ಸ್ತ್ರೀ ಶಕ್ತಿ ಸಂಘದ ಸಾಲ ವಸೂಲಿಗೆ ಬಂದ ಬ್ಯಾಂಕ್‌ ಸಿಬ್ಬಂದಿ ಬೈಕ್‌ ಸುಟ್ಟುಹಾಕಿದ ಮಹಿಳೆಯರು

ಕೋಲಾರದ ಜಿಲ್ಲೆಯಲ್ಲಿ ಸ್ತ್ರೀಶಕ್ತಿ ಸಂಘಗಳಿಗೆ ಕೊಡಲಾಗಿದ್ದ ಸಾಲವನ್ನು ವಸೂಲಿ ಮಾಡಲು ತೆರಳಿದ್ದ ಡಿಸಿಸಿ ಬ್ಯಾಂಕ್‌ ಸಿಬ್ಬಂದಿ ಬೈಕ್‌ಗೆ ಮಹಿಳೆಯರು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

Kolar women burned bank staff bike came to collect Shtri shakti sangha debt sat

ಕೋಲಾರ (ಜೂ.22): ಸಾಮಾನ್ಯವಾಗಿ ಮಹಿಳಾ ಸ್ತ್ರೀ ಸಂಘಗಳಿಗೆ ಬ್ಯಾಂಕ್‌ಗಳು ಸಾಲ ಕೊಡುವುದು ಹಾಗೂ ವಸೂಲಿ ಮಾಡುವುದು ಸಾಮಾನ್ಯವಾಗಿದೆ. ಆದರೆ, ಕೋಲಾರದಲ್ಲಿ ಮಹಿಳಾ ಸಂಘಕ್ಕೆ ಸಾಲ ಕೊಟ್ಟಿದ್ದನ್ನು ವಸೂಲಿ ಮಾಡಲು ಬಂದ ಡಿಸಿಸಿ ಬ್ಯಾಂಕ್‌ ಸಿಬ್ಬಂದಿಯ ಬೈಕ್‌ನ್ನು ಮಹಿಳೆಯರು ಸುಟ್ಟುಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಡಿಸಿಸಿ ಬ್ಯಾಂಕ್ ಸಾಲ ವಸೂಲಾತಿ ವಿಚಾರವಾಗಿ, ಸಾಲ ವಸೂಲಿ ಮಾಡಲು ಹೋದ ಸಿಬ್ಬಂದಿಯ ಬೈಕ್‌ಗೆ ಮಹಿಳೆಯರು ಬೆಂಕಿ ಹಚ್ಚಿದ್ದಾರೆ. ಮುಳಬಾಗಿಲು ತಾಲ್ಲೂಕಿನ ಬಿಸ್ನಹಳ್ಳಿ ಗ್ರಾಮದಲ್ಲಿ‌ ಘಟನೆ ನಡೆದಿದೆ. ಸ್ತ್ರೀ‌ಶಕ್ತಿ ಸಂಘದ ಮಹಿಳೆಯರು ಕೋಲಾರ ಜಿಲ್ಲೆಯ ಗೋಕುಂಟೆ ಸೊಸೈಟಿಯಲ್ಲಿ‌ ಸಾಲ ಪಡೆದಿದ್ದರು. ಸೊಸೈಟಿ ಸಿಬ್ಬಂದಿ ಜೋಸೆಪ್ ಎನ್ನುವವರು ಸಾಲ ವಸೂಲಿಗೆ ಗಾಮಕ್ಕೆ‌ ತೆರಳಿದಾಗ, ಮಹಿಳೆಯರಿಂದ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದು, ಜೊತೆಗೆ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

ಬಾಡಿಗೆದಾರರ ಕಿರುಕುಳಕ್ಕೆ ಬೇಸತ್ತು, ಆತ್ಮಹತ್ಯೆ ಶರಣಾದ ಮನೆ ಮಾಲಕಿ

ಸಿದ್ದರಾಮಯ್ಯ ಮಹಿಳಾ ಸಂಘದ ಸಾಲ ಮನ್ನಾ ಮಾಡಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಮಹಿಳೆಯರ ಮತ್ತು ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾವು ಸಾಲವನ್ನು ಮರುಪಾವತಿ ಮಾಡುವುದಿಲ್ಲ. ಈ ಮೂಲಕ ಮಹಿಳಾ ಸಂಘದ ಸಾಲವನ್ನು ಮನ್ನಾ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕೋಲಾರದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ವಿಚಾರ. ಸ್ತ್ರೀ ಶಕ್ತಿ ಸಂಘಗಳ ಸಾಲ ವಸೂಲಿ ತೀವ್ರ ವಿಕೋಪದ ಸ್ವರೂಪ ಪಡೆದುಕೊಳ್ಳುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸರ್ಕಾರಕ್ಕೆ ತಲೆನೋವಾದ ಸಾಲ ಮನ್ನಾ ವಿಚಾರ: ಇನ್ನು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ಪ್ರಚಾರ ಕಾರ್ಯಕ್ಕೆ ತೆರಳಿದ್ದ ಸಿದ್ದರಾಮಯ್ಯ ಅವರು ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೀಗಾಗಿ, ನಾವು ಯಾವುದೇ ಕಾರಣಕ್ಕೂ ಬ್ಯಾಂಕ್‌ಗಳಿಂದ ಪಡೆದ ಸಾಲವನ್ನು ನಾವು ಮರುಪಾವತಿ ಮಾಡುವುದಿಲ್ಲ ಎಂದು ಮಹಿಳೆಯರು ಹಠಕ್ಕೆ ಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಶಾಸಕರ ಮೇಲೆಯೂ ಒತ್ತಡ ಹೇರುತ್ತಿದ್ದಾರೆ. ಆದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಡಿಸಿಸಿ ಬ್ಯಾಂಕಿನಲ್ಲಿ ಸ್ತ್ರೀ ಶಕ್ತಿ ಸಂಘಗಳು ಪಡೆದ ಸಾಲ ಮನ್ನಾ ವಿಚಾರ ತಲೆನೋವಾಗುತ್ತಿದೆ.

ಸಾಲ ವಸೂಲಿಗೆ ಬಂದಿದ್ದ ಬ್ಯಾಂಕ್‌ ಸಿಬ್ಬಂದಿಗೆ ಬಹಿಷ್ಕಾರ:
ಕೋಲಾರ (ಜೂ.18): ಚುನಾವಣೆ ಸಮಯದಲ್ಲಿ ಕಾಂಗ್ರೇಸ್‌ ಸರ್ಕಾರವು ಸ್ತ್ರೀಶಕ್ತಿ ಸಂಘಗಳ ಸಾಲಮನ್ನಾ ಮಾಡುವುದಾಗಿ ಮತ ಹಾಕಿಸಿಕೊಂಡು ಈಗ ಸಾಲ ಮನ್ನಾ ಮಾಡುತ್ತಿಲ್ಲ ಎಂದು ಮಾಲೂರು ತಾಲೂಕಿನ ರಾಜೇನಹಳ್ಳಿ ಗ್ರಾಮದ ಸ್ತ್ರೀಶಕ್ತಿ ಸಂಘದ ಮಹಿಳೆಯರು ಸಾಲ ವಸೂಲಿಗೆ ಹೋದ ದಿನ್ನೇರಿಹಾರೋಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಎಚ್‌.ವಿ.ತಿರುಮೇಗೌಡ ಹಾಗೂ ಸಿಬ್ಬಂದಿಯನ್ನು ಗ್ರಾಮದಿಂದ ಹೊರ ಹಾಕಿದ ಘಟನೆ ಶನಿವಾರ ನಡೆದಿದೆ.

ಕೆಜಿಎಫ್‌ ರೀತಿ ಸುತ್ತಿಗೆಯಿಂದ ಹೊಡೆದು ಮಕ್ಕಳನ್ನು ಕೊಂದ ಅಪ್ಪ

ಸಾಲ ಪಾವತಿಗೆ ಯಾರೂ ಬರಬೇಡಿ: ರಾಜೇನಹಳ್ಳಿ ಗ್ರಾಮದಲ್ಲಿ ಸ್ತ್ರೀಶಕ್ತಿ ಸಂಘದ ಸದಸ್ಯರುಗಳು ಮೊದಲಿನಿಂದಲೂ ಸಾಲ ತೆಗೆದುಕೊಂಡು ಸಮರ್ಪಕವಾಗಿ ಮರುಪಾವತಿ ಮಾಡುತ್ತಿದ್ದರು ಮತ್ತು ಸಂಘಗಳಲ್ಲಿ ಉತ್ತಮ ಠೇವಣಿ ಸಂಗ್ರಹವು ನಡೆಯುತ್ತಿತ್ತು. ಆದರೆ ಶನಿವಾರ ದಿನ್ನೇರಿ ಹಾರೋಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ಎಚ್‌.ವಿ.ತಿರುಮೇಗೌಡರು ತಮ್ಮ ಸಿಬ್ಬಂದಿಯೊಂದಿಗೆ ಸಾಲ ವಸೂಲಿಗೆ ಹೋದಾಗ ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು ಸಾಲ ಮನ್ನ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಆದ್ದರಿಂದ ನಾವು ಸಾಲ ಮರುಪಾವತಿ ಮಾಡುವುದಿಲ್ಲ. ನೀವು ಸಾಲ ವಸೂಲಿಗೆ ನಮ್ಮ ಮನೆ ಬಾಗಿಲಿಗೆ ಬರಬಾರದೆಂದು ಸೂಚಿಸಿದರು.

Latest Videos
Follow Us:
Download App:
  • android
  • ios