ವಿಜಯಪುರ [ಜ.07]: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದೀಗ ಮತ್ತೋರ್ವ ಕೈ ಮುಖಂಡರಾದ ಶಿವಾನಂದ ಪಾಟೀಲ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಲ್ಲಿ ಎಲ್ಲಾ ಮುಖಂಡರ ಅಭಿಪ್ರಾಯ ಮುಖ್ಯ ಎಂದಿದ್ದಾರೆ. 

ವಿಜಯಪುರದಲ್ಲಿ ಮಾತನಾಡಿದ ಮಾಜಿ ಸಚಿವ ಶಿವಾನಂದ ಪಾಟೀಲ್ ಕೆಪಿಸಿಸಿ ಅಧ್ಯಕ್ಷರ ಆಯ್ಕೆ  ವೇಳೆ ಎಲ್ಲರನ್ನೂ ಗಣನೆಗೆ ತೆಗೆದುಕೊಳ್ಳುವಂತೆ ವರಿಷ್ಟರಿಗೆ ಮನವಿ ಮಾಡಿದ್ದಾಗಿ ಹೇಳಿದ್ದಾರೆ. 

ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಎಚ್.ಕೆ ಪಾಟೀಲ್ ಸೇರಿದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧ್ಯಕ್ಷರ ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ. 

ರಾಜ್ಯ ಕಾಂಗ್ರೆಸ್ಸಿಗೆ ಯಾರೇ ಅಧ್ಯಕ್ಷರಾದರೂ ಒಪ್ಪುತ್ತೇವೆ!...

ನಾವು ಈಗಾಗಲೇ ಅಧಿಕಾರ ಕಳೆದುಕೊಂಡಿದ್ದೇವೆ. ಇಂತಹ ಸಮಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಿದೆ. ಪಕ್ಷ ವೀಕ್ ಆದಾಗ ವರಿಷ್ಟರು ಎಚ್ಚೆತ್ತುಕೊಳ್ಳಬೇಕು ಎಂದಿದ್ದು, ಪರೋಕ್ಷವಾಗಿ ಕಾಂಗ್ರೆಸ್ ಪಕ್ಷದ ಬಲ ಕಡಿಮೆಯಾಗಿದೆ ಎನ್ನುವ ರೀತಿಯ ಹೇಳಿಕೆ ನೀಡಿದ್ದಾರೆ. 

KPCC ಹುದ್ದೆ: ಹೈಕಮಾಂಡ್‌ಗೆ ಪರಂ ರವಾನಿಸಿದ ಸ್ಪೆಷಲ್ ರಿಪೋರ್ಟ್ ಮಾಹಿತಿ ಬಹಿರಂಗ...

ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಬೇಕಿದೆ. ಪಕ್ಷ ಮುನ್ನಡೆಸುವ ಪುಣ್ಯಾತ್ಮನಿಗೆ ನನ್ನ ಬೆಂಬಲ ಇದೆ ಎಂದಿರುವ ಶಿವಾನಂದ ಪಾಟೀಲ್ ನಮ್ಮ ವರಿಷ್ಟರು ಆತ್ಮ ವಿಮರ್ಶೆ ಮಾಡಿಕೊಳ್ಳುವುದು ಸೂಕ್ತ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. 

ಈಗಾಗಲೇ ಹಲವು ನಾಯಕರು ಕೆಪಿಸಿಸಿ ಕುರ್ಚಿ ಮೇಲೆ ತಮ್ಮ ಕಣ್ಣಿಟ್ಟಿದ್ದು, ಹಲವರು ನಾಯಕರ ಮನ ಒಲಿಸುವ ಯತ್ನಗಳನ್ನು ನಡೆಸುತ್ತಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಶಿವಾನಂದ ಪಾಟೀಲ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.