ರಾಯಚೂರು(ಜ.30):ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರೂರ ರೀತಿಯಲ್ಲಿ ವರ್ತನೆ ಮಾಡುತ್ತಿವೆ. ಕೋಮು ಸೌಹಾರ್ದ ಕದಡುವ ಹೇಳಿಕೆಯನ್ನ ಬಿಜೆಪಿ ನಾಯಕರು ನೀಡುತ್ತಿದ್ದಾರೆ. ರೈತ ವಿರೋಧಿ ಕ್ರಮಗಳನ್ನ ಸರ್ಕಾರ ತೆಗೆದುಕೊಳ್ಳುತ್ತಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಸರ್ಕಾರ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ಅನುಕೂಲ ಮಾಡಲಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕೃಷಿ ಹೊಂಡಗಳನ್ನ ಸ್ಥಗಿತಗೊಳಿಸಲಾಗಿದೆ. ರೈತರ ಬೇಡಿಕೆಯಿದ್ದರೂ ಸ್ಪ್ರಿಕ್ಲರ್ ಸೆಟ್ ಗಳನ್ನ ರೈತರಿಗೆ ನೀಡುತ್ತಿಲ್ಲ. ಇದರಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರ ದಿವಾಳಿ ಹಂತದಲ್ಲಿವೆ ಅನ್ನೋದು ತಿಳಿಯುತ್ತದೆ ಎಂದು ತಿಳಿಸಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉದ್ಯೋಗ ಸೃಷ್ಟಿ ಮಾಡುವುದಿರಲಿ ಯುವಕರ ಉದ್ಯೋಗಗಳೇ ಹೋಗುತ್ತಿವೆ. ದೇಶ ಆರ್ಥಿಕವಾಗಿ ಕುಸಿಯುತ್ತಾ ಹೋಗುತ್ತಿದೆ. ಅಸಂವಿಧಾನಿಕ ಕಾಯ್ದೆ ರೂಪಿಸಿ ಜಾತಿ ಜಾತಿ ಮಧ್ಯೆ ಜಗಳ ತರುತ್ತಿದ್ದಾರೆ. ಈ ಕಾಯ್ದೆ ವಿರುದ್ಧ ವಿಧಾನಸಭಾ ಅಧಿವೇಶನ ವೇಳೆ ಒಳಗೆ ಹಾಗೂ ಹೊರಗಡೆ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.