ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ 

ಮಂಡ್ಯ (ಜು.21): ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ100 ಅಡಿ ತಲುಪಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಕಳೆದ ಕೆಲ ದಿನಗಳ ಮಳೆಯಿಂದಾಗಿ ಜಲಾಶಯಕ್ಕೆ 12 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದೆ. 

'KRS ಅಣೆಕಟ್ಟೆಯಲ್ಲಿ ನೀರಿನ ಸೋರಿಕೆ ಆರಂಭ'

124.80 ಅಡಿಗೆ ಗರಿಷ್ಠ ಮಟ್ಟ ಹೊಂದಿರುವ ಜಲಾಶಯದಲ್ಲಿ ಮಂಗಳವಾರ ಸಂಜೆ 6 ಗಂಟೆ ವೇಳೆ 100.05 ಅಡಿ ನೀರು ಸಂಗ್ರಹವಾಗಿತ್ತು. 

ಇನ್ನು ಕೆಆರ್‌ಎಸ್‌ ಬಿರುಕು ಬಿಟ್ಟಿದೆ ಎನ್ನುವ ವಿಚಾರವೂ ಇತ್ತೀಚೆಗೆ ಸಾಕಷ್ಟು ಸದ್ದಾಗುತ್ತಿದ್ದು,ಈ ಬಗ್ಗೆ ವಿಶೇಷ ಪರಿಶೀಲನೆಯೂ ನಡೆಯುತ್ತಿದೆ.