ವಿದ್ಯಾರ್ಥಿ ದೆಸೆಯಲ್ಲಿಯೇ ವಿಜ್ಞಾನದ ಮಹತ್ವ ಅರಿಯಿರಿ : ಕೆ.ಎಲ್.ಅನೂಪ್

ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಂಡು ಸಂಶೋಧನೆಗಳತ್ತ ಕ್ರಿಯಾಶೀಲರಾಗಬೇಕೆಂದು ನಗರದ ಟೈಮ್ಸ್ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಲ್.ಅನೂಪ್ ತಿಳಿಸಿದರು.

Know the importance of science in the student country itself snr

  ತಿಪಟೂರು :  ಮಕ್ಕಳು ವಿದ್ಯಾರ್ಥಿ ದೆಸೆಯಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಂಡು ಸಂಶೋಧನೆಗಳತ್ತ ಕ್ರಿಯಾಶೀಲರಾಗಬೇಕೆಂದು ನಗರದ ಟೈಮ್ಸ್ ಸಂಸ್ಥೆಯ ಆಡಳಿತಾಧಿಕಾರಿ ಕೆ.ಎಲ್.ಅನೂಪ್ ತಿಳಿಸಿದರು.

ನಗರದ ಠಾಗೂರ್ ವಿದ್ಯಾಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ ಜಗತ್ತಿನಲ್ಲಿ ಪ್ರತಿನಿತ್ಯ ಹೊಸಹೊಸ ಆವಿಷ್ಕಾರಗಳು ನಡೆಯುತ್ತಿವೆ. ವಿದ್ಯಾರ್ಥಿಗಳು ನವೀನ ತಾಂತ್ರಿಕತೆಯ ಅರಿವು, ಜ್ಞಾನ ಸಂಪಾದಿಸಬೇಕು. ಸಂಶೋಧನೆಗಳಲ್ಲಿ ತೊಡಗಿಸಿಕೊಂಡು ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಬೇಕು. ಟೈಮ್ಸ್ ಸಂಸ್ಥೆಯು ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಸೈನ್ಸ್ ಎಕ್ಸ್ ಪೋ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ ಎಂದರು.

ನೀವು ವೃತ್ತಿಪರ ಕೌಶಲ್ಯತೆ, ನಾಯಕತ್ವ ಗುಣ, ಸಂವಹನ ಕೌಶಲ್ಯ, ತಾಂತ್ರಿಕ ಜ್ಞಾನವನ್ನು ಬೆಳೆಸಿಕೊಂಡರೆ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬಹುದು. ಸರ್ ಎಂ.ವಿಶ್ವೇಶ್ವರಯ್ಯ, ಎಪಿಜೆ ಅಬ್ದುಲ್ ಕಲಾಂರಂತಹ ಮಹಾನ್ ವಿಜ್ಞಾನಿಗಳ ಆದರ್ಶಗಳು ನಿಮಗೆ ದಾರಿದೀಪವಾಗಿದ್ದು, ಅವರಂತೆ ಕನಸು ಕಾಣಬೇಕು. ಕಂಡ ಕನಸನ್ನು ನನಸು ಮಾಡಿಕೊಳ್ಳುವತ್ತ ಮುಂದಾಗಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಠಾಗೂರ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಶಶಿಕಲಾ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಸಾಧಿಸುವ ಹಂಬಲ ಇಟ್ಟುಕೊಳ್ಳಬೇಕು. ವಿಜ್ಞಾನಿಗಳ ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ಹೆಚ್ಚು ಒಲವು ಬೆಳೆಸಿಕೊಳ್ಳಬೇಕೆಂದರು.

ಕಾರ್ಯಕ್ರಮದಲ್ಲಿ ಯೋಗೀಶ್, ಶ್ರೀನಿವಾಸ್ ಮತ್ತಿತರರಿದ್ದರು. ವಿಜ್ಞಾನ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ, ವಿಜ್ಞಾನ ರಸಪ್ರಶ್ನೆ ಏರ್ಪಡಿಸಿ ಬಹುಮಾನ ವಿತರಣೆ ಮಾಡಲಾಯಿತು.

Latest Videos
Follow Us:
Download App:
  • android
  • ios