ಕೊಡಗು ಶಾಲೆಗಳಿಗೆ ನಾಳೆ (ಜು.08) ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ. 

ಕೊಡಗು (ಜು.07) ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಕೆಲ ಜಲಾಶಗಳು ಭರ್ತಿಯಾಗುತ್ತಿದೆ. ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇತ್ತ ಪ್ರವಾಹ ಪರಿಸ್ಥಿತಿ, ಭೂಕುಸಿತ ಸೇರಿದಂತೆ ಕೆಲ ಅವಘಢಗಳು ಸಂಭವಿಸಿದೆ. ಕೊಡಗಿನಲ್ಲಿ ಕೆಳೆದೆರಡು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಜುಲೈ 9ರ ಬೆಳಗ್ಗೆ 8.30ರ ವರೆಗೆ ಆರೇಂಜ್ ಅಲರ್ಟ್ ಘೋಷಿಸಿದೆ. ಭಾರಿ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಪ್ರಾಥಮಿಕ, ಪ್ರೌಡಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಂದು ದಿನದ ರಜೆ ಘೋಷಿಸಿದ ಡಿಡಿಪಿಐ

ಕೊಡಗಿನಲ್ಲಿ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿದೆ. ಕಾವೇರಿ ನದಿ ತುಂಬಿ ಹರಿಯುತ್ತಿದೆ. ಮಳೆ ಕೊರತೆಯಲ್ಲಿದ್ದ ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ನೀಡುತ್ತಿದ್ದಂತೆ ಡಿಡಿಪಿಐ ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಿದೆ. ನಾಳೆ (ಜು.08) ರಜೆ ಘೋಷಿಸಿದ್ದಾರೆ.

ಕೊಡಗಿನಲ್ಲಿ ಜುಲೈ 8

ಗುರುವಾರ (ಜುಲೈ 9) ಬೆಳಿಗ್ಗೆ 8.30 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಇನ್ನೆರೆಡು ದಿನ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಲಾಗಿದೆ. ಇದೇ ವೇಳೆ ತೀವ್ರ ಮುನ್ನಚ್ಚೆರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ನದಿ ಪಾತ್ರದ ಜನರು, ಗುಡ್ಡ, ಬೆಟ್ಟದ ತಪ್ಪಲಿನಲ್ಲಿರುವ ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ನದಿ, ಜಲಪಾತ, ಜಲಾಶಯಗಳತ್ತ ತೆರಳದಂತೆ ಸೂಚನೆ

ಕೊಡಗಿನಲ್ಲಿ ಭಾರಿ ಮಳೆಯಾಗುತಿರುವ ಕಾರಣ ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದೆ. ನದಿಗಳು ತುಂಬಿದೆ. ಹೀಗಾಗಿ ನದಿ ಬಳಿ, ಜಲಾಪಾತ ವೀಕ್ಷಣೆ, ಜಲಾಶಗಳತ್ತ ತೆರಳದಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಮಲ್ಲಳ್ಳಿ ಜಲಪಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಿಲುಕಿದ್ದರು. ಬಳಿಕ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.