ಬೆಂಗಳೂರು(ಆ.02): ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ರಾತ್ರಿ ಕಫä್ರ್ಯ ಹಿಂಪಡೆದ ಹಿನ್ನೆಲೆಯಲ್ಲಿ ಇನ್ನುಮುಂದೆ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ ಹಿಂದಿನಂತೆ ಇರಲಿದೆ.

"

ಇಷ್ಟುದಿನ ಕಫä್ರ್ಯ ಹಿನ್ನೆಲೆಯಲ್ಲಿ ರಾತ್ರಿ 9 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಬಸ್‌ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಭಾನುವಾರದ ಲಾಕ್‌ಡೌನ್‌ ಹಾಗೂ ರಾತ್ರಿ ಕಫ್ರ್ಯೂ ಹಿಂಪಡೆದಿರುವ ಹಿನ್ನೆಲೆಯಲ್ಲಿ ಹಿಂದಿನಂತೆ ಭಾನುವಾರವೂ ಬಸ್‌ ಸೇವೆ ಲಭ್ಯವಾಗಲಿದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ರಾತ್ರಿಯೂ ಬಸ್‌ ಸೇವೆ ಇರಲಿದೆ.

ಕೊರೋನಾತಂಕದ ಮಧ್ಯೆ ಬಸ್‌ ಪ್ರಯಾಣಿಕರ ಸಂಖ್ಯೆ ಏರಿಕೆ..!

ಪ್ರಸ್ತುತ ಕೆಎಸ್‌ಆರ್‌ಟಿಸಿಯು ರಾಜ್ಯದ ವಿವಿಧ ಭಾಗಗಳಲ್ಲಿ ನಿತ್ಯ ಸುಮಾರು ನಾಲ್ಕು ಸಾವಿರ ಬಸ್‌ ಕಾರ್ಯಾಚರಣೆ ಮಾಡುತ್ತಿದೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶಕ್ಕೂ ಬಸ್‌ ಸೇವೆ ನೀಡುತ್ತಿದೆ. ಕೊರೋನಾ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕುಸಿದಿರುವ ಪರಿಣಾಮ ಕಾರ್ಯಾಚರಿಸುವ ಬಸ್‌ಗಳ ಸಂಖ್ಯೆ ಕಡಿಮೆ ಮಾಡಿದೆ.

BMTC ನೌಕರರಿಗಾಗಿ ಶೀಘ್ರ ಕೊರೋನಾ ಆರೈಕೆ ಕೇಂದ್ರ

ರಾತ್ರಿ ಕಫä್ರ್ಯ ತೆರವು ಮಾಡಿರುವ ಹಿನ್ನೆಲೆಯಲ್ಲಿ ಇನ್ನುಮುಂದೆ ರಾತ್ರಿ ಬಸ್‌ ಸೇವೆ ಇರಲಿದೆ. ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್‌, ಕಲಬುರಗಿ, ಚಿತ್ರದುರ್ಗ, ಹುಬ್ಬಳ್ಳಿ, ದಾವಣಗೆರೆ ಸೇರಿದಂತೆ ರಾಜ್ಯದ ಎಲ್ಲ ಭಾಗಗಳಿಗೂ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್‌ ಸಂಚರಿಸಲಿವೆ ಎಂದು ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.