Kolar : ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಹೊಣೆ
ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಿ ಬೆಳಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಜೆ.ರಂಗಸ್ವಾಮಿ ತಿಳಿಸಿದರು.
ಬಾಗೇಪಲ್ಲಿ : ಮುಂದಿನ ಪೀಳಿಗೆಯ ಉಜ್ವಲ ಭವಿಷ್ಯಕ್ಕಾಗಿ ಪರಿಸರವನ್ನು ಉಳಿಸಿ ಬೆಳಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ಜೆಎಂಎಫ್‌ಸಿ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿಗಳಾದ ಜೆ.ರಂಗಸ್ವಾಮಿ ತಿಳಿಸಿದರು.
ತಾಲೂಕು ಕಾನೂನು ಸೇವಾ ಸಮಿತಿ ಮತ್ತು ಪುರಸಭೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಠ್ರಪಿತ ಮಹಾತ್ಮ ಗಾಂಧಿಜೀ ಮತ್ತು ಲಾಲ್‍ಬಹುದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಅಂಗವಾಗಿ ಪಟ್ಟಣದ ಜೆ.ಎಂ.ಎಫ್.ಸಿ.ಸಿವಿಲ್ ನ್ಯಾಯಾಲಯದ ಆವರಣದಲ್ಲಿ ಗಾಂಧಿಜೀ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ನಂತರ ನ್ಯಾಯಾಲಯದ ಆವರಣದ ಸುತ್ತಲು ಶ್ರಮದಾನ ಮೂಲಕ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಚ್ಛತಾ ಕಾರ್ಯ ಗಾಂಧಿ ಕನಸು
ಸ್ವಚ್ಛತಾ ಅಭಿಯಾನ ಗಾಂಧಿಜೀ ರವರ ಕನಸಾಗಿತ್ತು. ನಮ್ಮ ಸುತ್ತಮುತ್ತಲಿನಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಂಡುಬರುವ ಮೂಲಕ ಅವರ ಕನಸು ನೆನಸು ಮಾಡುವಂತಹ ಪ್ರಮಾಣಿಕ ಪ್ರಯತ್ನ ಮಾಡಬೇಕಾಗಿದೆ ಅಲ್ಲದೆ ಮುಂದಿನ ಪೀಳಿಗೆಯ ಉತ್ತಮ ಭವಿಷ್ಯತ್‍ಗಾಗಿ ಪರಿಸರವನ್ನು ಉಳಿಸಿ ಬೆಳಸುವಂತಹ ಕೆಲಸಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದರು.
ತಾಲೂಕು ವಕೀಲರ ಸಂಘದ ಅಧ್ಯಕ್ಷ ಹಾಗೂ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎ.ನಂಜಂಡ ಮಾತನಾಡಿದರು. ಈ ಸಂರ್ದಭದಲ್ಲಿ ಪುರಸಭೆ ಮುಖ್ಯಧಿಕಾರಿ ಕುಮಾರಿ ರುದ್ರಮ್ಮ ಶರಣಪ್ಪ, ಹಿರಿಯ ವಕೀಲರಾದ ಅಲ್ಲಾಬಾಕಷ್, ವಕೀಲರ ಸಂಘದ ಉಪಾಧ್ಯಕ್ಷ ರಾಮಾಂಜೀ, ಕಾರ್ಯದರ್ಶಿ ಪ್ರಸನ್ನಕುಮಾರ್, ಮುಸ್ತಾಕ್, ಚಂದ್ರಶೇಖರ್, ಶ್ರೀನಿವಾಸ್, ಚಾಂದ್‍ಬಾಷ, ಲಕ್ಷ್ಮಣರೆಡ್ಡಿ, ಪುರಸಭೆ ಕಂದಾಯಧಿಕಾರಿ ಅತಾಉಲ್ಲಾ, ಮತ್ತಿತರರು ಇದ್ದರು.
ರಾಜ್ಯದಲ್ಲಿ ಬರಗಾಲ ಎದುರಾಗಿದ್ದು ಕುಡಿಯುವ ನೀರಿಗೂ ಹಾಹಾಕಾರ
ಕೊಡಗು (ಸೆ.27): ರಾಜ್ಯದಲ್ಲಿ ಬರಗಾಲ ಎದುರಾಗಿದ್ದು ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗುವ ಸಾಧ್ಯತೆ ಇದೆ. ಅತ್ತ ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಿತ್ಯ ಸಾವಿರಾರು ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದೆ. ಹೀಗಾಗಿ ಮಂಡ್ಯ, ಬೆಂಗಳೂರು ಸೇರಿದಂತೆ ಹಲವೆಡೆ ತೀವ್ರ ಹೋರಾಟ ನಡೆಯುತ್ತಿವೆ. ಆದರೆ ಈ ಹೋರಾಟಗಳೆಲ್ಲಾ ಬರೀ ನಾಟಕ ಅಷ್ಟೇ ಎಂದು ಪರಿಸರವಾದಿ ಕೊಡಗಿನ ಮುತ್ತಣ್ಣ ಅವರು ಗಂಭೀರ ಆರೋಪ ಮಾಡಿದ್ದಾರೆ. ಹೌದು ಇಂದು ರಾಜ್ಯದಲ್ಲಿ ಬರಗಾಲ ಎದುರಾಗಿದೆ, ಅದು ಮಲೆನಾಡು ಜಿಲ್ಲೆಯಾಗಿರುವ ಕೊಡಗಿನಲ್ಲೂ ಮಳೆಯ ತೀವ್ರ ಕೊರತೆಯಾಗಿದೆ. ಇದಕ್ಕೆ ಕಾರಣ ಕೊಡಗು ಜಿಲ್ಲೆಯ ಪರಿಸರ ಹಾಳಾಗುತ್ತಿದೆ ಎನ್ನುವುದು.
ಕೆಆರ್ಎಸ್ ಗೆ ಶೇ 33 ರಷ್ಟು ಕೊಡಗು ಜಿಲ್ಲೆಯಿಂದಲೇ ನೀರು ಹರಿದು ಹೋಗುತ್ತದೆ. ಆದರೆ ಕೊಡಗು ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಬೆಟ್ಟಗುಡ್ಡಗಳನ್ನು ಕೊರೆದು ರೆಸಾರ್ಟ್ ಮಾಡಲಾಗುತ್ತಿದೆ. ಭೂಪರಿವರ್ತನೆ ಮಾಡಿ ಬಡಾವಣೆಗಳನ್ನು ನಿರ್ಮಿಸಲಾಗುತ್ತಿದೆ. ಅದರಲ್ಲೂ ಕೊಡಗಿನಲ್ಲಿ ದೊಡ್ಡ ದೊಡ್ಡ ಉದ್ಯಮ ನಡೆಸುತ್ತಿರುವವರೇ ಕೊಡಗಿನ ಬೆಟ್ಟ ಗುಡ್ಡಗಳನ್ನು ಕೊರೆದು ಬಡಾವಣೆಗಳನ್ನು ನಿರ್ಮಿಸುತ್ತಿದ್ದಾರೆ. ಅದಕ್ಕಾಗಿ ಸಾವಿರಾರು ಮರಗಳನ್ನು ಕಡಿಯಲಾಗುತ್ತಿದ್ದು, ಪರಿಸರ ನಾಶವಾಗುತ್ತಿದೆ. ಇದರಿಂದಾಗಿ ವರ್ಷದ ಆರು ತಿಂಗಳು ಮಳೆ ಸುರಿಯುತ್ತಿದ್ದ ಕೊಡಗು ಜಿಲ್ಲೆಯಲ್ಲಿ ಈಗ ಎರಡು ತಿಂಗಳ ಕಾಲವೂ ಮಳೆ ಸುರಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಲವ್ ಜಿಹಾದ್‌ಗೆ ಹೆಣ್ಣು ಮಕ್ಕಳು ಬಲಿಯಾಗದಂತೆ ನೋಡಿಕೊಳ್ಳಿ: ಪೇಜಾವರ ಶ್ರೀ
ಕೊಡಗಿನಲ್ಲಿ ಬೆಟ್ಟಗುಡ್ಡಗಳು, ಜಮ್ಮಾಭೂಹಿಡುವಳಿ ಮತ್ತು ಕಾಫಿ ತೋಟಗಳನ್ನು ಭೂಪರಿವರ್ತನೆ ಮಾಡಬಾರದು ಎಂದು ರಾಜ್ಯ ಉಚ್ಛನ್ಯಾಯಾಲಯವೇ ಸ್ಪಷ್ಟವಾಗಿ ಆದೇಶ ಮಾಡಿದೆ. ಜಿಲ್ಲಾಧಿಕಾರಿ ಭೂಪರಿವರ್ತನೆಗೆ ಅವಕಾಶ ನೀಡಿದರೆ ಅದು ಮಾನ್ಯವಲ್ಲ. ಅವರು ಭೂಪರಿವರ್ತನೆಗೂ ಅವಕಾಶ ನೀಡಬಾರದು ಎಂದು ಸ್ಪಷ್ಟವಾಗಿ ಆದೇಶಿಸಿದೆ. ಇಷ್ಟೆಲ್ಲಾ ಆದರೂ ಕೊಡಗಿನಲ್ಲಿ ಭೂ ಪರಿವರ್ತನೆ ಮಾಡುತ್ತಿರುವುದೇ ಇಂದು ಕೊಡಗಿಗೂ ಬರಗಾಲದ ಪರಿಸ್ಥಿತಿ ಬಂದಿರುವುದಕ್ಕೆ ಕಾರಣ ಎಂದು ಮುತ್ತಣ್ಣ ಹೇಳಿದ್ದಾರೆ. ನಾವು ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದರೆ, ವಿವಿಧ ಜಿಲ್ಲೆಗಳ ಜನರು ಕಾವೇರಿ ನಮ್ಮದು ಎನ್ನುತ್ತಾರೆ.
ಅತ್ತ ತಮಿಳುನಾಡು ನೀರು ಬೇಕೆಂದು ಕಾನೂನು ಹೋರಾಟವನ್ನೇ ಮಾಡುತ್ತದೆ. ಹಾಲಿಗಾಗಿ ಎಲ್ಲರೂ ಜಗಳವಾಡುತ್ತಾರೆ, ಇಲ್ಲಿ ಹಸುವೇ ಸಾಯುತ್ತಿರುವುದನ್ನು ಯಾರೂ ನೋಡುತ್ತಿಲ್ಲ ಎಂದು ಪರಿಸರವಾದಿ ಮುತ್ತಣ್ಣ ಕೊಡಗಿನ ಪರಿಸರ ಹಾಳಾಗಿ ಕಾವೇರಿ ಬತ್ತಿಹೋಗುತ್ತಿರುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಾವೇರಿ ಉಳಿವಿಗಾಗಿ, ಕೊಡಗಿನ ಉಳಿವಿಗಾಗಿ ಯಾರೂ ಗಮನ ಕೊಡುವುದಿಲ್ಲ ಎಂದಿದ್ದಾರೆ. 2018 ರಲ್ಲಿ ಕೊಡಗಿನಲ್ಲಿ ಭಾರೀ ಪ್ರಮಾಣದ ಭೂಕುಸಿತ, ಪ್ರವಾಹ ಎದುರಾದ ಬಳಿಕ ಜಿಲ್ಲೆಗೆ ಬಂದಿದ್ದ ಐಐಎಸ್ಸಿ ವಿಜ್ನಾನಿ ರಾಮಚಂದ್ರನ್ ಅವರು ಕೊಡಗಿನಲ್ಲಿ ಇದೇ ರೀತಿ ಭೂಪರಿವರ್ತನೆ, ಆದಲ್ಲಿ ಕೆಲವೇ ವರ್ಷಗಳಲ್ಲಿ ಕಾವೇರಿ ನದಿಯೇ ಉಳಿಯವುದಿಲ್ಲ ಎಂದು ವೈಜ್ನಾನಿಕ ಅಧ್ಯಯನದ ವರದಿ ನೀಡಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.