ಬೆಂಗಳೂರು (ಸೆ.01):  ಕೊರೋನಾ ಸೋಂಕಿನಿಂದ ಗುಣಮುಖರಾಗಿ ಇತ್ತೀಚೆÜಗಷ್ಟೇ ಮನೆಗೆ ವಾಪಸಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಮತ್ತೆ ತೀವ್ರ ಜ್ವರ ಕಾಣಿಸಿಕೊಂಡಿದೆ.

 ಮತ್ತೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಈ ಮೊದಲು ಆಗಸ್ಟ್‌ 25 ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಸೋಂಕು ದೃಢಪಟ್ಟಿತ್ತು. ಇದರಿಂದಾಗಿ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. 

ಕನಕಪುರ ಬಂಡೆ ಕಣ್ಣು ಸಿಎಂ ಕುರ್ಚಿ ಮ್ಯಾಲೆ..! ..

ಬಳಿಕ ಇತ್ತೀಚೆಗಷ್ಟೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮನೆಯಲ್ಲಿ ಸ್ವಯಂ ಪ್ರತ್ಯೇಕವಾಗಿ ವಿಶ್ರಾಂತಿಯಲ್ಲಿದ್ದರು. ಈ ನಡುವೆ ಬುಧವಾರ ಮತ್ತೆ ಜ್ವರ ಕಾಣಿಸಿಕೊಂಡಿದೆ. 

ಜ್ವರ ತೀವ್ರವಾಗಿದ್ದ ಹಿನ್ನೆಲೆಯಲ್ಲಿ ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊರೋನಾ ಸೋಂಕು ಗುಣಮುಖವಾದ ಬಳಿಕ ಜ್ವರ ಏಕೆ ಬಂದು ಎಂಬ ಬಗ್ಗೆ ಪರಿಶೀಲಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರಿಗೆ ಜ್ವರ ಮಾತ್ರ ಕಾಣಿಸಿಕೊಂಡಿದ್ದು ಬೇರೆ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ.