ಮತೀಯವಾದ ಮುಂದಿಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸೆಡ್ಡು ಹೊಡೆಯೋ ಕೆಲಸ ನಡೆದಿದೆ: ಸಚಿವ ಕೋಟಾ
ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ತಾಲಿಬಾನ್ ಸಂಸ್ಕೃತಿ ಹೇರಿಕೆ ವಿಚಾರವಾಗಿ ದಿಟ್ಟ ಕ್ರಮ ಸರ್ಕಾರ ಕೈಗೊಳ್ಳಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ
ಹಾವೇರಿ (ಮೇ.06): ಮಂಗಳೂರು (Managaluru) ಸೇರಿದಂತೆ ಕರಾವಳಿ ಭಾಗದಲ್ಲಿ ತಾಲಿಬಾನ್ ಸಂಸ್ಕೃತಿ (Taliban Culture) ಹೇರಿಕೆ ವಿಚಾರವಾಗಿ ದಿಟ್ಟ ಕ್ರಮ ಸರ್ಕಾರ ಕೈಗೊಳ್ಳಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಇಂದು ಹಿರೇಕೇರೂರಿನಲ್ಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕರಾವಳಿ ಭಾಗದಲ್ಲಿ ಕೆಲ ಸಂಘಟನೆಗಳಿಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ (Muslim Students) ಹಿಜಾಬ್ (Hijab) ಕಡ್ಡಾಯ ಬೆದರಿಕೆ ಒಡ್ಡುತ್ತಿರುವ ಬಗ್ಗೆ ಕಿಡಿ ಕಾರಿದರು. ಸಂವಿಧಾನ ಬದ್ಧವಾಗಿ ರಾಜ್ಯದ ಉಚ್ಚ ನ್ಯಾಯಾಲಯ ಸಮವಸ್ತ್ರ ಪಾಲಿಸಿ ಎಂದು ಹೇಳಿದೆ.
ಅದನ್ನು ಪಾಲಿಸಬೇಕು ಅನ್ನೋದು ಸರ್ಕಾರದ (Karnataka Govt) ನಿಲುವು ಎಂದರು. ಹೈಕೋರ್ಟ್ ತೀರ್ಪನ್ನು (High Court) ಮೀರಿ ಯಾರಾದರೂ ಹೇಳ್ತಾರೆ ಅಂದರೆ ಅವರಿಗೆ ಇರುವ ಸಂವಿಧಾನದ ಮೇಲಿನ ಗೌರವ ಪ್ರಶ್ನಿಸುವ ಅನಿವಾರ್ಯತೆ ಇದೆ ಎಂದು ಸ್ಪಷ್ಟಪಡಿಸಿದ್ದೇವೆ. ಹೈಕೋರ್ಟ್ ಏನು ಹೇಳಿದೆ ಅದಕ್ಕೆ ನಮ್ಮ ಬದ್ದತೆ ಇದೆ. ಯಾರಾದರೂ ಸಂಪ್ರದಾಯದ ಹೆಸರಿನಲ್ಲಿ ಅನ್ಯಾಯ ಮಾಡ್ತಾರೆ ಅಂದರೆ ಅದು ಅವರ ಸಂಸ್ಕೃತಿ ಬಿಂಬಿಸುತ್ತೆ. ಸಂವಿಧಾನದ ಆಶಯದಂತೆ ಕೋರ್ಟ್ ತೀರ್ಪಿನಂತೆ ಸಮವಸ್ತ್ರ ಕಡ್ಡಾಯ ಎಂದು ಈಗಾಗಲೇ ಸರ್ಕಾರ ಆದೇಶ ಕೊಟ್ಟಿದೆ. ಸರ್ಕಾರ ಕಠಿಣ ಕ್ರಮವನ್ನೇ ತಗೊಂಡಿದೆ. ಕೆಲವರು ಮತೀಯವಾದ ಇಟ್ಟುಕೊಂಡು ರಾಷ್ಟ್ರೀಯವಾದಕ್ಕೆ ಸವಾಲು ಹಾಕುವಂತ ವಿಚಾರ ತಾವೆಲ್ಲಾ ಕೇಳಿದೀರಿ.
ಮಧ್ಯವರ್ತಿ, ಗುತ್ತಿಗೆದಾರರಿಲ್ಲ, ನೇರವಾಗಿ ರೈತರ ಖಾತೆಗೆ ಹಣ ಜಮೆಗೆ ಕ್ರಮ, ಕೋಟಾ ಶ್ರೀನಿವಾಸ್ ಪೂಜಾರಿ
ಇದನ್ನು ಸ್ಪಷ್ಟವಾಗಿ ನಿಯಂತ್ರಣಕ್ಕೆ ತರುತ್ತೇವೆ. ಮತ್ತು ತರುತ್ತೇವೆ. ಯಾರೂ ಕೂಡಾ ಕಾನೂನಿಗಿಂತ ಮೇಲಲ್ಲ. ನಮ್ಮ ವ್ಯವಸ್ಥೆಗಳು, ಆಚರಣೆಗಳು, ಆಲೋಚನೆಗಳು, ನಂಬಿಕೆಗಳು ನಮ್ಮ ಚೌಕಟ್ಟಿನಲ್ಲಿ ಸಂಪ್ರದಾಯಿಕವಾಗಿ, ಖಾಸಗಿಯಾಗಿ ಮಾಡಿಕೊಳ್ಳೋಕೆ ಇದೆ. ಆದರೆ ಸರ್ಕಾರಿ ಶಾಲೆ, ಯಾವುದೇ ಒಂದು ಶಾಲೆಯಲ್ಲಿ ಸಮವಸ್ತ್ರ ಇರಬೇಕು ಎಂಬ ಆದೇಶ ಉಲ್ಲಂಘನೆ ಮಾಡಬೇಕು ಅನ್ನೋದನ್ನು ನಾವು ಸಹಿಸಲ್ಲ ಎಂದರು. ರಾಜ್ಯದಲ್ಲಿ ಕಾನೂನಿಗೆ ಪೂಕರವಾದ ವಾತಾವರಣ ಮಾಡುತ್ತೇವೆ. ಕಾನೂನಿಗೆ ಸೆಡ್ಡು ಹೊಡೆಯುವವರನ್ನು ನಿಯಂತ್ರಣ ಮಾಡುವ ಅಧಿಕಾರ ಇದೆ, ಅದನ್ನೂ ಮಾಡಿದ್ದೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಶಾಸಕ ಯತ್ನಾಳರೇನು ಬಿಜೆಪಿ ಹೈಕಮಾಂಡಾ?: ಮತ್ತೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ನಮ್ಮ ರಾಷ್ಟ್ರೀಯ ನಾಯಕ ಅಮಿತ್ ಷಾ (Amit Shah) ಅವರು ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳರೇನು (Basanagouda Patil Yatnal) ಬಿಜೆಪಿ (BJP) ಹೈಕಮಾಂಡಾ? ಎಂದು ಸಚಿವ ಬಿ.ಸಿ ಪಾಟೀಲ್ (BC Patil) ಪ್ರಶ್ನಿಸಿದ್ದಾರೆ. ಇಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದ ಬಳಿ ರೈತರ ಜಮೀನಿಗೆ ಭೇಟಿ ನೀಡಿದ್ದ ವೇಳೆ ಬಿ.ಸಿ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿ ಬದಲಾವಣೆ ಎಂಬುದಿಲ್ಲ. ಅಮಿತ್ ಷಾ ಅವರು ಬಂದಾಗ ಸಿಎಂ ಬದಲಾವಣೆ ಕೂಗಿಲ್ಲ ಅಂತಾ ಹೇಳಿ ಹೋಗಿದ್ದಾರೆ.
ಹಿಜಾಬ್ ಹೆಸರಲ್ಲಿ ಕುತಂತ್ರ, 6 ವಿದ್ಯಾರ್ಥಿನಿಯರಿಗೆ ಮಾತ್ರ ಸಮಸ್ಯೆ ಯಾಕಾಯ್ತು? ಸಚಿವ ಕೋಟ!
ಸಿಎಂ ಬದಲಾವಣೆ ಇಲ್ಲ ಅಂತಾ ಈಗಾಗಲೆ ಅರುಣ್‌ಸಿಂಗ್ (ArunSingh), ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ (Nalin Kumar Kateel) ಮತ್ತು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಇದ್ದರೆ ಕರೆದು ಹೇಳುತ್ತಾರೆ. ದಿನವೂ ಸಿಎಂ ಬದಲಾವಣೆ, ಮಂತ್ರಿಮಂಡಲ ಬದಲಾವಣೆ ಅನ್ನುತ್ತಾ ಕೆಲವೊಂದು ಪಟ್ಟಭದ್ರ ಹಿತಾಸಕ್ತಿಗಳು ಆಡಳಿತವನ್ನ ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿವೆ ಎಂದರು. ಯತ್ನಾಳ ಬಿಜೆಪಿಯ ಹೈಕಮಾಂಡ್ ಏನೂ ಅಲ್ಲ. ಯತ್ನಾಳ ಹೇಳಿದರೆ ಮುಗೀತಾ? ಯತ್ನಾಳ್ ಅಮಿತ್ ಷಾ ಲೇವಲ್ ಇದ್ದಾರಾ? ಎಂದು ವ್ಯಂಗ್ಯವಾಡಿದರು.