ಬೆಳಗಾವಿ(ಅ.03): ಬೆಳಗಾವಿ ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಆಯ್ಕೆ ವಿಚಾರ ಕುರಿತು ಜಿಲ್ಲಾ ಕಾಂಗ್ರೆಸ್‌ ಕಮಿಟಿ ಜತೆ ಸಭೆ ಕರೆದಿದ್ದೇವೆ. ಎಲ್ಲರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 

ಕೇಂದ್ರ ಸಚಿವ ಸುರೇಶ್‌ ಅಂಗಡಿ ದೆಹಲಿಯಲ್ಲಿ ನಿಧನರಾಗಿದ್ದರು. ಅಂಗಡಿಯವರ ಪಾರ್ಥಿವ ಶರೀರ ಬೆಳಗಾವಿಗೆ ತರಬೇಕಿತ್ತು. ಬೆಳಗಾವಿಯಲ್ಲಿ ಅಂತಿಮ ದರ್ಶನಕ್ಕೆ ಕ್ಷೇತ್ರದ ಜನರಿಗೆ ಅವಕಾಶ ಕೊಡಬಹುದಾಗಿತ್ತು. ಎರಡು ತಿಂಗಳ ಹಿಂದೆ ಏನೇನೂ ರಾಜಕಾರಣ ನಡೆತು ಅಂತಾ ಕುಟುಂಬ ಸದಸ್ಯರು ಹೇಳಿದ್ದಾರೆ. 

ದೆಹಲಿಯ ಮಣ್ಣಲ್ಲಿ ಮಣ್ಣಾದ ಕನ್ನಡದ ಮಣ್ಣಿನ ಮಗ ಸುರೇಶ್ ಅಂಗಡಿ

ಈ ಸಂದರ್ಭದಲ್ಲಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗಲಿಲ್ಲ. ಸುರೇಶ್‌ ಅಂಗಡಿ ಕೇಂದ್ರದ ಮಂತ್ರಿ ಇದ್ದರು. ಬೆಳಗಾವಿಯಲ್ಲಿ ಮಿಲಿಟರಿ ಬೇಸ್‌ ಇದೆ. ಪಾರ್ಥಿವ ಶರೀರ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಕೇಂದ್ರ, ರಾಜ್ಯ ಸರ್ಕಾರಕ್ಕೆ ಆಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.