Asianet Suvarna News Asianet Suvarna News

ದಸರಾ - ದೀಪಾವಳಿ ನಗರದಿಂದ ತಮ್ಮೂರಿಗೆ ತೆರಳೋರಿಗೆ ಗುಡ್ ನ್ಯೂಸ್

  •  ದಸರಾ ಹಾಗೂ ದೀಪಾವಳಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್
  • ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌
KSRTC to run 1000 extra buses for Dasara Deepavali snr
Author
Bengaluru, First Published Sep 23, 2021, 8:05 AM IST

 ಬೆಂಗಳೂರು (ಸೆ.23):  ದಸರಾ ಹಾಗೂ ದೀಪಾವಳಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಸ್ಥಳಗಳಿಗೆ ಒಂದು ಸಾವಿರ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಿದೆ.

ದಸರಾ ಪ್ರಯುಕ್ತ ಅ.13ರಿಂದ 21ರ ವರೆಗೆ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ಅ.29ರಿಂದ ನ.11ರ ವರೆಗೆ ಒಂದು ಸಾವಿರ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುವುದು. ರಾಜ್ಯದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಸಂಚರಿಸಲಿವೆ.

ವಜಾಗೊಂಡ 4,200 ಸಾರಿಗೆ ನೌಕರರ ಮರುನೇಮಕ!

ಹೊರರಾಜ್ಯದ ತಿರುಪತಿ, ವಿಜಯವಾಡ, ಹೈದರಾಬಾದ್‌, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್‌ ಕಾರ್ಯಾಚರಣೆ ಮಾಡಲಾಗುವುದು. ಹೆಚ್ಚುವರಿ ಬಸ್‌ಗಳ ಪ್ರಯಾಣ ದರದಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ನಿಗಮದ ಅಧಿಕೃತ ಜಾಲತಾಣ ಮತ್ತು ರಾಜ್ಯ ಹಾಗೂ ಹೊರರಾಜ್ಯಗಳಲ್ಲಿರುವ ಬುಕಿಂಗ್‌ ಕೌಂಟರ್‌ಗಳಲ್ಲಿ ಮುಂಗಡ ಟಿಕೆಟ್‌ ಕಾಯ್ದಿರಿಸಬಹುದು. ಪ್ರಯಾಣಿಕರು ಈ ಹೆಚ್ಚುವರಿ ಬಸ್‌ಗಳ ಉಪಯೋಗ ಪಡೆದುಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

Follow Us:
Download App:
  • android
  • ios