Asianet Suvarna News Asianet Suvarna News

ರಾಜ್ಯದ 224 ಕ್ಷೇತ್ರಗಳಲ್ಲೂ ಕೆಆರ್‌ಎಸ್‌ ಸ್ಪರ್ಧೆ

ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ಮುಕ್ತಗೊಳಿಸುವ ಸಂಕಲ್ಪದೊಂದಿಗೆ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶಿವಕುಮಾರ್‌ ತಿಳಿಸಿದರು.

KRS Party Will Contest in Karnataka 224 Constituency snr
Author
First Published Nov 5, 2022, 5:08 AM IST

 ಚನ್ನಪಟ್ಟಣ (ನ.05):  ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ಮುಕ್ತಗೊಳಿಸುವ ಸಂಕಲ್ಪದೊಂದಿಗೆ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಶಿವಕುಮಾರ್‌ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ನಿರ್ಮೂಲನೆಯೇ ಪಕ್ಷದ ಮುಖ್ಯ ಸಿದ್ಧಾಂತವಾಗಿದ್ದು, ಭ್ರಷ್ಟಾಚಾರ ಮುಕ್ತ ಕರ್ನಾಟಕದ (Karnataka)  ಕನಸಿನೊಂದಿಗೆ ಮುಂದಿನ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ತಯಾರಿ ನಡೆಸಿದೆ. ಎಲ್ಲಾ ಕಡೆ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಪ್ರಬಲ ಸ್ಪರ್ಧೆ ನೀಡಲಿದೆ. ರಾಜ್ಯದಲ್ಲಿ ಇದುವರೆಗೆ ಆಡಳಿತ ನಡೆಸಿರುವ ಕಾಂಗ್ರೆಸ್‌ (Congress) , ಬಿಜೆಪಿ ಮತ್ತು ಜೆಡಿಎಸ್‌ ಭ್ರಷ್ಟಾಚಾರವನ್ನು ಪೋಷಿಸಿಕೊಂಡು ಬಂದ ಕಾರಣ ಇಂದು ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕಾಸಿಲ್ಲದೇ ಯಾವ ಇಲಾಖೆಗಳಲ್ಲೂ ಕೆಲಸವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಪ್ರಮುಖ ಪಕ್ಷಗಳೇ ಕಾರಣ ಎಂದು ಆರೋಪಿಸಿದರು.

ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ಸಿದ್ಧತೆ ಮಾಡಿಕೊಂಡಿದೆ. ಜನರ ಮಧ್ಯೆ ನಿಂತು ಜನಪರ ಕೆಲಸ ಮಾಡುವ ಆಸಕ್ತಿಯುಳ್ಳ ಅಭ್ಯರ್ಥಿಗಳನ್ನು ಗುರುತಿಸಿ ಅವರಿಗೆ ಟಿಕೆಟ್‌ ನೀಡಲಾಗುವುದು. ಘಟಾನುಘಟಿಗಳ ಸ್ಪರ್ಧೆಯಿಂದ ಹೈವೋಲ್ಟೇಜ್‌ ಕ್ಷೇತ್ರ ಎನ್ನಿಸಿಕೊಂಡಿರುವ ಚನ್ನಪಟ್ಟಣದಿಂದಲ್ಲೂ ಪಕ್ಷ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದರು.

ನಿರಂತರ ಹೋರಾಟ:

3 ವರ್ಷಗಳ ಹಿಂದೆ ಆರಂಭವಾದ ನಮ್ಮ ಪಕ್ಷ ಇಂದು ರಾಜ್ಯದ ಹಲವೆಡೆ ಸಾಕಷ್ಟುಹೆಸರು ಮಾಡಿದೆ. ನಮ್ಮ ಪಕ್ಷದ ನಿರಂತರ ಹೋರಾಟದ ಫಲವಾಗಿ ಇಂದು ಎಷ್ಟೋ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿದೆ. ಎರಡು ವರ್ಷಗಳ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಹಿರೇಮಠ್‌ ಮತ್ತು ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ಆರಂಭಿಸಿದ ಹೋರಾಟ ಲೋಕಾಯುಕ್ತ ನ್ಯಾಯಾಲಯದಲ್ಲಿ ಮುಂದುವರಿದಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ತಾಲೂಕು ಸಮಿತಿ ಭ್ರಷ್ಟಇಲಾಖೆಗಳ ವಿರುದ್ಧ ಹೋರಾಟ ನಡೆಸಲಿದ್ದು, ತಾಲೂಕಿನ ಜನ ಸ್ವಯಂ ಪ್ರೇರಿತರಾಗಿ ನಮ್ಮ ಪಕ್ಷದ ಸದಸ್ಯರಾಗುವ ಮೂಲಕ ಭ್ರಷ್ಟವ್ಯವಸ್ಥೆ ವಿರುದ್ಧ ಹೋರಾಡಲು ನಮಗೆ ಶಕ್ತಿ ನೀಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೆಆರ್‌ಎಸ್‌ ಪಕ್ಷದ ತಾಲೂಕು ಅಧ್ಯಕ್ಷ ಸುಧಾಕರ್‌, ರಾಮನಗರ ತಾಲೂಕು ಅಧ್ಯಕ್ಷ ಬೋರೇಗೌಡ, ಪದಾಧಿಕಾರಿಗಳಾದ ಸಣ್ಣೇಗೌಡ, ನಾಗರಾಜು, ಕುಮಾರ, ಶ್ಯಾಮಲಾ, ಸುಶೀಲಮ್ಮ, ಸರಿತಾ ಇತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಬಿಜೆಪಿ ನಾಯಕರು ಶೀಘ್ರ ಜೆಡಿಎಸ್‌ಗೆ

 

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಭಾರೀ ಪ್ರಮಾಣದಲ್ಲಿ ಬದಲಾವಣೆ ಆಗಲಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಪ್ರಮುಖ ನಾಯಕರು ಕೆಲವೇ ದಿನಗಳಲ್ಲಿ ಜೆಡಿಎಸ್‌ ಸೇರ್ಪಡೆಯಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ಜೆಡಿಎಸ್‌ ಮುಖಂಡ ಶಂಕರ ಮಾಡಲಗಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜಕೀಯ (Politics)  ಬದಲಾವಣೆ ಆಗುತ್ತಿದೆ. ಜಿಲ್ಲೆಯ ಹಿರಿಯ ರಾಜಕಾರಣಿಗಳು, ದೊಡ್ಡ ಮನೆತನದವರಾದ ಪ್ರತಾಪರಾವ ಪಾಟೀಲ… ಅವರು ಕೆಲವೇ ದಿನಗಳ ಹಿಂದೆ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು (HD Decegowda) , ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಸಮ್ಮುಖದಲ್ಲಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಷ್ಟ್ರಸಮಿತಿಯಲ್ಲಿ ಅವರನ್ನು ಸೇರಿಸಿಕೊಳ್ಳುವ ಬಗ್ಗೆ ನಾಯಕರು ಅವರಿಗೆ ಭರವಸೆ ನೀಡಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ಸಾಕಷ್ಟುಬದಲಾವಣೆ ಆಗುವುದು ನಿಶ್ಚಿತ ಎಂದರು.

ರಮೇಶ ಜಾರಕಿಹೊಳಿ ಜೆಡಿಎಸ್‌ ಸೇರ್ಪಡೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಮೇಶ ಜಾರಕಿಹೊಳಿ ಅವರು ದೊಡ್ಡ ನಾಯಕರು, ಹಿರಿಯ ನಾಯಕರು. ಪಕ್ಷಕ್ಕೆ ಯಾರೇ ಬಂದರೂ ನಮ್ಮ ಜಿಲ್ಲೆಯಿಂದ ಸ್ವಾಗತಿಸುತ್ತೇವೆ. ಸ್ವಾಗತಿಸುವುದು ನಮ್ಮ ಕರ್ತವ್ಯ ಮತ್ತು ಧರ್ಮವಾಗಿದೆ. ಬಂದರೆ ಸ್ವಾಗತಿಸುತ್ತೇವೆ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಭಾರಿ ಬದಲಾವಣೆ ಆಗುವ ನಿರೀಕ್ಷೆ ಇದೆ. ಕಾಂಗ್ರೆಸ್‌ ಮತ್ತು ಬಿಜೆಪಿಯ ಪ್ರಮುಖ ನಾಯಕರು ಕೆಲವೇ ದಿನಗಳಲ್ಲಿ ಜೆಡಿಎಸ್‌ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಡದಿಯಲ್ಲಿ ಮಾಡಲಾದ ಕಾರ್ಯಕ್ರಮದಲ್ಲಿ 123 ಕ್ಷೇತ್ರಗಳ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬರುವ ಎರಡ್ಮೂರು ದಿನದಲ್ಲಿ ಅಧಿಕೃತವಾಗಿ ಅಭ್ಯರ್ಥಿಗಳ ಹೆಸರನ್ನು ಕುಮಾರಸ್ವಾಮಿ ಅವರು ಘೋಷಣೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು. ಇನ್ನು ನ.6ರಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಅವತ್ತು ಬೆಳಗ್ಗೆ ಎಲ್ಲ 18 ಕ್ಷೇತ್ರಗಳ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಕಲೆ ಹಾಕಲಿದ್ದಾರೆ ಎಂದು ಹೇಳಿದರು.

ಪಂಚರತ್ನದಿಂದ ನಾಡಿನ ಅಭಿವೃದ್ಧಿ

ನಾಡಿನ ರೈತರು, ಬಡವರು, ಶ್ರಮಿಕರು ಹಾಗೂ ನಿರುದ್ಯೋಗಿಗಳಿಗೆ ಪೂರಕವಾಗಿರುವ ಪಂಚರತ್ನ ಯೋಜನೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು. ತಾಲೂಕಿನ ಕಸಬಾ ಹೋಬಳಿ ಕೆಲಗೆರೆ ಗ್ರಾಮದಲ್ಲಿ ಗುರುವಾರ ಆಯೋಜಿಸಿದ್ದ ಶ್ರೀಆದಿಶಕ್ತಿ ಹುಲಿಕೆರಮ್ಮ ದೇವಿಯ ಉತ್ಸವ ದೇವತೆಯ ನೂತನ ದೇವಾಲಯದ ಉದ್ಘಾಟನೆ ಹಾಗೂ ನೂತನ ಗೋಪುರದ ಕಳಶ ಸ್ಥಾಪನಾ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದರು

Follow Us:
Download App:
  • android
  • ios