬೆಂಗಳೂರು (ನ.10): ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಆವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಅಂತಿಮ ಹಂತದ ಸಕಲ ಸಿದ್ಧತೆ ಭರದಿಂದ ಸಾಗಿದೆ. ಕೆಂಪೇಗೌಡ ಆವರ ಆಶಯಗಳನ್ನು ಸಂಕೇತಿಸುವಂತೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಿರುವ ಈ ಪ್ರತಿಮೆಯ ಅನಾವರಣವನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ನೆರವೇರಿಸಲಿದ್ದಾರೆ. 

ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್‌.ಅಶೋಕ್‌, ಆರೋಗ್ಯ ಸಚಿವ ಡಾ. ಕೆ.ಸುಧಾಕರ್‌ ಸೇರಿದಂತೆ ಇತರೆ ಸಚಿವರು ಸತತವಾಗಿ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಯ ಪರಿಶೀಲನೆ ನಡೆಸಿದ್ದಾರೆ. ಒಟ್ಟು .64 ಕೋಟಿ ವೆಚ್ಚದಲ್ಲಿ ಕೆಂಪೇಗೌಡ ಪ್ರತಿಮೆಯನ್ನು ನಿರ್ಮಿಸಲಾಗಿದೆ. 218 ಟನ್‌ ಕಂಚು ಮತ್ತು ಉಕ್ಕನ್ನು ಬಳಸಿಕೊಂಡು ನಿರ್ಮಾಣ ಮಾಡಲಾಗಿದೆ. 98 ಟನ್‌ ಕಂಚು, 120 ಟನ್‌ ಉಕ್ಕನ್ನು ಬಳಸಲಾಗಿದೆ. 

ಸರ್ಕಾರವೇಕೆ ಕೆಂಪೇಗೌಡರ ಪ್ರತಿಮೆ ನಿರ್ಮಿಸಿದೆ?: ಸಚಿವ ಸುಧಾಕರ್‌

ಕೆಂಪೇಗೌಡ ಆವರ ಕೈಯಲ್ಲಿರುವ ಖಡ್ಗದ ತೂಕವು ಬರೋಬ್ಬರಿ 4 ಸಾವಿರ ಕೆ.ಜಿ. ಇದೆ. ‘ಏಕತಾ ಪ್ರತಿಮೆ’, ‘ಸ್ಟ್ಯಾಚು ಆಪ್‌ ಲಿಬರ್ಟಿ’ ಹೀಗೆ ಜಗತ್ತಿನ ಗಮನಸೆಳೆದಿರುವ ಪ್ರತಿಮೆಗಳ ಸಾಲಿಗೆ ‘ಪ್ರಗತಿಯ ಪ್ರತಿಮೆ’ ಕೂಡ ಸೇರುತ್ತದೆ. ವಿಮಾನ ನಿಲ್ದಾಣದಲ್ಲಿ ಲೋಕಾರ್ಪಣೆಯಾಗಲಿರುವ ಕೆಂಪೇಗೌಡರ 108 ಅಡಿ ಪ್ರತಿಮೆಯನ್ನು ಖ್ಯಾತ ಶಿಲ್ಪಿ ನೋಯ್ಡಾದ ರಾಮ್‌ ಸುರತ್‌ ಅವರು ಸೃಷ್ಟಿಸಿದ್ದಾರೆ. ಗುಜರಾತ್‌ನಲ್ಲಿನ ಸರ್ದಾರ್‌ ವಲಭಬಾಯಿ ಪಟೇಲ್‌ ಪ್ರತಿಮೆಯೂ ಸೇರಿದಂತೆ ಹಲವು ಪ್ರತಿಮೆಗಳನ್ನು ಅರಳಿಸಿರುವ ಸಾಧಕರಾಗಿದ್ದಾರೆ.

ಇದೇ ವೇಳೆ ಕೆಂಪೇಗೌಡ ಅವರ ಇತಿಹಾಸ, ಸಾಧನೆ ಮತ್ತು ಪರಂಪರೆಯನ್ನು ಸಾರುವ ಆಕರ್ಷಕ ಕೆಂಪೇಗೌಡ ಥೀಮ್‌ ಪಾರ್ಕ್ ಸಹ ಲೋಕಾರ್ಪಣೆ ಮಾಡಲಾಗುತ್ತಿದೆ. ಥೀಮ್‌ ಪಾರ್ಕ್ ಸ್ಥಾಪನೆಗೆ ಸರ್ಕಾರವು .30 ಕೋಟಿ ವೆಚ್ಚ ಮಾಡಲಾಗುತ್ತಿದ್ದು, 23 ಎಕರೆಯಲ್ಲಿ ಹೆರಿಟೇಜ್‌ ಪಾರ್ಕ್ ನಿರ್ಮಿಸಲಾಗುತ್ತಿದೆ. ಈ ಸಂಬಂಧ ರಾಜ್ಯದೆಲ್ಲೆಡೆಯಿಂದ ಪವಿತ್ರ ಮೃತ್ತಿಕಾ (ಮಣ್ಣು) ಸಂಗ್ರಹಣ ಮಾಡಲಾಗಿದೆ. ರಾಜ್ಯದೆಲ್ಲೆಡೆಯಿಂದ ಸಂಗ್ರಹಿಸಿರುವ ಮಣ್ಣನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್‌ಪಾರ್ಕ್ನಲ್ಲಿ ಬಳಕೆ ಮಾಡಲಾಗುತ್ತದೆ. ವಿಧಾನಸೌಧದ ಆವರಣದಲ್ಲಿನ ಸಂವಿಧಾನ ಶಿಲ್ಪಿ ಡಾ

ಬಿ.ಆರ್‌.ಅಂಬೇಡ್ಕರ್‌, ಮಾಜಿ ಮುಖ್ಯಮಂತ್ರಿಗಳಾದ ಕೆಂಗಲ್‌ ಹನುಮಂತಯ್ಯ, ದೇವರಾಜು ಅರಸು, ಲಾಲ್‌ ಬಹದ್ದೂರ್‌ ಶಾಸ್ತ್ರಿ ಸೇರಿದಂತೆ ಇತರೆ ಗಣ್ಯರ ಪ್ರತಿಮೆಗಳ ಬಳಿಯಿಂದ ಮಣ್ಣನ್ನು ಸಹ ಸಂಗ್ರಹಿಸಲಾಗಿದೆ. ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯ ಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹ ಮಾಡಲಾಗಿದೆ.

ವಿಧಾನಸೌಧ ಮುಂಭಾಗದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ: ಸಚಿವ ಅಶೋಕ್‌

ಸಮಾವೇಶಕ್ಕೆ 2 ಲಕ್ಷಕ್ಕೂ ಹೆಚ್ಚು ಜನರ ನಿರೀಕ್ಷೆ: ಕೆಂಪೇಗೌಡರ ಪ್ರತಿಮೆ ಅನಾವರಣ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾವೇಶಕ್ಕಾಗಿ ಸಕಲ ಸಿದ್ಧತೆ ನಡೆದಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಅಸೀನರಾಗಲು ವ್ಯವಸ್ಥೆ ಮಾಡಲಾಗುತ್ತಿದೆ. ದೂರದ ಊರುಗಳಿಂದ ಜನರು ಆಗಮಿಸಲಿದ್ದಾರೆ. ಅವರ ಆಗಮಿಸುವ ವಾಹನಗಳ, ಬಸ್‌, ಕಾರ್‌ಗಳಿಗೆ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗುತ್ತಿದೆ. ನಾಲ್ಕು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Latest Videos
Follow Us:
Download App:
  • android
  • ios