* ಅಣೆಕಟ್ಟು ಬಹುತೇಕ ಭರ್ತಿ* ಜಲಾಶಯದಲ್ಲಿ ಭಾನುವಾರ ಸಂಜೆಯ ವೇಳೆಗೆ ನೀರಿನ ಮಟ್ಟ 123.10 ಅಡಿಗೆ ಏರಿಕೆ* ಡ್ಯಾಂನಿಂದ 27,753 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರ ಬಿಡಲಾಗುತ್ತಿದೆ
ಮಂಡ್ಯ(ಜು.11): ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜ ಸಾಗರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿರುವುದರಿಂದ ಅಣೆಕಟ್ಟು ಬಹುತೇಕ ಭರ್ತಿ ಹಂತದಲ್ಲಿದೆ. ಜಲಾಶಯದಲ್ಲಿ ಭಾನುವಾರ ಸಂಜೆಯ ವೇಳೆಗೆ ನೀರಿನ ಮಟ್ಟ 123.10 ಅಡಿಗೆ ಏರಿಕೆಯಾಗಿದೆ. ಜಲಾಶಯ ಭರ್ತಿಗೆ ಇನ್ನು 1.70 ಅಡಿ ನೀರು ಮಾತ್ರ ಬಾಕಿ ಇದೆ. 42,633 ಕ್ಯುಸೆಕ್ ನೀರು ಜಲಾಶಯಕ್ಕೆ ಹರಿದುಬರುತ್ತಿದೆ.
ಜಲಾಶಯದಿಂದ 27,753 ಕ್ಯುಸೆಕ್ ನೀರನ್ನು ಅಣೆಕಟ್ಟೆಯಿಂದ ಹೊರ ಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 47.106 ಟಿಎಂಸಿ ಅಡಿಯಷ್ಟುನೀರು ಸಂಗ್ರಹವಾಗಿದೆ. ಜಲಾಶಯದ ಹೊರ ಹರಿವಿನಲ್ಲಿ ನದಿಗೆ 26,143 ಕ್ಯುಸೆಕ್ ನೀರನ್ನು ಬಿಡಲಾಗುತ್ತಿದ್ದರೆ, 1700 ಕ್ಯುಸೆಕ್ ನೀರನ್ನು ನಾಲೆಗಳಿಗೆ ಹರಿಸಲಾಗುತ್ತಿದೆ.
Mandya: 110 ಅಡಿಯತ್ತ ಕೆಆರ್ಎಸ್ ಜಲಾಶಯ: ಒಳ ಹರಿವು ಹೆಚ್ಚಳ
ಈಗಾಗಲೇ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ಎರಡು ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಮತ್ತು ಜಾನುವಾರುಗಳ ರಕ್ಷಣೆಗೆ ಎಚ್ಚರ ವಹಿಸಿ ಮುಂಜಾಗ್ರತಾ ಕ್ರಮದೊಂದಿಗೆ ಸುರಕ್ಷಿತಾ ಸ್ಥಳಗಳಿಗೆ ತೆರಳುವಂತೆ ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
