Asianet Suvarna News Asianet Suvarna News

ಬೆಂಗಳೂರು ಮಳೆ ಪ್ರವಾಹ ತಡೆಯಲು ರಾಜಕಾಲುವೆಗಳಿಗೆ 124 ಸೆನ್ಸಾರ್ ಅಳವಡಿಕೆ

ಬೆಂಗಳೂರಿನಲ್ಲಿ ಮಳೆಯಿಂದಾಗುವ ಪ್ರವಾಹ ತಡೆಗಟ್ಟಲು ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್ಎನ್‌ಡಿಎಂಸಿ) ವತಿಯಿಂದ ರಾಜಕಾಲುವೆಗಳಿಗೆ ಬರೋಬ್ಬರಿ 124 ಸೆನ್ಸಾರ್‌ಗಳನ್ನು ಅಳವಡಿಕೆ ಮಾಡಲಾಗಿದೆ.

KSNDMC Installs 124 water level Sensors in Rajakaluve for Prevent Rain Floods in Bengaluru sat
Author
First Published May 11, 2024, 6:39 PM IST | Last Updated May 11, 2024, 6:39 PM IST

ಬೆಂಗಳೂರು (ಮೇ 11): ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್ಎನ್‌ಡಿಎಂಸಿ) ವತಿಯಿಂದ ರಾಜಕಾಲುವೆಗಳಿಗೆ ಬರೋಬ್ಬರಿ 124 ಸೆನ್ಸಾರ್‌ಗಳನ್ನು ಅಳವಡಿಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳ ಹಿಂದೆ ದೊಡ್ಡ ಮಟ್ಟದ ಪ್ರವಾಹವೇ ಸೃಷ್ಟಿಯಾಗಿತ್ತು. ಇದರಿಂದ ಐಟಿ ಸಿಟಿ ಎಂದು ಖ್ಯಾತಿಯಾಗಿದ್ದ ಬೆಂಗಳೂರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಖ್ಯಾತಿ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಈ ವರ್ಷ ಬೆಂಗಳೂರಿನಲ್ಲಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ (ಕೆಎಸ್ಎನ್‌ಡಿಎಂಸಿ) ವತಿಯಿಂದ ರಾಜಕಾಲುವೆಗಳಿಗೆ ಬರೀಬ್ಬರಿ 124 ಸೆನ್ಸಾರ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಈ ಮೂಲಕ ಮಳೆ ಬರುವ ವೇಳೆ ರಾಜಕಾಲುವೆಗಳು ಉಕ್ಕಿ ಹರಿಯುವ ಮುನ್ನವೇ ನೀರು ಹರಿಯುವ ಮಟ್ಟವನ್ನು ಅರಿತು ಸುತ್ತಲಿನ ಜನರನ್ನು ಸ್ಥಳಾಂತರ ಮಾಡುವುದು ಹಾಗೂ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದಕ್ಕೆ ನೆರವಾಗಲಿದೆ.

ಬೆಂಗ್ಳೂರಲ್ಲಿ ಭಾರೀ ಮಳೆಗೆ ಕುಸಿದ ರಸ್ತೆ, 150 ಮರಗಳು ಧರೆಗೆ..!

ನೀರಿನ ಮಟ್ಟ ಅಳೆಯುವ ಸೆನ್ಸಾರ್‌ಗಳು: ಪಾಲಿಕೆ ವ್ಯಾಪ್ತಿಯಲ್ಲಿ ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ರಾಜಕಾಲುವೆಗಳಲ್ಲಿ ತಂತ್ರಜ್ಞಾನದ ಬಳಸಿಕೊಂಡು 124 ಕಡೆ ನೀರಿನ ಮಟ್ಟ ಅಳೆಯುವ ಸಂವೇದಕ (Water Level Sensor)ಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ (ಕೆಎಸ್ಎನ್‌ಡಿಎಂಸಿ) ವತಿಯಿಂದ ಅಳವಡಿಸಲಾಗಿದೆ. ಪ್ರತಿಯೊಂದು ಸೆನ್ಸಾರ್ ಯಂತ್ರಕ್ಕೂ ಸೋಲಾರ್ ಅಳವಡಿಸಲಾಗಿದೆ. ಅದರಿಂದ ನಿತ್ಯ ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ಕೂಡಲೆ ಮಾಹಿತಿ ತಿಳಿಯಲಿದೆ. ಅವರು ಪಾಲಿಕೆಯ ಇಂಟಿಗ್ರೇಟೆಡ್ ಕಮಾಂಡಿಂಗ್ ಕಂಟ್ರೋಲ್ ಸೆಂಟರ್(ICCC)ಗೆ ಮಾಹಿತಿ ರವಾನೆ ಮಾಡಲಿದ್ದಾರೆ. 

ಮಳೆ ಬಂದಾಗ ಅಪಾಯದ ಮುನ್ಸೂಚನೆ ನೀಡುವ ಸೆನ್ಸಾರ್‌ಗಳು: ಸೆನ್ಸಾರ್ ಅಳವಡಿಸಿರುವ ಕಡೆ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯಬಹುದಾಗಿದೆ. ಅದರಂತೆ ಹಸಿರು, ನೀಲಿ, ಕೆಂಪು ಹಾಗೂ ಕಪ್ಪು ಬಣ್ಣದಲ್ಲಿ ಗುರುತಿಸಲಾಗುತ್ತದೆ. ಹಸಿರು ಹಾಗೂ ನೀಲಿ ಬಣ್ಣವಿದ್ದರೆ ಯಾವುದೇ ಅಪಾಯವಿರುವುದಿಲ್ಲ. ಕೆಂಪು ಬಣ್ಣವಿದ್ದರೆ ಅಪಾಯ ಎಂದರ್ಥ ಹಾಗೂ ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಆ ಮಾಹಿತಿಗೆ ಅನುಗುಣವಾಗಿ ಪ್ರವಾಹ ಉಂಟಾಗುವ ಸ್ಥಳದ ಸುತ್ತಮುತ್ತಲಿನ ನಿವಾಸಿಗಳನ್ನು ಬೇರೆಡೆ ತೆರಳುವಂತೆ ಸೂಚನೆ ನೀಡಬಹುದು. ಜೊತೆಗೆ, ಎಲ್ಲಿಯಾದರೂ ನೀರು ಹರಿಯುವ ಸ್ಥಳಗಲ್ಲಿ ಕಸ ಕಟ್ಟಿಗೊಂಡಿದ್ದರೆ ಅದನ್ನು ತೆರವುಗೊಳಿಸುವುದು ಮುಂತಾದ ಕ್ರಮಗಳನ್ನು ಕೈಗೊಂಡು ದೊಡ್ಡ ಮಟ್ಟದಲ್ಲಿ ಪ್ರವಾಹದಿಂದ ಉಂಟಾಗುವ ಅನಾಹುತಗಳನ್ನು ತಪ್ಪಿಸಬಹುದಾಗಿದೆ.

ಕರ್ನಾಟಕಕ್ಕೆ 5 ದಿನ ಚಂಡಮಾರುತ ಭೀತಿ: ರಾಜ್ಯದ 23 ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಮಳೆ ಸಾಧ್ಯತೆ

ಪ್ರವಾಹವನ್ನು ನಿಭಾಯಿಸಲು ಮತ್ತು ಪ್ರತಿಕ್ರಿಯಿಸಲು ತಂತ್ರಜ್ಞಾನದ ಬಳಕೆ: ನಗರದಲ್ಲಿ ಸುರಿವ ಮಳೆಗೆ ಬಿಬಿಎಂಪಿಯು ಈಗಾಗಲೇ ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಮಳೆಗಾಲದಲ್ಲಿ ಸಂಭವಿಸುವ ಅವಾಂತರಗಳನ್ನು ತಪ್ಪಿಸಲು ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ರಾಜಕಾಲುವೆ, ದ್ವಿತೀಯ ರಾಜಕಾಲುವೆ, ಚರಂಡಿಗಳಲ್ಲಿ ಹೂಳು ತೆಗೆಯುವ ಕಾರ್ಯವನ್ನು ನಿರಂತರವಾಗಿ ನಡೆಸಲಾಗುತ್ತಿದೆ. ಜೊತೆಗೆ ರಸ್ತೆ ಬದಿಯ ಶೋಲ್ಡರ್ ಡ್ರೈನ್ ಗಳ ಬಳಿ ಇರುವ ತ್ಯಾಜ್ಯವನ್ನು ತೆರವುಗೊಳಿಸಿ ರಸ್ತೆ ಮೇಲೆ  ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವ ವ್ಯವಸ್ಥೆ ಮಾಡಲಾಗಿದೆ. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆಗಳ ತೊಳುಚರಂಡಿಗಳನ್ನು ಸ್ವಚ್ಛಗೊಳಿಸುವುದು ಮತ್ತು ರಸ್ತೆ ಮೇಲೆ ಶೇಖರಣೆಯಾಗಿರುವ ಅನುಪಯುಕ್ತ ಕಟ್ಟಡ ತ್ಯಾಜ್ಯ (Debris)ಗಳ ತೆರೆವು ಕಾರ್ಯ ಸಕ್ರಿಯವಾಗಿ ನಡೆಯುತ್ತಿದೆ.

Latest Videos
Follow Us:
Download App:
  • android
  • ios