KSRTC ಬಸ್ ಚಾಲಕರೋರ್ವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಹಾಸನದ ಕೆಎಸ್‌ಆರ್‌ಟಿಸಿ ವಸತಿ ಗೃಹದಲ್ಲಿ ವಾಸವಿದ್ದ ಅವರು ಮನೆ ಖಾಲಿ ಮಾಡಬೇಂದು ಒತ್ತಡ ಹಾಕಿದ ಹಿನ್ನೆಲೆ ಮೃತಪಟ್ಟಿದ್ದಾರೆನ್ನಲಾಗಿದೆ.
ಹಾಸನ (ಏ.11): ಮನೆ ಖಾಲಿ ಮಾಡುವಂತೆ ಮೇಲಾಧಿಕಾರಿಗಳು ಒತ್ತಡ ಹೇರಿದ ಹಿನ್ನೆಲೆಯಲ್ಲಿ ಮುಷ್ಕರ ನಿರತ ಸಾರಿಗೆ ಇಲಾಖೆಯ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಾರಿಗೆ ನೌಕರರ ಮೇಲೆ ಮತ್ತಷ್ಟು ಕಠಿಣ ಕ್ರಮ!
ಸಕಲೇಶಪುರ ಡಿಪೋದಲ್ಲಿ ಚಾಲಕರಾಗಿದ್ದ ಸುಧಾಕರ್(52) ಮೃತಪಟ್ಟಚಾಲಕ. ಸುಧಾಕರ್ ಅವರ ಪತ್ನಿ ಜಯಂತಿ ಸಹ ಹಾಸನ ಡಿಪೋದಲ್ಲಿ ಕೆಲಸ ಮಾಡುತ್ತಿದ್ದು, ದಂಪತಿ ಹಾಸನದಲ್ಲಿರುವ ಕೆಎಸ್‌ಆರ್‌ಟಿಸಿ ವಸತಿ ಗೃಹದಲ್ಲಿ ವಾಸವಿದ್ದರು.
ಮುಷ್ಕರದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಗೈರಾಗಿದ್ದ ಕಾರಣ, ಮನೆ ಖಾಲಿ ಮಾಡುವಂತೆ ಅಧಿಕಾರಿಗಳು ಒತ್ತಡ ಹೇರಿದ್ದು, ಇದರಿಂದಲೇ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
