ಮಂಡ್ಯದ ನೆರವಿಗೆ ‘ಕೆಜಿಎಫ್‌’ ನಿರ್ಮಾಪಕ ವಿಜಯ್‌ ಕಿರಗಂದೂರು ಕೊರೋನಾ ಸೋಂಕಿತರಿಗೆ ಅನುಕೂಲವಾಗುವ ವ್ಯವಸ್ಥೆ ಕಲ್ಪಿಸಲು ಡೀಸಿಗೆ ಪತ್ರ  ‘ಹೊಂಬಾಳೆ ಗ್ರೂಫ್ಸ್‌’ ಮೂಲಕ ಹುಟ್ಟೂರಿಗೆ ನೆರವು

ಮಂಡ್ಯ (ಮೇ.11): ಬಹುಭಾಷೆಗಳಲ್ಲಿ ಬಿಡುಗಡೆಯಾಗಿ ಸೂಪರ್‌ ಹಿಟ್‌ ಚಲನಚಿತ್ರ ‘ಕೆಜಿಎಫ್‌’ ನಿರ್ಮಾಪಕ ವಿಜಯ್‌ ಕಿರಗಂದೂರು ಇದೀಗ ಮಂಡ್ಯದ ಕೊರೋನಾ ಸೋಂಕಿತರಿಗೆ ಅನುಕೂಲವಾಗುವಂತೆ 500 ಎಲ್‌ಪಿಎಂ ಸಾಮರ್ಥ್ಯದ 2 ಆಕ್ಸಿಜನ್‌ ಘಟಕ ಅಥವಾ ಸಕಲ ವ್ಯವಸ್ಥೆಯನ್ನೊಳಗೊಂಡ 50 ಐಸಿಯು ಬೆಡ್‌ ವ್ಯವಸ್ಥೆ ಮಾಡಿಕೊಡಲು ತೀರ್ಮಾನಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮ್ಮ ಚಿತ್ರನಿರ್ಮಾಣ ಸಂಸ್ಥೆ ‘ಹೊಂಬಾಳೆ ಗ್ರೂಫ್ಸ್‌’ ಮೂಲಕ ಹುಟ್ಟೂರಿಗೆ ನೆರವಾಗುವುದಾಗಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ವಿಷಯ ತಿಳಿಸಿದ್ದಾರೆ.

ಸ್ವಂತ ದುಡ್ಡಿನಲ್ಲಿ ಪ್ರತಿದಿನ ಆಕ್ಸಿಜನ್.. ಮಂಡ್ಯ ಸಂಸದೆ ಮಾದರಿ ಹೆಜ್ಜೆ .

ನಮ್ಮ ಸಂಸ್ಥೆಯಿಂದ ಸುಸಜ್ಜಿತವಾದ 50 ಐಸಿಯು ಬೆಡ್‌ ಅಥವಾ ಎರಡು 500 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್‌ ಪ್ಲಾಂಟ್‌ ಇವುಗಳಲ್ಲಿ ಯಾವುದು ಅಗತ್ಯವಿದೆಯೋ ಅದನ್ನು ಒದಗಿಸಲು ಬದ್ಧವಾಗಿದ್ದೇವೆ. ಪರಿಸ್ಥಿತಿ ಸುಧಾರಿಸುವವರೆಗೂ ನೆರವು ನೀಡುವುದಾಗಿ ವಿಜಯ್‌ ಭರವಸೆ ನೀಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona