ಸೆ.6ರಂದು ಕ್ಷೀರಭಾಗ್ಯ ದಶಮಾನೋತ್ಸವ ಕಾರ‍್ಯಕ್ರಮ
ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಅನುಷ್ಠಾನಗೊಂಡು ಹತ್ತು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6ರಂದು ಮಧುಗಿರಿ ನಗರಕ್ಕೆ ಆಗಮಿಸಿ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸುವರು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಮಧುಗಿರಿ : ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಅನುಷ್ಠಾನಗೊಂಡು ಹತ್ತು ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ.6ರಂದು ಮಧುಗಿರಿ ನಗರಕ್ಕೆ ಆಗಮಿಸಿ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸುವರು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ಶುಕ್ರವಾರ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಕಾರ್ಯಕ್ರಮದ ಕುರಿತು ಕರೆದಿದ್ದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಯಾಗಿ ಹತ್ತು ವರ್ಷ ಪೂರೈಸಿದ್ದು, ಈ ಮಹತ್ವದ ಕಾರ್ಯಕ್ರಮ ಉದ್ಘಾಟಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುವರು. ಈ ಕಾರ್ಯಕ್ರಮ ಜಿಲ್ಲಾ ಉತ್ಸವ, ಐತಿಹಾಸಿಕ ರೀತಿ ನಡೆಯಬೇಕು. ಆದ ಕಾರಣ ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳು ಕೆಎಂಎಫ್ ಸಿಬ್ಬಂದಿ ಜೊತೆ ಕೈಜೋಡಿಸಿ ಕೆಲಸ ಮಾಡುವ ಮುಖೇನ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಪಿಡಬ್ಲ್ಯೂಡಿ ಎಂಜಿನಿಯರ್‌ಗಳು ಪಟ್ಟಣದಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ಮುಚ್ಚಿ ಡಾಂಬರೀಕರಣ ಮಾಡಬೇಕು ಎಂದು ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು. ಪೌರ ಕಾರ್ಮಿಕರು ಪ್ರತಿ ರಸ್ತೆ ಬದಿಗಳಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆಗೆಸಿ ಸ್ವಚ್ಛತೆ ಕಾಪಾಡಬೇಕು. ರಾಜ್ಯ ಮತ್ತು ಜಿಲ್ಲೆಯ ಹಲವು ಭಾಗಗಳಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳಿಂದ ಪಟ್ಟಣದಲ್ಲಿ ಸಂಚಾರಕ್ಕೆ ತೊಂದರೆ ಆಗದಂತೆ ಉತ್ತಮ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿ, ಬರುವ ಸಾರ್ವಜನಿಕರಿಗೆ ಕುಡಿವ ನೀರು ಮತ್ತು ಮಜ್ಜಿಗೆ ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರತಿ ಗ್ರಾಮಗಳಿಂದ ಜನರನ್ನು ಕರೆತರುವ ಜವಾಬ್ದಾರಿ ವಿಎಸ್‌ಎಸ್‌ಎನ್ ಅಧಿಕಾರಿಗಳು ವಹಿಸಿಕೊಂಡು ಶಿಸ್ತು ಸಂಯಮದಿಂದ ಭಾಗವಹಿಸಿ ಸಭೆ ಮುಗಿದ ನಂತರ ಜನರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.
ಸಿಇಒ ಜಿ.ಪ್ರಭು ಮಾತನಾಡಿ, ತಾಲೂಕಿನ 110 ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗಳ ನಲ್ಲಿ ಸಂಪರ್ಕದ ಮೂಲಕ ಶುದ್ಧ ಕುಡಿವ ನೀರು ಯೋಜನೆಗೆ ಸಿಎಂ ಅವರಿಂದ ಶಂಕುಸ್ಥಾಪನೆ ಮಾಡಿಸುವ ಜೊತೆಗೆ ಹಲವು ಸ್ವಸಹಾಯ ಸಂಘಗಳಿಗೆ ಎನ್‌ಎಲ್‌ಆರ್‌ಎಂ ಹಣವನ್ನು ಫಲಾನುಭವಿಗಳಿಗೆ ಮುಖ್ಯಮಂತ್ರಿಗಳಿಂದ ಕೊಡಿಸಲಾಗುವುದು ಎಂದರು.
ತಾಲೂಕಿನ ಗ್ರಾಮೀಣ ಶಾಲೆಗಳಿಂದ 20 ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕರೆ ತರಬೇಕು ಎಂದು ಶಿಕ್ಷಣ ಇಲಾಖೆ ಡಿಡಿಪಿಐಗೆ ಸೂಚಿಸಿ ಆ ಮಕ್ಕಳಿಗೆ ಸಾಂಕೇತಿಕವಾಗಿ ಸಿಎಂರಿಂದ ಕ್ಷೀರ, ಪೌಷ್ಟಿಕ ಆಹಾರವಾದ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡಲಾಗುವುದು ಎಂದರು.
ಕೆಎಂಎಫ್ ರಾಜ್ಯಾಧ್ಯಕ್ಷ ಭೀಮನಾಯ್‌್ಕ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಿದ್ದರು. ಆ ಸಂದರ್ಭದಲ್ಲಿ ರಾಜ್ಯದ ಹಲವು ಒಕ್ಕೂಟಗಳು ತುಂಬಾ ಸಂಕಷ್ಟದಲ್ಲಿದ್ದವು. ಆದರೆ ಈ ಯೋಜನೆ ಜಾರಿ ಮಾಡುವ ಮೂಲಕ ಒಕ್ಕೂಟಗಳಿಗೆ ಶಕ್ತಿ ತುಂಬಿದ್ದರು. ರೈತರಿಗೆ ಈಗ ಕೊಡುತಿ್ತರುವ ಹಾಲಿನ ದರ ಹೆಚ್ಚಿಸುವತೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಿಎಂಗೆ ಮನವಿ ಮಾಡಿದ್ದರು.ಅದರಂತೆ ಆ.1 ರಿಂದ ಹಾಲಿನ ದರ 3 ರು, ಹೆಚ್ಚಿಸಿ ಸಿಎಂ ಆದೇಶ ಹೊರಡಿಸಿದ್ದಾರೆ ಎಂದರು.
ಸಭೆಯಲ್ಲಿ ಎಂಎಲ್‌ಸಿ ಆರ್.ರಾಜೇಂದ್ರ ರಾಜಣ್ಣ, ಕೆಎಂಎಫ್ ಎಂ.ಡಿ.ಜಗದೀಶ್, ಸಹಕಾರ ಇಲಾಖೆ ರಿಜಿಸ್ಟಾರ್ ಕ್ಯಾಪ್ಟನ್ ರಾಜೇಂದ್ರ, ಎಸ್‌ಪಿ ರಾಹುಲ್‌ಕುಮಾರ್ ಶಹಪೂರ್ ವಾಡ್, ತುಮಕೂರು ಎಸಿ ಗೌರವ್‌ಕುಮಾರ್ ಶಟ್ಟಿ, ತಹಸೀಲ್ದಾರ್ ಸಿಗ್ಬತ್‌ವುಲ್ಲಾ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
ಗ್ಯಾರಂಟಿ ಯೋಜನೆಯ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಕಾರ್ಯಕ್ರಮ ನಡೆಯವ ಸ್ಥಳದಲ್ಲಿ ರಾಜ್ಯ ಸರ್ಕಾರದ ಮಹತ್ವದ ಐದು ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸ್ಟಾಲ್‌ಗಳನ್ನು ಹಾಕಲಾಗುವುದು. ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಖಾಲಿ ಇರುವ ನಾಮಫಲಕಗಳಿಗೆ ಸರ್ಕಾರದ ಐದು ಯೋಜನೆಗಳ ಪೈಕಿಯಾವುದಾದದೂ ಒಂದು ಯೋಜನೆಯ ಬ್ಯಾನರ್ ಅಳವಡಿಸುವಂತೆ ತಹಸೀಲ್ದಾರ್‌ಗೆ ಸೂಚಿಸಿ, ಕಚೇರಿ ಮುಂಭಾಗದಲ್ಲಿರುವ ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಿ. ತಾಲೂಕಿನಲ್ಲಿ ವಿವಿಧ ಇಲಾಖೆಗಳಲ್ಲಿ ನಡೆಯಬೇಕಾಗಿರುವ ಕಾಮಗಾರಿಗಳ ಶಂಕುಸ್ಥಾಪನೆ, ವಿವಿಧ ಸವಲತ್ತುಗಳ ವಿತರಣೆ, ಇನ್ನು ಎರಡು ದಿನಗಳಲ್ಲಿ ಮಾಹಿತಿ ಒದಗಿಸುವಂತೆ ಇಲಾಖೆಯ ಎಲ್ಲ ಅಧಿಕಾರಿಗಳಿಗೆ ಸೂಚಿಸಿದರು.