ಕುಕ್ಕೆ ಸುಬ್ರಹ್ಮಣ್ಯ ಮಠದ ವಿವಾದ ಇದೀಗ ಹಲ್ಲೆ ರೂಪಕ್ಕೆ ತೆರಳಿದೆ. ಸುಬ್ರಹ್ಮಣ್ಯ ಕ್ಷೇತ್ರದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡೂ ಕಡೆಯಿಂದ ದೂರು ದಾಖಲಾಗಿದೆ.

ಸುಬ್ರಹ್ಮಣ್ಯ[ಅ.24] ಎರಡು ಗುಂಪುಗಳು ಪರಸ್ಪರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಮತ್ತು ತಂಡ ಹಾಗೂ ಗುರುಪ್ರಸಾದ್ ಎಂಬುವರು ಒಬ್ಬರ ಮೇಲೆ ಒಬ್ಬರು ದೂರು ದಾಖಲಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಮ್ಮ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಕಾಶಿಕಟ್ಟೆ ಬಳಿ ಕಾರು ಅಡ್ಡಗಟ್ಟಿ ದಾಳಿ ಮಾಡಲಾಗಿದೆ. ಕುಕ್ಕೆಯ ಸಂಪುಟ ನರಸಿಂಹ ಸ್ವಾಮಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಮಾತುಕತೆ ನಡೆಸಿ ವಾಪಾಸಾಗುತ್ತಿದ್ದ ವೇಳೆ ದಾಳಿ ಮಾಡಲಾಗಿದೆ ಎಂದು ಚೈತ್ರಾ ಆರೋಪಿಸಿದ್ದಾರೆ.

ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಚೈತ್ರಾ ಕುಂದಾಪುರ ಮತ್ತು ತಂಡ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದೆ ಎಂದು ಗುರುಪ್ರಸಾದ್ ಆರೋಪಿಸಿದ್ದಾರೆ. ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಒಬ್ಬರ ಮೇಲೆ ಒಬ್ಬರು ದೂರು ನೀಡಿದ್ದಾರೆ.

"