Asianet Suvarna News Asianet Suvarna News

ವಿಜಯೇಂದ್ರಗೆ ಸಚಿವ ಸ್ಥಾನ ಬಗ್ಗೆ ನಡ್ಡಾರನ್ನೇ ಕೇಳಿ : ಈಶ್ವರಪ್ಪ

  • ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ವಿಚಾರ
  •  ಸಚಿವ ಸ್ಥಾನ ಕೊಡುವ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರನ್ನೇ ಕೇಳಬೇಕು
  •  ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ 
KS Eshwarappa reacts On minister post for Vijayendra snr
Author
Bengaluru, First Published Aug 19, 2021, 7:36 AM IST
  • Facebook
  • Twitter
  • Whatsapp

ತುಮಕೂರು (ಆ.19): ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡುವ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರನ್ನೇ ಕೇಳಬೇಕು ಎಂದು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ತಿಳಿಸಿದರು. 

ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿ, ರಾಜ್ಯದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ಏನಿದೆ, ಏನಿಲ್ಲ ಎಂದು ತಿಳಿದು ತೀರ್ಮಾನ ಮಾಡುವುದು ನಾನಲ್ಲ. 

ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು, ವರಿಷ್ಠರು. ವಿಜಯೇಂದ್ರ ವಿಚಾರವಾಗಿ ಅವರೇ ತೀರ್ಮಾನ ಮಾಡುತ್ತಾರೆ. ಹೀಗಾಗಿ ಅವರನ್ನೇ ಕೇಳಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನನ್ನ ಉದ್ದೇಶ ಮಂತ್ರಿಗಿರಿ ಅಲ್ಲ : ವಿಜಯೇಂದ್ರ

ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರು ಪಕ್ಷ ಸಂಘಟನೆ ಮಾಡಿ, ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಯಶಸ್ವಿಯಾಗಿದ್ದಾರೆ. ನಮ್ಮಂಥ ಲಕ್ಷಾಂತರ ಕಾರ್ಯಕರ್ತರಿಗೆ ಅವರು ಪ್ರೇರಣೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಹೆಚ್ಚು ದಿನ ಆಗಿಲ್ಲ. ಮುಂದಿನ ದಿನಗಳಲ್ಲಿ ಏನು ಮಾಡಬೇಕು ಎಂಬುದನ್ನು ಅವರನ್ನೇ ಕೇಳಿ ತಿಳಿಯಬೇಕಿದೆ ಎಂದರು.

Follow Us:
Download App:
  • android
  • ios