Asianet Suvarna News Asianet Suvarna News

Bagalkot: ಏ.13 ರಿಂದ ಕೃಷ್ಣಾ-ಮಹದಾಯಿ ಸಂಕಲ್ಪ ಯಾತ್ರೆ: ಎಸ್‌.ಆರ್‌.ಪಾಟೀಲ

*  75 ಟ್ರ್ಯಾಕ್ಟರ್‌ಗಳಲ್ಲಿ ಯಾತ್ರೆಯನ್ನು ನರಗುಂದದಿಂದ ಆರಂಭ
*  ಬೃಹತ್‌ ಸಮಾವೇಶ ಮಾಡಿ ಸರ್ಕಾರಗಳಿಗೆ ಮನವರಿಕೆ ಮಾಡೋಣ
*  ಯಾತ್ರೆ ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ನಡೆಯಲಿದೆ 

Krishna Mahadayi Sankalpa Yatra Will He Held on April 13th Says SR Patil grg
Author
Bengaluru, First Published Mar 31, 2022, 12:53 PM IST

ಬೀಳಗಿ(ಮಾ.31):  ಏ.13 ರಿಂದ 6 ದಿನಗಳ ಕಾಲ ಉತ್ತರ ಕರ್ನಾಟಕದ ಎಲ್ಲ ರೈತರು, ಸಂತ್ರಸ್ತರು, ಮುಖಂಡರು ಸೇರಿ ಸುಮಾರು 75 ಟ್ರ್ಯಾಕ್ಟರ್‌ಗಳಲ್ಲಿ ಯಾತ್ರೆಯನ್ನು ನರಗುಂದದಿಂದ(Nargund) ಆರಂಭ ಮಾಡಲಾಗುವುದು ಎಂದು ವಿಧಾನ ಪರಿಷತ್ತ ವಿರೋಧ ಪಕ್ಷದ ಮಾಜಿ ನಾಯಕ ಎಸ್‌.ಆರ್‌.ಪಾಟೀಲ(SR Patil) ಹೇಳಿದರು.

ಇಲ್ಲಿನ ಬಾಪೂಜಿ ಅಂತಾರಾಷ್ಟ್ರೀಯ ಶಾಲಾ ಆವರಣದಲ್ಲಿ ಬುಧವಾರ ಉತ್ತರ ಕರ್ನಾಟಕ(North Karnataka) ಸ್ವಾಭಿಮಾನ ವೇದಿಕೆ ಹಮ್ಮಿಕೊಂಡಿದ್ದ ಕೃಷ್ಣಾ ಮಹದಾಯಿ ಸಂಕಲ್ಪ ಯಾತ್ರೆ(Krishna Mahadayi Sankalpa Yatra) ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಯಲ್ಲಿ ಸಂಚರಿಸುವ ಈ ಯಾತ್ರೆ ಏ.18ರಂದು ಬೀಳಗಿ ತಲುಪಿ ಬೃಹತ್‌ ಸಮಾವೇಶ ಮಾಡಿ ಸರ್ಕಾರಗಳಿಗೆ ಮನವರಿಕೆ ಮಾಡೋಣ. ಈ ಯಾತ್ರೆ ಪಕ್ಷಾತೀತ, ಜಾತ್ಯತೀತ, ಧರ್ಮಾತೀತವಾಗಿ ನಡೆಯಲಿದೆ. ಹೀಗಾಗಿ ಎಲ್ಲರೂ ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಭಾಗವಹಿಸಬೇಕು ಎಂದು ಕೋರಿದರು.

Budget 2022: ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಲಿ: ಡಿ ಕೆ ಸುರೇಶ್

ಕೃಷ್ಣಾ ಯೋಜನೆಯ(Krishna Project) 3ನೇ ಹಂತ ಜಾರಿಯಾದರೆ 130 ಟಿಎಂಸಿ ನೀರು ಸಂಗ್ರಹಣೆಯೊಂದಿಗೆ ಉತ್ತರ ಕರ್ನಾಟಕದ 7 ಜಿಲ್ಲೆಗಳ 14.6 ಲಕ್ಷ ಎಕರೆ ಜಮೀನು ನೀರಾವರಿಗೆ(Irrigation) ಬರಲಿದೆ. ಮಹಾದಾಯಿ(Mahadayi) ನದಿಯನ್ನು ಮಲಪ್ರಭ ನದಿಗೆ ಜೋಡಣೆ ಮಾಡಿದರೆ 4 ಜಿಲ್ಲೆಗಳಿಗೆ ಸುಮಾರು 7.56 ಟಿಎಂಸಿ ನೀರು ಕುಡಿಯಲು ಸಿಗುತ್ತದೆ. ನವಲಿ ಸಮತೋಲನ ಜಲಾಶಯದಲ್ಲಿ ತುಂಗಭದ್ರ ನದಿಗೆ ಡ್ಯಾಂ ನಿರ್ಮಿಸಿ 31 ಟಿಎಂಸಿ ನೀರು ಸಂಗ್ರಹಿಸಬಹುದು. ಹೀಗೆ ಹಲವಾರು ನೀರಾವರಿ ಯೋಜನೆಗಳು ಜಾರಿಗೆ ಬರುತ್ತವೆ. ಇದರಿಂದ ಉತ್ತರ ಕರ್ನಾಟಕ ಸಮಗ್ರ ಅಭಿವೃದ್ಧಿ ಜತೆಗೆ ಹಲವಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

ಮೂಲ ಸೌಕರ್ಯ, ನೌಕರಿ, ಉದ್ಯೋಗ ಸೇರಿದಂತೆ ಹಲವಾರು ವಿಷಯಗಳಲ್ಲಿ ಉತ್ತರ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ 10 ನದಿಗಳು ಬೃಹದಾಕಾರವಾಗಿ ಹರಿಯುತ್ತಿದ್ದರೂ ಅವುಗಳನ್ನು ನೀರಾವರಿ ಯೋಜನೆಗಾಗಿ ಉಪಯೋಗ ಮಾಡಿಕೊಳ್ಳುವ ಕೆಲಸ ನಡೆಯುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತಕ್ಕೆ ಬೇಕಿರುವ ಅನುದಾನ ಸೇರಿದಂತೆ ಕೆಲಸಗಳು ಯೋಜನೆ ಜಾರಿಯಾದರೆ ಎಷ್ಟೊಂದು ಅಭಿವೃದ್ಧಿಯಾಗುತ್ತದೆ ಎನ್ನುವ ವಿಚಾರವನ್ನು ತಿಳಿಸುವ ಕೆಲಸವನ್ನು ಮಾಡುತ್ತಲೇ ಬಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಅದಕ್ಕಾಗಿ ನಾವೆಲ್ಲರೂ ಕೃಷ್ಣಾ ಮತ್ತು ಮಹದಾಯಿ ಸೇರಿದಂತೆ ನವಲಿ ಸಮತೋಲನ ಜಲಾಶಯಗಳ ಕುರಿತಾಗಿ ಟ್ರ್ಯಾಕ್ಟರ್‌ ಯಾತ್ರೆ ಆರಂಭ ಮಾಡಿ ಸರ್ಕಾರಕ್ಕೆ ಮತ್ತೊಮ್ಮೆ ಮನವರಿಕೆ ಮಾಡೋಣ ಎಂದರು.

ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಮಾತನಾಡಿ, ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ನಾವೆಲ್ಲರು ಪಕ್ಷಾತೀತವಾಗಿ ಬದ್ಧರಾಗಬೇಕು. ಏಳು ಜಿಲ್ಲೆಯಲ್ಲಿ ಇರುವ ಹಾಲಿ ಮತ್ತು ಮಾಜಿ ಶಾಸಕ, ಸಂಸದರು ಒಂದಾಗಿ ಪಕ್ಷಾತೀತವಾಗಿ ಹೋರಾಟ ಮಾಡಬೇಕಿದೆ. ಈ ನಿಟ್ಟಿನಲ್ಲಿ ಕೃಷ್ಣಾ ಮಹಾದಾಯಿ ಸೇರಿದಂತೆ ಹಲವಾರು ವಿಷಯಗಳನ್ನು ಸಮರ್ಪಕವಾಗಿ ಎಲ್ಲರಿಗೂ ತಿಳಿಯುವಂತೆ ಮಾಡುವ ಕೆಲಸ ಮಾಡಬೇಕಿದೆ ಎಂದರು.

ಮಾಜಿ ಶಾಸಕ ಜೆ.ಟಿ.ಪಾಟೀಲ ಮಾತನಾಡಿ, ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತಕ್ಕೆ ಶೀಘ್ರಗತಿಯಲ್ಲಿ ಕೆಲಸಗಳು ಆರಂಭವಾಗಬೇಕು ಎಂದರೆ ಹೋರಾಟ ಕೇವಲ ದಿನಗಳಿಗೆ ಸೀಮಿತವಾಗಬಾರದು. ನ್ಯಾಯ ಸಿಗುವವರಿಗೂ ಮಾಡಬೇಕು. ಈ ನಿಟ್ಟಿನಲ್ಲಿ ಸ್ವಾಭಿಮಾನ ವೇದಿಕೆಯವರು ಮಾಡುತ್ತಿರುವ ಹೋರಾಟಕ್ಕೆ ನಾವೆಲ್ಲರು ಒಗ್ಗಟ್ಟಾಗಿ ಇರುತ್ತೇವೆ ಎಂದು ಕೃಷ್ಣಾ ಮೇಲ್ದಂಡೆ ಯೋಜನೆ 1 ಮತ್ತು 2ನೇ ಹಂತದ ಹೋರಾಟದ ಕುರಿತಾಗಿ ಸಭೆಯಲ್ಲಿ ತಿಳಿಸಿದರು.

Karnataka Politics: ಸೋನಿಯಾ ಕರ್ನಾಟಕ್ಕೆ ಮಹಾದಾಯಿ ನೀರು ಕೊಡಲ್ಲ ಅಂದಿದ್ರು: ಈಶ್ವರಪ್ಪ

ಸಭೆಯಲ್ಲಿ ಮಾಜಿ ಸಂಸದ ಆರ್‌.ಎಸ್‌.ಪಾಟೀಲ, ಅಜಯಕುಮಾರ ಸರನಾಯಕ, ಎಚ್‌.ವೈ.ಮೇಟಿ, ಎಸ್‌.ಜಿ.ನಂಜಯ್ಯನಮಠ, ಅಶೋಕ ನಾಗಲೋಟಿ, ಶಿವಾನಂದ ನಿಗಂನೂರ, ಬಸವರಾಜ ಖೋತ, ಎಂ.ಎನ್‌.ಪಾಟೀಲ, ಪ್ರಕಾಶ ಅಂತರಗೊಂಡ, ಸಂತೋಷ ಬಗಲಿದೇಸಾಯಿ, ಎಸ್‌.ಟಿ.ಪಾಟೀಲ, ಅನವೀರಯ್ಯ ಪ್ಯಾಟಿಮಠ, ಪುರಾಣಿಕ ಗುರುಗಳು, ಮಹಾದೇವ ಹಾದಿಮನಿ, ಶ್ರೀಶೈಲ ಅಂಟೀನ್‌, ರಸೂಲ ಮುಜಾವರ, ಸತ್ಯಪ್ಪ ಮೆಲ್ನಾಡ ಸೇರಿದಂತೆ ಬಾಗಲಕೋಟೆ, ವಿಜಯಪುರ, ನರಗುಂದ ಜಮಖಂಡಿ ನಗರಗಳ ಮುಖಂಡರು ಇದ್ದರು.

ರಾಜ್ಯದಲ್ಲಿ ಆಡಳಿತಕ್ಕೆ ಬರುವ ಯಾವುದೇ ಸರ್ಕಾರವಿದ್ದರೂ ಉತ್ತರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದು, ಪ್ರಾದೇಶಿಕ ಅಸಮಾನತೆ ಮುಗಿಲೆತ್ತರಕ್ಕೆ ಏರಿದೆ. ಇಂತಹ ಪರಿಸ್ಥಿತಿ ಹೀಗೆ ಮುಂದುವರಿದರೆ ಬರುವ ದಿನಗಳಲ್ಲಿ ಉತ್ತರ ಕರ್ನಾಟಕ ಸಂಪೂರ್ಣ ಅಭಿವೃದ್ಧಿ ಕುಂಠಿತ ಪ್ರದೇಶವಾಗಲಿದೆ ಅಂತ ವಿಧಾನ ಪರಿಷತ್ತ ವಿರೋಧ ಪಕ್ಷದ ಮಾಜಿ ನಾಯಕ ಎಸ್‌.ಆರ್‌.ಪಾಟೀಲ ತಿಳಿಸಿದ್ದಾರೆ.  
 

Follow Us:
Download App:
  • android
  • ios