ಕೊಡಗು (ಡಿ.04):  ಗ್ರಾಮ ಪಂಚಾಯಿತಿ ಚುನಾವಣೆ ಸಮಯದಲ್ಲೇ ಮಾಜಿ ಸಚಿವರು ಹಾಗೂ ಕೊಡಗು ಜೆಡಿಎಸ್‌ನ ಪ್ರಮುಖ ನಾಯಕರಾಗಿರುವ ಬಿ.ಎ. ಜೀವಿಜಯ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಳ್ಳಲುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

 ಈ ಬಗ್ಗೆ ಸ್ವತಃ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ್‌ ಕುಮಾರ್‌ ಅವರು, ಸದ್ಯದಲ್ಲೇ ಜೀವಿಜಯ ಅವರು ನಮ್ಮ ಪಕ್ಷಕ್ಕೆ ಸೇರುವವರಿದ್ದಾರೆಂದು ಸ್ಪಷ್ಟಪಡಿಸಿದ್ದಾರೆ. ಅತ್ತ ಕಡೆ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಕೆ.ಎಂ. ಗಣೇಶ್‌ ಅವರು, ಜೀವಿಜಯ ಅವರು ನಮ್ಮ ಪಕ್ಷ ತೊರೆದರೂ ನಮಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ. 

ಅತ್ತ ಡಿಕೆಸು ಚುರುಕು - ಇತ್ತ ಅನಿತಾ ಬಿರುಸು : ತಣ್ಣಗಿರುವ ಬಿಜೆಪಿಗರು ...

ಇದರೊಂದಿಗೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‌.ಎನ್‌. ರಾಜಾರಾವ್‌, ಜೆಡಿಎಸ್‌ನ ಪ್ರಮುಖರಾದ ಚಂದ್ರಶೇಖರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂದಿನ ಬುಧವಾರ ಸೇರ್ಪಡೆ ಕಾರ್ಯಕ್ರಮ ನಡೆಯುವ ಸಾಧ್ಯತೆಗಳಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಕೆ. ಮಂಜುನಾಥ್‌ ಸ್ಪಷ್ಟಪಡಿಸಿದ್ದಾರೆ.