ಹಾಸನ [ಡಿ.20]: ಗೂಡ್ಸ್ ಆಟೋಗೆ ಹಿಂಬದಿಯಿಂದ ಸಾರಿಗೆ ಬಸ್ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. 

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ  ತಾಲೂಕಿನ ಮೂಡನಹಳ್ಳಿ ಬಳಿ ಘಟನೆ ನಡೆದಿದ್ದು, ಆಟೋದಲ್ಲಿ ಇದ್ದ ವ್ಯಕ್ತಿ ಸಾವಿಗೀಡಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಸಂತೆಗೆ ಹಸುಗಳನ್ನು ಸಾಗಿಸುತ್ತಿದ್ದ ಆಟೀಗೆ ಹಿಂದಿನಿಂದ ಬಸ್ ಡಿಕ್ಕಿಯಾಗಿದ್ದು, ಮಂಜು ಮುಸುಕಿದ್ದರಿಂದ ಎದುರಿಗೆ ಇರುವ ವಾಹನ ಕಾಣಿಸದೇ ಈ ಅವಘಡವಾಗಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಹಾಸನದ ಚನ್ನರಾಯಪಟ್ಟಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.