* ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾದ ಹಿನ್ನೆಲೆ* ಬಸ್‌ ವಾಪಸ್‌ ಮಹಾರಾಷ್ಟ್ರಕ್ಕೆ ಕಳುಹಿಸಿದ ಪೊಲೀಸರು* ಬೆಳಗಾವಿ ಗಡಿಯಲ್ಲಿ ತೀವ್ರ ಕಟ್ಟೆಚ್ಚರ  

ಬೆಳಗಾವಿ(ಜು.14): ಜಿಲ್ಲೆಯ ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ಕೊಗನೋಳಿ ಟೋಲ್‌ ಬಳಿ ವಾಹನ ತಪಾಸಣೆ ಮಾಡುತ್ತಿರುವ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಆರ್‌ಟಿಪಿಸಿಆರ್‌ ವರದಿ ಇಲ್ಲದೆ ಬಂದಿದ್ದ ಕರ್ನಾಟಕ ಸಾರಿಗೆ ಇಲಾಖೆಗೆ ಸೇರಿದ ಬಸ್‌ ಅನ್ನು ವಾಪಸ್‌ ಕಳುಹಿಸಿದ ಘಟನೆ ಮಂಗಳವಾರ ನಡೆದಿದೆ. 

ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದ ಬೆಳಗಾವಿ ಪೊಲೀಸರು ಬಸ್‌ನ್ನು ವಾಪಸ್‌ ಕಳುಹಿಸಿದ್ದಾರೆ. 

KSRTCಯಲ್ಲಿ ಬರುವ ಪ್ರಯಾಣಿಕರಿಗೆ ಕೋವಿಡ್ ರಿಪೋರ್ಟ್ ಕಡ್ಡಾಯ

ಬಸ್‌ ಪುಣೆಯಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿತ್ತು. ಕೊಗನೋಳಿ ಟೋಲ್‌ ಬಳಿ ಇದನ್ನು ತಪಾಸಣೆ ಮಾಡಿದ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿ ಆರ್‌ಟಿಪಿಸಿಆರ್‌ ವರದಿ ಇಲ್ಲದ್ದಕ್ಕೆ ವಾಪಸ್‌ ಕಳುಹಿಸಿದ್ದಾರೆ.