Asianet Suvarna News Asianet Suvarna News

KSRTC ಬಸ್, ಕ್ಯಾಂಟರ್, ಕಾರು ನಡುವೆ ಸರಣಿ ಅಪಘಾತ

ಕೆಎಸ್‌ಆರ್‌ಟಿಸಿ ಬಸ್, ಕಾರು, ಕ್ಯಾಂಟರ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ. 

KSRTC Bus Car Accident in Nelamangala
Author
Bengaluru, First Published Jan 11, 2020, 10:54 AM IST
  • Facebook
  • Twitter
  • Whatsapp

ಬೆಂಗಳೂರು [ಜ.11] : KSRTC ಬಸ್, ಇನ್ನೋವಾ ಕಾರ್ ಮತ್ತು ಕ್ಯಾಂಟರ್ ನಡುವೆ ಸರಣಿ ಅಪಘಾತವಾಗಿದೆ. 

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ರಾಯರಪಾಳ್ಯದಲ್ಲಿ ಘಟನೆ ನಡೆದಿದ್ದು, ಅಪಘಾತಕ್ಕೀಡಾದ ಕಾಡು ಮಾಜಿ ಶಾಸಕ ಸೊಗಡು ಶಿವಣ್ಣ ಅವರಿಗೆ ಸೇರಿದ್ದೆನ್ನಲಾಗಿದೆ. 

ಇನ್ನು ಈ ಸರಣಿ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಕಾರಿನಲ್ಲಿ ಮಾಜಿ ಶಾಸಕ ಸೊಗಡು ಶಿವಣ್ಣ ಸಂಬಂಧಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದು ಬಂದಿದ್ದು, ಯಾರಿಗೂ ಯಾವುದೇ ಸಮಸ್ಯೆಯಾಗಿಲ್ಲ. 

ಅಪಘಾತದ ಬಳಿಕ ಕಾರಿನಲ್ಲಿದ್ದವರು ಬೇರೆ ವಾಹನದ ಮೂಲಕ ತೆರಳಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರೂ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ. ಸರಣಿ ಅಪಘಾತದಿಂದ ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಇದರಿಂದ ವಾಹನ ಸವಾರರು ಪರದಾಡುವಂತಾಯಿತು. 

ಕ್ರಿಮಿನಾಶಕ ಕುಡಿದು 45 ವರ್ಷದ ಆನೆ ಸಾವು...

ಘಟನೆಗೆ KSRTC ಬಸ್ ಚಾಲಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.  ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ರಸ್ತೆಯ ಇಕ್ಕೆಲಗಳಲ್ಲಿ‌ ಮಣ್ಣು ಹೆಚ್ಚಾಗಿದ್ದು ಇದರಿಂದ ಹೆಚ್ಚಿನ ಅಪಘಾತಗಳಾಗುತ್ತಿದ್ದು, ಈ ಬಗ್ಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.  

ಈ ಸಂಬಂಧ ಸದ್ಯ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us:
Download App:
  • android
  • ios