ಯಾದಗಿರಿ: ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ ಟಿಕೆಟ್‌ ನೀಡುವಾಗ ಕಂಡಕ್ಟರ್‌ಗೆ ಗೊಂದಲ..!

ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್‌ ಕೇಳಿದಾಗ ಕಂಡಕ್ಟರ್‌ ಕಕ್ಕಾಬಿಕ್ಕಿಯಾಗಿದ್ದಾರೆ. 

KSRTC Conductor Confused while Giving Ticket to Transgender in Yadgir grg

ಯಾದಗಿರಿ(ಜು.13): ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ ಟಿಕೆಟ್‌ ನೀಡಲು ಬಸ್‌ ಕಂಡಕ್ಟರ್‌ ಪರದಾಡಿರುವ ಘಟನೆ ನಡೆಯಿತು. 

ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್‌ ಕೇಳಿದಾಗ ಕಂಡಕ್ಟರ್‌ ಕಕ್ಕಾಬಿಕ್ಕಿಯಾಗಿದ್ದಾರೆ. 

ಸಾರಿಗೆ ಸಚಿವರು ನೋಡಲೇಬೇಕಾದ ಸುದ್ದಿ, ಫುಟ್‌ಬೋರ್ಡ್‌ನಲ್ಲೇ ಮಗು ಹಿಡಿದು ಮಹಿಳೆ ಪ್ರಯಾಣ!

ಆಧಾರ್‌ ಕಾರ್ಡ್‌ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜೊತೆಗೆ ಲಕ್ಷ್ಮೀ ಪುರುಷರ ಬಟ್ಟೆಹಾಕಿದ್ದರಿಂದ ಕಂಡಕ್ಟರ್‌ ಗೋದಲಕ್ಕೀಡಾದ ಪ್ರಸಂಗ ಜರುಗಿತು. ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್‌ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್‌ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್‌ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

Latest Videos
Follow Us:
Download App:
  • android
  • ios